LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಪ್ರಜಾಪ್ರಭುತ್ವದ ಆತ್ಮ ಶ್ರೇಷ್ಠ ಸಂವಿದಾನವಾಗಿದೆ-ದಮ್ಮೂರಮಠ




ತಾಳಿಕೋಟೆ,  ಪ್ರಜಾಪ್ರಭುತ್ವದ ಆತ್ಮ ನಮ್ಮ ಶ್ರೇಷ್ಠ ಸಂವಿಧಾನವಾಗಿದೆ  ನಮ್ಮ ದೇಶದ ಪ್ರಜಾಪ್ರಭುತ್ವ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮುದ್ದೇಬಿಹಾಳ ಕ್ಷೇತ್ರ ಸಮನ್ವಯ ಅಧಿಕಾರಿ ಆರ್.ಬಿ. ದಮ್ಮೂರಮಠ  ಹೇಳಿದರು. 
      ಮಂಗಳವಾರರಂದು ಪಟ್ಟಣದ ಶ್ರೀ ಸಂಗಮೇಶ್ವರ ಸಭಾಭವನದಲ್ಲಿ ತಾಲೂಕ ಆಡಳಿತ, ತಾಲೂಕ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ತಾಳಿಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ತು ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ದೇಶದ ಬದ್ರತೆಗೆ ಸಂವಿದಾನ ಅಡಿಪಾಯವಾಗಿದೆ ಸಮಾನತೆಯ ಸಂದೇಶದೊಂದಿಗೆ ಪ್ರತಿಯೊಬ್ಬರಿಗೂ ಸಮಾನ ಹಕ್ಕಿನೊಂದಿಗೆ ಜೀವನ ಸಾಗಿಸಲಿಕ್ಕೆ ದಾರಿದೀಪವಾಗಿದೆ ಎಂದರು.
      ಇನ್ನೋರ್ವ ನ್ಯಾಯವಾದಿ ಪ್ರಭಾಕರ ಗುಡಗುಂಟಿ ಅವರು ಮಾತನಾಡಿ ನಮ್ಮ ಭಾರತ ದೇಶದ ಪ್ರಜಾಪ್ರಭುತ್ವವು ಅತ್ಯಂತ ಶಕ್ತಿಶಾಲಿಯಾಗಿದೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ಅತ್ಯಂತ ಶ್ರೇಷ್ಠವಾದಂತಹ ಗ್ರಂಥವಾಗಿದೆ. ಅದರಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳನ್ನು ನೀಡಲಾಗಿದೆ. ಜಗತ್ತಿನಲ್ಲಿ ಅದೆಷ್ಟು ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸರಿಯಾಗಿ ಅಳವಡಿಸಿಕೊಳ್ಳದೆ ಹಲವಾರು ಸಮಸ್ಯೆಗಳು ಎದುರಿಸುತ್ತೇವೆ ಆದರೆ ಭಾರತ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿ ಇತರರಿಗೆ ಮಾದರಿಯಾಗಿದೆ. ನಾವು ಇದನ್ನು ಇನ್ನಷ್ಟು ಬಲಿಷ್ಠ ಗೊಳಿಸುವ ಕೆಲಸವನ್ನು ಮಾಡಬೇಕಾಗಿದೆ ಎಂದರು. 
     ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸಿಲ್ದಾರ್ ಎಂ ಎಸ್ ಅರಿಕೇರಿ ಅವರು ಇಂದು ವಿದ್ಯಾರ್ಥಿ ಯುವ ಸಮುದಾಯಕ್ಕೆ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನದ ಕುರಿತು ತಿಳುವಳಿಕೆ ಮೂಡಿಸುವಂತಹ ಕೆಲಸ ನಾವೆಲ್ಲರೂ ಒಗ್ಗೂಡಿ ಮಾಡಬೇಕಾದ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
      ಶಿಕ್ಷಕ ಸಂತೋಷ ಜಾಮಗೊಂಡಿ ಪ್ರಜಾಪ್ರಭುತ್ವದ ಮಹತ್ವದ ಕುರಿತು ವಿಶೇಷ ಉಪನ್ಯಾಸ ನೀಡಿದರು.    
       ಈ ಸಮಯದಲ್ಲಿ ನಿಲಯ ಪಾಲಕ ಎನ್.ವಿ.ಕೋರಿ ಪ್ರಾಸ್ತಾವಿಕವಾಗಿ ಮಾತಾಡಿದರು. 
      ಸಮಾಜ ಕಲ್ಯಾಣ ಇಲಾಖೆ ಮುದ್ದೇಬಿಹಾಳ ಕಚೇರಿ ಅಧೀಕ್ಷಕ ಶಿವಲಿಂಗಪ್ಪ ಹಚಡದ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು. 
     ಕಾರ್ಯಕ್ರಮದಲ್ಲಿ ತಾಪಂ ಇಓ ಅನಸೂಯಾ ಚಲವಾದಿ, ಸರ್ಕಾರಿ ಪ.ಪೂ. ಕಾಲೇಜ ಪ್ರಾಚಾರ್ಯ ಎಸ್.ವಿ.ಸಾವಳಸಂಗ, ಎಂ ಕೆ ಎಸ್ ಕರ್ಜಗಿ ಲಾ ಕಾಲೇಜ್  ಪ್ರಾಚಾರ್ಯೆ ಅನಾಮಿಕಾ ಭರತ್ ಅಗರವಾಲ, ದಲಿತ ಮುಖಂಡರಾದ ಗೋಪಾಲ ಕಟ್ಟಿಮನಿ, ಬಸ್ಸು ಮಾದರ, ಸಮಾಜ ಕಲ್ಯಾಣ ಇಲಾಖೆಯ ಎಸ್ ಎನ್ ಮಲ್ಲಾಡೆ, ಎಸ್‌ಎಂ ಕಲಬುರ್ಗಿ, ಎಂ ಎಸ್ ತಾಳಿಕೋಟಿ, ರೇಣುಕಾ ಪಾಟೀಲ, ವಿಶ್ವನಾಥ ಮಾಳಗಿ, ಮಂಜುನಾಥ ನರಸಳಗಿ, ರಾಮನಗೌಡ ಬಂಟನೂರ, ರಮೇಶ ಸಂಗಮ, ಶೇಕು ಲಮಾಣಿ, ರವಿ ಉಂಡಿಗೇರ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
     ಶಿಕ್ಷಕ ಬಿ.ಐ.ಹಿರೇಹೊಳಿ ನಿರೂಪಿಸಿ ವಂದಿಸಿದರು. 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್