Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ.೧೨ರಿಂದ ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನಾ ಧರಣಿ



ಬಳ್ಳಾರಿ,ಆ.೦6. ಆಶಾ ಕಾರ್ಯಕರ್ತೆಯರು ಗ್ರಾಮೀಣ ಮತ್ತು ನಗರ ಕೊಳಚೆ ಪ್ರದೇಶದ ಆರೋಗ್ಯದ ಆಶಾಕಿರಣ. ಆರೋಗ್ಯ ಸೇವೆಗಳನ್ನು ಪಡೆಯಲು ಕಷ್ಟಪಡುವ ಗ್ರಾಮೀಣ ಜನತೆಯ, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳ ಯಾವುದೇ ಆರೋಗ್ಯ ಸಂಬAಧಿತ ಬೇಡಿಕೆಗಳಿಗೆ ಆಶಾ ಮೊದಲ ಕರೆ ಕೇಂದ್ರವಾಗಿದೆ. ಜನತೆಯ ಮತ್ತು ಸರ್ಕಾರದ ನಿರೀಕ್ಷೆಯಂತೆ ಆಶಾ ತನ್ನ ಸೇವೆಯಿಂದ ಕಟ್ಟಕಡೆಯ ಜನರನ್ನೂ ಆರೋಗ್ಯವಂತರನ್ನಾಗಿಡಲು ಹಗಲು-ರಾತ್ರಿ ಶ್ರಮಿಸುತ್ತಿರುವರು. ಇವರ ಸೇವೆಗೆ ಸಮುದಾಯದಿಂದ ಸಿಗುವ ಗೌರವಾದರಗಳು ಸಂತಸ ನೀಡಿವೆಯಾದರೂ, ಸೇವೆ ಪಡೆದುಕೊಳ್ಳುವ ನಮ್ಮ ಸರ್ಕಾರಗಳು ಇವರ ಸೇವೆಗೆ ತಕ್ಕ ಪ್ರತಿಫಲ ನೀಡದೆ ನಿರಾಸೆಯಲ್ಲಿರುವಂತೆ ಮಾಡಿವೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ)ದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷಿö್ಮ  ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ, ಇದೇ ೨೦೨೫ ಜನವರಿ ೭ ರಿಂದ ೧೦ನೇ ತಾರೀಖಿನÀವರೆಗೆ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟ ಹೋರಾಟವು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದಿದ್ದು ತಮಗೆ ತಿಳಿದಿದೆ. ರೂ.೧೫,೦೦೦ ನಿಶ್ಚಿತ ಗೌರವಧನಕ್ಕಾಗಿ ಆಗ್ರಹಿಸಿ ನಡೆಸಿದ ಈ ಹೋರಾಟದಲ್ಲಿ ರಾಜ್ಯದ ಸುಮಾರು ೪೦,೦೦೦ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜನವರಿ ೧೦, ೨೦೨೫ ರಂದು ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ, ಮಾನ್ಯ ಮುಖ್ಯಮಂತ್ರಿಗಳು ಸಂಘದ ಪದಾಧಿಕಾರಿಗಳನ್ನು ಕರೆದು ಸಭೆ ಮಾಡಿರುತ್ತಾರೆ. ಈ ಸಭೆಯಲ್ಲಿ ನಮ್ಮೊಂದಿಗೆ ಮಾನ್ಯ ಆರೋಗ್ಯ ಮಂತ್ರಿಗಳು, ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಕೆಳಗಿನಂತೆ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಏಪ್ರಿಲ್ ೨೦೨೫ರಿಂದ ಪ್ರತಿ ತಿಂಗಳು ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಸೇರಿಸಿ ಕನಿಷ್ಟ ರೂ.೧೦,೦೦೦ ಗಳ ಗೌರವಧನವನ್ನು ನೀಡಲಾಗುವುದು. ರೂ.೧೦,೦೦೦ ಹೊರತುಪಡಿಸಿ, ಕಾಂಪೋನೆAಟ್‌ಗಳ ಹೆಚ್ಚುವರಿ ಕೆಲಸದ ಆಧಾರದ ಮೇಲೆ ಹೆಚ್ಚುವರಿ ಇನ್ಸೆಂಟಿವ್ ಕೂಡ ನೀಡಲಾಗುವುದು. ಒಂದು ವೇಳೆ ಯಾರಿಗಾದರೂ ಕಾಂಪೋನೆAಟ್ಸ್ಗಳಿAದ ಕಡಿಮೆ ಮೊತ್ತದ ಪ್ರೋತ್ಸಾಹಧನ ಬಂದಿದ್ದಲ್ಲಿ, ಅಂತಹ ಆಶಾ ಕಾರ್ಯಕರ್ತೆಯರಿಗೆ, ಸರ್ಕಾರವೇ ವ್ಯತ್ಯಾಸದ ಹಣವನ್ನು ಪಾವತಿಸಿ, ರೂ. ೧೦,೦೦೦ ಗ್ಯಾರಂಟಿಯಾಗಿ ದೊರೆಯುವಂತೆ ಕ್ರಮಕೈಗೊಳ್ಳಲಾಗುವುದು. ಈ ಕುರಿತು ಕೂಡಲೇ ಸರ್ಕಾರದಿಂದ ಆದೇಶಿಸಬೇಕು.

