LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Gadag

ಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆ

 


ಗದಗ: ಮಾಧ್ಯಮ ಮಿತ್ರರು ಕ್ರಿಕೆಟ್ ಲೀಗ್ ಆಡುವ ಉತ್ಸಾಹ ತೋರಿದ್ದು ಹಿರಿಯರನ್ನು ಕಿರಿಯರನ್ನಾಗಿ ಮಾಡುವಂತಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಇದೊಂದು ಉತ್ತಮ ಬೆಳವಣಿಗೆಯಾಗಿದೆ. ಮಾನಸಿಕವಾಗಿ ವಯಸ್ಸಾದಂತೆ ಕಂಡರೂ ಆಟದಲ್ಲಿ ಭಾಗವಹಿಸಿದಾಗ ಆ ವಯಸ್ಸು ಕಾಣುವುದಿಲ್ಲ ಮಾಜಿ ಸಚಿವ, ಶಾಸಕ ಎಚ್. ಕೆ ಪಾಟೀಲ ಅಭಿಪ್ರಾಯಪಟ್ಟರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಗದಗ ಜಿಲ್ಲಾ ಘಟಕವು ನಗರದ ವ್ಹಿಡಿಎಸ್ ಮೈದಾನದಲ್ಲಿ ಆಯೋಜಿಸಿದ್ದ ‘ಗದಗ ಮೀಡಿಯಾ ಕ್ರಿಕೆಟ್ ಲೀಗ್’ನ ಫೈನಲ್ ಪಂದ್ಯದಲ್ಲಿ ರೂರಲ್ ಕಿಂಗ್ಸ್ ಹಾಗೂ ನೈಟ್ ರೈಡರ್ಸ್ ತಂಡಗಳ ನಡುವೆ ನಡೆದ ಪಂದ್ಯಕ್ಕೆ ಟಾಸ್ ನೀಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಇತ್ತೀಚೆಗೆ ಕ್ರಿಕೆಟ್ ಬಹಳಷ್ಟು ಜನಪ್ರಿಯವಾಗುತ್ತಿದೆ. ಆಡುವ ಸಂದರ್ಭದಲ್ಲಿ ಆಟಗಾರರು ಹಾಕಿಕೊಳ್ಳುವ ಸಮವಸ್ತ್ರದಿಂದ ತಮಗಷ್ಟೆ ಅಲ್ಲದೇ ತಮ್ಮ ಮಕ್ಕಳಿಗೆ ಹಾಗೂ ಮೊಮ್ಮಕ್ಕಳಿಗೆ ಹೆಚ್ಚು ಸಂತೋಷ ನೀಡುತ್ತದೆ. ಇದೊಂದು ರೀತಿ ಮನರಂಜನೆ ಆಗಿದೆ. ಮೈದಾನದಲ್ಲಿ ತೋರಿಸುವ ಕ್ರೀಡಾ ಮನೋಭಾವ ವೃತ್ತಿಯಲ್ಲೂ ಹೆಚ್ಚು ತೋರುವಂತಾಗಲಿ. ಕ್ರೀಡೆಗಳಿಂದ ಹೆಚ್ಚು ಎತ್ತರಕ್ಕೆ ಹೋಗಲು ಎಲ್ಲರಿಂದಲೂ ಸಾಧ್ಯವಿದೆ ಎಂದರು.
ಸಮಾಜವನ್ನು ತಿದ್ದುವ ಬಹುದೊಡ್ಡ ಶಕ್ತಿಯಾಗಿರುವ ನೀವು ಈ ಮೈದಾನದಲ್ಲಿ ವಿಶೇಷ ಗುಣಗಳನ್ನು ಹೊತ್ತೊಯ್ಯುವ ಅವಕಾಶವಿದೆ. ಕ್ರಿಕೆಟ್ ಆಯೋಜನೆ ಮಾಡುವುದು ಬಹುದೋಡ್ಡ ಕೆಲಸವಾಗಿದೆ. ಕ್ರೀಡೆಗಳಿಂದ ಇನ್ನೂ ಹೆಚ್ಚು ಉತ್ಸಾಹ, ಹುರುಪು ಬರುವಂತಾಗಲಿ. ಟೂರ್ನಾಮೆಂಟ್ ಆಯೋಜಿಸಲು ಶ್ರಮಿಸಿದ ಕಾನಿಪ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ನೇತೃತ್ವದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿ ಹಾರೈಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಹೆಬ್ಬಳ್ಳಿ ಅವರು ಮಾತನಾಡಿ, ಜಿಲ್ಲೆಯ ಕಾರ್ಯನಿರತ ಪತ್ರಕರ್ತರಿಗಾಗಿ ಜಿಲ್ಲಾ ಸಂಘದ ವತಿಯಿಂದ ಇದೇ ಮೊದಲ ಬಾರಿಗೆ ಕ್ರಿಕೆಟ್ ಲೀಗ್ ಆಯೋಜನೆ ಮಾಡಿದೆ. ಲೀಗ್‌ನಲ್ಲಿ ವಿಜೇತ ತಂಡಗಳಿಗೆ ಜಿಲ್ಲಾ ಸಂಘದಿAದ ಮೊದಲ ಬಹುಮಾನವಾಗಿ 5,555 ರೂ. ನಗದು ಹಾಗೂ ಟ್ರೋಫಿ ಹಾಗೂ ದ್ವಿತೀಯ ಬಹುಮಾನವಾಗಿ 3,333 ರೂ. ನಗದು ಮತ್ತು ಟ್ರೋಫಿ ನೀಡಲಾಗುತ್ತಿದೆ.
ಲೀಗ್‌ಗೆ ನಾಲ್ಕೂ ತಂಡಗಳ ಮಾಲೀಕರು ಮತ್ತು ಸಂಘದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರ ಸಹಕಾರದಿಂದ ಸಾಕಾರಗೊಂಡಿದೆ ಎಂದು ರಾಜು ಹೆಬ್ಬಳ್ಳಿ ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ, ರವಿಕಾಂತ ಅಂಗಡಿ, ದೇವಪ್ಪ ಲಿಂಗದಾಳ, ಕಾನಿಪದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ದೊಡ್ಡೂರ, ರಾಜ್ಯ ಕಾರ್ಯಕಾರಣಿ ಸದಸ್ಯ ಅರುಣಕುಮಾರ ಹಿರೇಮಠ,  ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಅಶೋಕ ಮಂದಾಲಿ, ಸಿದ್ದು ಪಾಟೀಲ, ತಂಡಗಳ ಮಾಲೀಕರಾದ ಜಗದೀಶ್ ಎಸ್ ಪಿ, ಅಜಿತ ಹೊಂಬಾಳಿ, ಎಚ್ ಎಂ ಶರೀಫನವರ್, ಆನಂದ ಸಾಲಿಗ್ರಾಮ, ಆನಂದಯ್ಯ ವಿರಕ್ತಮಠ, ಅನಂತ ಕಾರ್ಕಳ, ಟಿ. ಎನ್ ಬಾಂಡಗೆ ಸುನಿಲ್ ತೆಂಬದಮನಿ, ಅನಿಲ ತೆಂಬದಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
===

