ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಫೆ.25 ತಾಲ್ಲೂಕಿನ ಸಂಗನಕಲ್ಲು ಗ್ರಾಮದ 2ನೇ ವಾರ್ಡ್ನ ಶಿವಬಸಮ್ಮ ಕಾಲೋನಿಯ ನಿವಾಸಿ ಹನುಮನಗೌಡ ಎನ್ನುವ 35 ವರ್ಷದ ವ್ಯಕ್ತಿಯು ಫೆ.22 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಎಂದು ಸಬ್ ಇನ್ಸ್ ಪೆಕ್ಟರ್ ಮನವಿ ಮಾಡಿದ್ದಾರೆ.
ಕಾಣೆಯಾದ ವ್ಯಕ್ತಿಯ ಚಹರೆ: ಎತ್ತರ 5.6 ಅಡಿ, ದುಂಡು ಚುಕ್ಕಿ ಚುಕ್ಕಿ ಮುಖ, ಕೆಂಪು ಮೈಬಣ್ಣ, ದೃಢವಾದ ಮೈಕಟ್ಟು, ಕಪ್ಪು ಕೂದಲು, ಬಲಗಾಲು ಮೀನುಗಂಡೆಯ ಮೇಲೆ ಕಪ್ಪು ಮಚ್ಚೆ ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ಕಂದು ಬಣ್ಣದ ಹಾಪ್ ಟೀ ಶರ್ಟ್, ಟೀಶರ್ಟನ ಬಲತೋಳಿಗೆ 3 ಅಂತ ಅಚ್ಚೆ ಇರುತ್ತದೆ. ಕಂದು ಬಣ್ಣದ ನೈಟ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಅಥವಾ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆ ದೂ.08392276461, ಮೊ.9480803049 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.