ಈ ವರ್ಷದ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಲಾಗುವುದು. ಎಂದು ಭರವಸೆ ನೀಡಲಾಗಿತ್ತು. ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ರೂ.೧೦೦೦ ಹೆಚ್ಚಿಸಿದಂತೆ ೪೨೦೦೦ ಆಶಾ ಕಾರ್ಯಕರ್ತೆಯರಿಗೆ ರೂ.೧೦೦೦ ಹೆಚ್ಚಳ ಮಾಡಬೇಕು.

• ಆದರೆ ಈ ಬಜೆಟ್‌ನಲ್ಲಿ ಕೇವಲ ೧೫೦೦೪ ಆಶಾಗಳಿಗೆ ಕಡಿಮೆ ಇದ್ದ ತಂಡ ಆಧಾರಿತ ಪ್ರೋತ್ಸಾಹಧನ ರೂ.೧೦೦೦ ಮಾತ್ರ ನೀಡಲಾಗಿದೆ.

ಕೆಲವು ಬಹುದಿನಗಳ ಬೇಡಿಕೆಗಳ ಬಗ್ಗೆ ಸೂಕ್ತಕ್ರಮ ಕೈಗೊಳ್ಳಲು ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶಿಸಿರುತ್ತಾರೆ.

ಈ ತೀರ್ಮಾನಗಳನ್ನು ಆರೋಗ್ಯ ಇಲಾಖೆಯ ಮಾನ್ಯ ಆಯುಕ್ತರು ಸರ್ಕಾರದ ಪರವಾಗಿ ಪ್ರತಿಭಟನಾ ಸ್ಥಳ ಫ್ರೀಡಂ ಪಾರ್ಕ್ಗೆ ಆಗಮಿಸಿ ಸಾವಿರಾರು ಆಶಾಗಳ ಮುಂದೆ ಬಂದು ಘೋಷಣೆ ಮಾಡಿದರು. ನಂತರ ಹೋರಾಟ ಹಿಂತೆಗೆದುಕೊಳ್ಳಲಾಯಿತು. ಮಾಧ್ಯಮಗಳಲ್ಲೂ ಕೂಡ ಅಧಿಕೃತವಾಗಿ ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿರುತ್ತಾರೆ. ಆಡಳಿತ ಪಕ್ಷದ ಹಲವಾರು ಸಚಿವರುಗಳು, ಶಾಸಕರು ಈ ಬಗ್ಗೆ ಪೋಸ್ರ‍್ಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಆದರೆ ನೋವಿನ ವಿಷಯವೆಂದರೆ ಇಲ್ಲಿಯವರಗೆ ೭ ತಿಂಗಳು ಕಳೆದರೂ ಈ ಕುರಿತು ಸ್ಪಷ್ಟ ಆದೇಶ ಹೊರಬಿದ್ದಿಲ್ಲ.

