Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧ್ಯಯನ ಇಲ್ಲದೇ ಮೀಸಲಾತಿ ವರ್ಗೀಕರಿಸದಿರಲು ಆಗ್ರಹ: ಮೀಸಲಾತಿ ಸಂರಕ್ಷಣಾ ಹೋರಾಟ ಸಮಿತಿ


ಧಾರವಾಡ: ರಾಜ್ಯ ಸರ್ಕಾರ ಸರಿಯಾದ ಅಧ್ಯಯನ ಇಲ್ಲದೇ  ಪರಿಶಿಷ್ಟರ ಮೀಸಲಾತಿಯನ್ನು ವರ್ಗಿಕರಿಸಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕೊರಮ, ಕೊರಚ, ಭೋವಿ, ಬಂಜಾರಾ, ಭಜಂತ್ರಿ, ಡೊಂಬರ ಮೀಸಲಾತಿ ಸಂರಕ್ಷಣಾ ಹೋರಾಟ ಸಮಿತಿ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.


ಪರಿಶಿಷ್ಟ ಸಮುದಾಯಗಳಲ್ಲಿನ ಜಾತಿಗಳ ಮಾಹಿತಿ ಅವೈಜ್ಞಾನಿಕವಾಗಿರುವುದಾಗಿ ಹಿಂದಿನಿಂದ ಹೇಳಿಕೊಂಡು ಬಂದರೂ ರಾಜಕೀಯವಾಗಿ, ಶೈಕ್ಷಣಿಕವಾಗಿ ಸಾಕಷ್ಟು ಲಾಭಗಳನ್ನು ಪಡೆದಿರುವ ಪ್ರಬಲ ಪರಿಶಿಷ್ಟರು ತಮ್ಮ ಬೇರುಗಳನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡು ಮುಂದಡಿ ಇಡುವ ದಿಸೆಯೊಳಗೆ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನಕ್ಕೆ ತರಲು ತಮ್ಮ ರಾಜಕೀಯ ಪ್ರಾಬಲ್ಯವನ್ನು ಬೆಳೆಸಿಕೊಳ್ಳುತ್ತಿದ್ದಾರೆ. ಇದೇ ಸಮುದಾಯದಲ್ಲಿನ 99 ಜಾತಿಗಳ ಪರಿಸ್ಥಿಯ ಬಗ್ಗೆ ಕಿಂಚಿತ್ತೂ ಕಾಳಜಿ ತೋರಿಸಿರುವ ಯಾವ ಕುರುಹುಗಳು ಪ್ರಬಲ ಪರಿಶಿಷ್ಟರ ನಡುವಳಿಕೆಯಲ್ಲಿ ಕಾಣುತ್ತಿಲ್ಲ. ರಾಜಕೀಯ ಲಾಭದ ಮೂಲಕ ಎಲ್ಲವನ್ನು ಪಡೆದುಕೊಳ್ಳುವ ಹುನ್ನಾರ, ಇವರ ನಡುವಳಿಕೆಯಿಂದ ವ್ಯಕ್ತವಾಗುತ್ತಿದೆ.


99 ಜಾತಿಗಳಡಿಯಲ್ಲಿ ಬರುವ ಸಮುದಾಯಗಳ ಸಾಮಾಜಿಕ ಸ್ಥಿತಿ, ಶೈಕ್ಷಣಿಕ ಸ್ಥಿತಿ ಮತ್ತು ರಾಜಕೀಯ ಸ್ಥಿತಿಗಳ ಪರಿಕಲ್ಪನೆ ಯಾವ ವರದಿಯಲ್ಲಿಯೂ ವ್ಯಕ್ತವಾಗಿರುವುದಿಲ್ಲ. ಈ ಸಮುದಾಯಗಳು ತಾವು ಈ ದೇಶದ ಪ್ರಜೆಗಳು ಹೌದು ಅಥವಾ ಇಲ್ಲವೋ ಎನ್ನುವ ದುಸ್ಥಿತಿಯನ್ನು ಹೊಂದಿದವರಾಗಿದ್ದಾರೆ. ಇವರ ಈ ಅಳಲನ್ನು ಅರಿಯುವುದು ಹೇಗೆ ಮತ್ತು ಇದಕ್ಕೆ ಪರಿಹಾರ ಒದಗಿಸುವುದು ಹೇಗೆ? ಹೀಗಾಗಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಸರಿಯಾದ ಅಧ್ಯಯನ ಇಲ್ಲದೇ ಪರಿಶಿಷ್ಟರ ಮೀಸಲಾತಿಯನ್ನು ವರ್ಗೀಕರಿಸಬಾರದು ಎಂದು ಆಗ್ರಹಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