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 *ಕಾರ್ಯಕ್ರಮದಲ್ಲಿ ಡಾ. ರಾಮಕೃಷ್ಣ ರೆಡ್ಡಿಯವರಿಗೆ ಗೌರವ, ಸನ್ಮಾನ,,* 15 ವರ್ಷಗಳ ಬಳಿಕ ಮಾರಿಹಾಳದಲ್ಲಿ ಮಹಾಲಕ್ಷ್ಮಿ ಜಾತ್ರೆ: ಜಾತ್ರೆಯ ಸಿದ್ಧತೆ, ಭಕ್ತರ ಅನುಕೂಲಕ್ಕೆ ಅಗತ್ಯ ವ್ಯವಸ್ಥೆ ಕುರಿತು ಲಕ್ಷ್ಮೀ ಹೆಬ್ಬಾಳಕರ್ ಸಭೆನಾಳೆ ಶ್ರೀ ದ್ಯಾಮವ್ವ, ದುರಗಮ್ಮ ದೇವಿಯರ ಅದ್ದೂರಿ ಮೇರವಣಿಗೆ: ರಾಜು ಖಾನಪ್ಪನವರಮಾಧ್ಯಮ ಮಿತ್ರರು ಕ್ರೀಡೆಯಲ್ಲಿ ಭಾಗವಹಿಸಿದ್ದು ಉತ್ತಮ ಬೆಳವಣಿಗೆಕೊಪ್ಪಳ ತಾ.ಪಂ. ಇಒ ಎತ್ತಂಗಡಿಗೆ ಆಗ್ರಹಿಸಿ ಆ. 31ಕ್ಕೆ ಬೃಹತ್ ಪ್ರತಿಭಟನೆಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳಸಪ್ಟೆಂಬರ್ 23 ರವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ: ಜಿಲ್ಲೆಯಲ್ಲಿ 13,53,946 ಮತದಾರರ ಕರಡು ಪಟ್ಟಿ ಪ್ರಕಟ30ರಂದು  ಶ್ರೀ ಬಾಳುಮಾಮಾ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ನಿತ್ಯ ನೇಮ ಉಪಾಷಣೆಯಿಂದ ನೆಮ್ಮದಿ ಜೀವನ.....ಪ್ರಭುಜಿ   ಮಹಾರಾಜ.ಮಳೆ ದೇವರು ಕೊಡುತ್ತಾನೆ, ಅದರ ಹಂಚಿಕೆ ಸರ್ಕಾರ ಮಾಡಬೇಕು  : ಮಹಾಂತೇಶ ದೊಡ್ಡಗೌಡರ