ಮತ್ತೊಂದೆಡೆ, ಆಶಾ ಕಾರ್ಯಕರ್ತೆಯರಿಗೆ ಇತ್ತೀಚಿಗೆ ಇಲಾಖೆಯಿಂದ ಆತಂಕ ಮೂಡಿಸುವ ಆದೇಶಗಳನ್ನು ಮಾಡಿದ್ದು,  ಆದರೆ ಸೂಕ್ತ ಪರಿಹಾರ ನೀಡಿಲ್ಲ ಎಂದು ಹೇಳಿದರು.

ಆಶಾಗಳಲ್ಲಿಯೇ ಒಬ್ಬರನ್ನು ಕಳೆದ ೧೦ ವರ್ಷಗಳಿಂದ ೨೦ ಆಶಾಗಳಿಗೆ ಒಬ್ಬರಂತೆ ಸುಮರು ೨೦೦೦ ಸುಗಮಕಾರರಾಗಿ ಕೆಲಸಕ್ಕೆ ಪಡೆದುಕೊಂಡು ಧಿಡೀರನೆ ತೆಗೆದು ಹಾಕಿರುವರು. ೬೦ ವರ್ಷ ವಯಸ್ಸಿನ ಆಶಾ ಕಾರ್ಯಕರ್ತೆಯರಿಗೆ ಧಿಡೀರನೆ ತೆಗೆದು ನಿವೃತ್ತಿ ಮಾಡಿರುತ್ತಾರೆ. ೧೭ ವರ್ಷದಿಂದ ಸೇವೆ ಮಾಡಿದ ಈ ಆಶಾಗೆ ಯಾವುದೇ ಪರಿಹಾರ ನೀಡದೆ ಬೀದಿಗೆ ತಳ್ಳಿರುವರು.

ಈಗ ಕಾರ್ಯ ನಿರ್ವಹಿಸುವ ಸುಮಾರು ೪೧೦೦೦ ಆಶಾಗಳಿಗೆ ಅವರ ಕೆಲಸದ ಮೌಲ್ಯಮಾಪನ ಮಾಡುವ ಆದೇಶ ಹೊರಡಿಸಿ ವಿವಿಧ ರೀತಿಯಲ್ಲಿ ಮೌಲ್ಯಮಾಪನ ಮಾಡಿಸುತ್ತಿದ್ದಾರೆ. ಮೌಲ್ಯಮಾಪನದ ಮಾದರಿಯನ್ನು ಸಂಘದಿAದ ಸಂಪೂರ್ಣವಾಗಿ ವಿರೋಧಿಸುತ್ತೇವೆ. ಏಕೆಂದರೆ ಇಲ್ಲಿ

ಆಶಾ ಆನ್ಲೆöÊನ್ ದಾಖಲಾತಿಯನ್ನು (ಆಶಾ ಸಾಫ್ಟ್) ಪರಿಶೀಲನೆಗೆ ತೆಗೆದುಕೊಳ್ಳಲಾಗಿದೆ. ಈಗಾಗಲೇ ಈ ಆನ್ಲೆöÊನ್ ದಾಖಲಾತಿಯು ಸರಿಯಾಗಿ ದಾಖಲಾಗದಿರುವ ಬಗ್ಗೆ, ವೆರಿಫೈ ಮಾಡದಿರುವ ಬಗ್ಗೆ, ಹಲವಾರು ತಾಂತ್ರಿಕ ಸಮಸ್ಯೆಗಳ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ಸಂಘದಿAದ ಹೋರಾಡುತ್ತಲೇ ಇದ್ದೇವೆ. ಈಗ ಇದನ್ನು ಮಾದರಿಯಾಗಿ ಇಟ್ಟುಕೊಂಡಲ್ಲಿ ತಪ್ಪು ಮಾಹಿತಿಯಿಂದ ಆಶಾಗಳನ್ನು ಕೈಬಿಡುವಂತಾಗುತ್ತದೆ. ಈಗಾಗಲೇ ರಾಜ್ಯದ

ಆಶಾಗಳು ಕೋಟ್ಯಂತರ ರೂ. ಗಳ ನÀಷ್ಟವನ್ನು ಈ ಆನ್ಲೆöÊನ್ ದಾಖಲಾತಿಯಿಂದ ಅನುಭವಿಸುತ್ತಿರುವರು. ಇದರಿಂದ ಕೆಲಸ ಕಳೆದುಕೊಳ್ಳುವ ಆತಂಕವನ್ನು ಅನುಭವಿಸುತ್ತಿರುವರು.

