Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ಸಾಹಿತ್ಯ ಪರಿಷತ್ತಿನ ಪರಿಮಳ ಪ್ರತಿ ಗ್ರಾಮಗಳಿಗೂ ಪಸರಿಸಲಿ - ಎನ್.ಆರ್.ಠಕ್ಕಾಯಿ

* ಪರಿಷತ್ತಿನ ಸದಸ್ಯರಾಗುವುದು ಹೆಮ್ಮೆಯ ಸಂಗತಿ


ಬೆಳಗಾವಿ: ಸಮಸ್ತ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಪರಿಮಳ ಪ್ರತಿ ಗ್ರಾಮಗಳಿಗೂ ಪಸರಿಸಲಿ ಎಂದು ಬೈಲಹೊಂಗಲ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಎನ್.ಆರ್.ಠಕ್ಕಾಯಿ ಹೇಳಿದರು. ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಸಂಸ್ಥಾಪನಾ ದಿನ ಅಂಗವಾಗಿ ಹಮ್ಮಿಕೊಂಡ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಮೈಸೂರು ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರ ಚಾಲನೆಯಿಂದ 1915 ರಲ್ಲಿ ಸ್ಥಾಪಿತವಾಗಿ ಇಂದು 111 ರ ಸಂಭ್ರಮದಲ್ಲಿರುವ ಪರಿಷತ್ತಿನ ಸದಸ್ಯರಾಗುವುದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದರು. ಕನ್ನಡ ನಾಡು, ನುಡಿ, ಸಾಹಿತ್ಯ, ಕಲೆ, ಸಂಸ್ಕೃತಿಗಳ ಸಂರಕ್ಷಣೆಗಾಗಿ ಹುಟ್ಟಿಕೊಂಡ ಸಂಸ್ಥೆಗೆ ಮೈಸೂರಿನ ಅಂದಿನ ದಿವಾನರಾದ ಸರ್. ಎಂ.ವಿಶ್ವೇಶ್ವರಯ್ಯ ಮತ್ತು ಸರ್ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆಯೂ ಅಪಾರವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ ರಾಮದುರ್ಗ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷರಾದ ಪಾಂಡುರಂಗ ಜಟಗನ್ನವರ ಮಾತನಾಡಿ ಗಡಿಭಾಗಗಳಲ್ಲಿ ಕನ್ನಡವನ್ನು ಬಳಸಿ, ಉಳಿಸುವ ಹೊಣೆಗಾರಿಕೆ ನಮ್ಮದಾಗಿದೆ ಎಂದರು. ಸುಮಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವುದು ನಮಗೆಲ್ಲ ಅಭಿಮಾನದ ವಿಷಯ ಎಂದು ಅವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಂ.ವಾಯ್.ಮೆಣಸಿನಕಾಯಿ ಮಾತನಾಡಿ ಕನ್ನಡ ರತ್ನಕೋಶ ನಿಘಂಟು ಪ್ರತಿಯೊಬ್ಬರ ಮನೆಯಲ್ಲಿ ಇರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.


ಮೂಡಲಗಿ ಕಸಾಪ ತಾಲೂಕಾಧ್ಯಕ್ಷ ಡಾ. ಸಂಜಯ ಸಿಂಧಿಹಟ್ಟಿ, ಗೋಕಾಕ ಕಸಾಪ ತಾಲೂಕಾಧ್ಯಕ್ಷೆ ಭಾರತಿ ಮದಬಾವಿ, ಕಿತ್ತೂರು ಕಸಾಪ ತಾಲೂಕಾಧ್ಯಕ್ಷ ಎಸ್.ಬಿ.ದಳವಾಯಿ, ನಿಪ್ಪಾಣಿ ಕಸಾಪ ತಾಲೂಕಾಧ್ಯಕ್ಷ ಈರಣ್ಣ ಶಿರಗಾವಿ, ಬೆಳಗಾವಿ ಕಸಾಪ ತಾಲೂಕಾಧ್ಯಕ್ಷ ಸುರೇಶ ಹಂಜಿ, ಯರಗಟ್ಟಿ ಕಸಾಪ ತಾಲೂಕಾಧ್ಯಕ್ಷ ತಮ್ಮಣ್ಣ ಕಾಮನ್ನವರ, ರಾಯಬಾಗ ಕಸಾಪ ತಾಲೂಕಾಧ್ಯಕ್ಷ ಆರ್.ಎಂ.ಪಾಟೀಲ್, ಚಂದ್ರಶೇಖರ ಅರಭಾವಿ, ವಿ.ಜಿ.ಅಂತ್ರೆ ಉಪಸ್ಥಿತರಿದ್ದರು. ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಸುನಿಲ್ ಹಲವಾಯಿ ಸ್ವಾಗತಿಸಿ ನಿರೂಪಿಸಿದರು. ಶಿವಾನಂದ ತಲ್ಲೂರು ವಂದಿಸಿದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