LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bagalkot

ವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರ

ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ | ವಿವಿಧ ರಾಜಕೀಯ ಪ್ರತಿಧಿನಿಗಳೊಂದಿಗೆ ಸಭೆ

 

 

 

ಬಾಗಲಕೋಟೆ : ಸೆಪ್ಟೆಂಬರ ೧೯ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-೨೦೨೬ರ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ನೋಂದಣಿ ಅಭಿಯಾನದ ಕಾರ್ಯಚಟುವಟಿಕೆಗಳನ್ನು ಮತದಾರರ ಪಟ್ಟಿಯ ವೀಕ್ಷಕರಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಶನಿವಾರ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ನಗರದ ವಿದ್ಯಾಗಿರಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಲಾದ ಮತಗಟ್ಟೆ ನಂ.೯೨ಕ್ಕೆ ಭೇಟಿ ನೀಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ವಿಶೇಷ ನೋಂದಣಿ ಅಭಿಯಾನದಡಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಕುರಿತು ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಅರ್ಹ ಮತದಾರರ ಹೆಸರು ಸೇರ್ಪಡೆ, ಮತದಾರರ ಪಟ್ಟಿಯಲ್ಲಿನ ಹೆಸರು, ವಿಳಾಸ ಸೇರಿದಂತೆ ವಿವರಗಳ ತಿದ್ದುಪಡಿ ಹಾಗೂ ಅರ್ಹವಲ್ಲದ ಅಥವಾ ಸ್ಥಳಾಂತರಗೊಂಡ ಮತದಾರರ ವಿವರಗಳ ಪರಿಶೀಲನೆ ಸೇರಿದಂತೆ ವಿವಿಧ ಪ್ರಕ್ರಿಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ವಿಶೇಷವಾಗಿ ೧೮ ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಕಾರ್ಯಕ್ಕೆ ಆದ್ಯತೆ ನೀಡುವಂತೆ ಹಾಗೂ ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳುವಂತೆ ಹಾಗೂ ಅಗತ್ಯವಿದ್ದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸುವಂತೆ ಜಾಗೃತಿ ಮೂಡಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಮತದಾರರ ಪಟ್ಟಿಯ ವೀಕ್ಷಕರಾದ ಕ್ಯಾಪ್ಟನ್ ಕೆ.ರಾಜೇಂದ್ರ ಅವರು, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಮಾಹಿತಿ ಪಡೆದುಕೊಂಡರು. ಯುವ ಮತದಾರರ ನೋಂದಣಿಗೆ ಎಲ್ಲ ರಾಜಕೀಯ ಪಕ್ಷಗಳು ಸಹಕಾರ ಅಗತ್ಯವಾಗಿದೆ. ತಮ್ಮ ಹಂತದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಲಿ ಎಂದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯಗಳು, ಸಲಹೆಗಳು ಹಾಗೂ ಗಮನಕ್ಕೆ ಬಂದಿರುವ ವಿಷಯಗಳನ್ನು ವೀಕ್ಷಕರ ಗಮನಕ್ಕೆ ತಂದರು. ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವುದು, ಅರ್ಹ ಮತದಾರರಿಗೆ ನೋಂದಣಿಗೆ ಅವಕಾಶ ಕಲ್ಪಿಸುವುದು ಹಾಗೂ ನಿಯಮಾನುಸಾರ ಆಕ್ಷೇಪಣೆ ಮತ್ತು ತಿದ್ದುಪಡಿಗಳಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆಯಿತು.

ಜಿಲ್ಲೆಯಲ್ಲಿ ವಿಶೇಷ ಮತದಾರರ ನೋಂದಣಿ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಚುನಾವಣಾ ಅಧಿಕಾರಿಗಳು ಕೈಗೊಂಡಿರುವ ಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ತಹಶೀಲ್ದಾರ ವಾಸುದೇವ ಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ಮುಖಂಡರು ಉಪಸ್ಥಿತರಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದಲಿತರ ಮೇಲಿನ ದೌರ್ಜನ್ಯ, ಹಲ್ಲೆ, ಕೊಲೆ, ಸಾಮಾಜಿಕ ಬಹಿಷ್ಕಾರಕ್ಕೆ ಕಡಿವಾಣ ಹಾಕಿ : ಶ್ರೀನಿವಾಸ್ ಕರ್ಚೇಡ್ ನಬಿ ರಸೂಲ್ ಹತ್ಯೆ ಪ್ರಕರಣ: ಸಮಗ್ರ ತನಿಖೆಗೆ ಆರಿಫಾ ಆಗ್ರಹರಂಜಿಸಿದ ಯಾರಿಗೆ ಬೇಕು ನಿನ್ನ ಕವಿತೆ ನಾಟಕಡಾ.ಬಿ.ಆರ್.ಅಂಬೇಡಕರ್ ಸಂಘಕ್ಕೆ 10 ಲಕ್ಷ ರೂ.ಗಳ ದೇಣಿಗೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿವಿಶೇಷ ನೋಂದಣಿ ಅಭಿಯಾನ ಪರಿಶೀಲಿಸಿದ ವೀಕ್ಷಕ ಕ್ಯಾಪ್ಟನ್ ಕೆ.ರಾಜೇಂದ್ರಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸೆ.28ರಂದು ಬಂದ್: ಜ್ಯೋತಿಕುಮಾರ ಪಾಟೀಲದ್ರಾಕ್ಷಿ ಬೆಳೆಗಾರರಿಗೆ  ೭೯.೯೭ ಕೋಟಿ ವಿಮಾ ಪರಿಹಾರ, ೮ ಸಾವಿರ ರೈತರಿಗೆ ಅನುಕೂಲ,ಸಚಿವ ಲಕ್ಷ್ಮಣ ಸವದಿ ಪ್ರಯತ್ನಕ್ಕೆ ರೈತ ಮುಖಂಡ ಶೇಖರ ನೇಮಗೌಡ ಅಭಿನಂದನೆಪ್ರಜಾಸೇವಾ ಆಂದೋಲನ ಮೂರು ತಿಂಗಳಲ್ಲಿ ಎಲ್ಲ ತಾಲೂಕುಗಳಲ್ಲೂ ಆಯೋಜನೆ: ಸಚಿವ ಸತೀಶ್ ಜಾರಕಿಹೊಳಿಕಾಗವಾಡ ತಾಲೂಕು ಬರಪೀಡಿತ ಎಂದು ಘೋಷಿಸಿ:ಜ್ಯೋತಿಕುಮಾರ ಪಾಟೀಲ್ ಆಗ್ರಹ ಘೋಷಿಸದಿದ್ದರೆ ಸೆ.28 ಕ್ಕೆ ಪ್ರತಿಭಟನೆಗೆ ಕರೆಸಹಕಾರ ಸಚಿವ ಲಕ್ಷ್ಮಣ ಸವದಿಯವರ ಮಾರ್ಗದರ್ಶನದಲ್ಲಿ ಕುಡಿಯುವ ನೀರಿಗಾಗಿ ವಿಶೇಷ ಯೋಜನೆ.ಅಧ್ಯಕ್ಷ ದತ್ತಾ ವಾಸ್ಟರ