ಜನಸಂಖ್ಯೆ ವಿಂಗಡಣೆಯನ್ನು ಈಗಾಗಲೇ ಅಲ್ಲಿಯ ಭೌಗೋಳಿಕರಣಕ್ಕೆ ತಕ್ಕಂತೆ ವಿಂಗಡಿಸಿದ್ದಾರೆ. ಮತ್ತಷ್ಟು ಜನಸಂಖ್ಯೆ ಹೆಚ್ಚಿಸಿದಲ್ಲಿ ಆಶಾಗಳಿಗೆ ಕಾರ್ಯನಿರ್ವಹಿಸಲು ತೊಂದರೆ ಆಗುತ್ತದೆ. ೩-೪ ಹಳ್ಳಿಗಳು ಬಂದರೆ ಕಾರ್ಯನಿರ್ವಹಿಸಲು ಕಷ್ಟವಾಗುತ್ತದೆ. ಇದರಿಂದ ಆಶಾಗಳಿಗೆ ಆತಂಕ ಸೃಷ್ಟಿಯಾಗಿದೆ.

ಮುಖ್ಯಮಂತ್ರಿಗಳು ಕಳೆದ ೭ ತಿಂಗಳ ಹಿಂದೆ ತೀರ್ಮಾನಿಸಿ, ಘೋಷಿಸಿದ ಆದೇಶಗಳನ್ನು ಕೂಡಲೇ ಮಾಡಬೇಕೆಂದು ಮತ್ತು ಕೆಳಗಿನ ಹಕ್ಕೊತ್ತಾಯಗಳಿಗೆ ಆಗ್ರಹಿಸಿ, ರಾಜ್ಯದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿರುತ್ತಾರೆ. ಈ ಮುಂದೆಯೂ ಆಶಾ ಕಾರ್ಯಕರ್ತೆಯರು ಉನ್ನತ ಹಂತದ ಹೋರಾಟಕ್ಕೆ ಅಣಿಯಾಗಿ ದಿನಾಂಕ: ೧೨,೧೩,೧೪ ಆಗಸ್ಟ್ ೨೦೨೫ ಮೂರು ದಿನಗಳಂದು ರಾಜ್ಯವ್ಯಾಪಿ ಜಿಲ್ಲಾ ಮಟ್ಟದ ಅಹೋರಾತ್ರಿ ಪ್ರತಿಭಟನಾ ಧರಣಿ ನಡೆಸಿ ಸರ್ಕಾರ “ಮಾತುಕೊಟ್ಟಂತೆ ನಡೆದುಕೊಳ್ಳಬೇಕೆಂದು” ಈ ಮೂಲಕ ಆಗ್ರಹಿಸಲು ಮುಂದಾಗಿರುವರು. ಹಾಗೆಯೇ ಎಂದಿನAತೆ ಎಲ್ಲಾ ಆಶಾ ಕಾರ್ಯಕರ್ತೆಯರು ಹೋರಾಟದ ಯಶಸ್ಸಿಗೆ ಒಗ್ಗಟ್ಟಿನಿಂದ ಸಕ್ರಿಯವಾಗಿ ಭಾಗಿಯಾಗಬೇಕು ಎಂದು ಸಂಘದಿAದ ಕರೆ ನೀಡುತ್ತೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಯುಟಿಯುಸಿ ಯ ಜಿಲ್ಲಾ ಕಾರ್ಯದರ್ಶಿ ಡಾ. ಎನ್. ಪ್ರಮೋದ್, ಆಶಾ ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಶಾಂತಾ ಎ. ಜಿಲ್ಲಾ ಅಧ್ಯಕ್ಷರಾದ ಗೀತಾ ಹಾಗೂ ಜಿಲ್ಲಾ ಮುಖಂಡರುಗಳಾದ ರೇಷ್ಮಾ, ಕವಿತಾ, ರಾಮಕ್ಕ, ನವೀನಾ, ಹಸೀನಾ ಮತ್ತು ಮುಂತಾದವರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