Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್​ ಪರೀಕ್ಷೆ ಅಕ್ರಮ ಪ್ರಕರಣ: ಕೌನ್ಸೆಲಿಂಗ್ ಮುಂದುವರೆಯುತ್ತೆ ಎಂದ ಸುಪ್ರೀಂ

ದೆಹಲಿ,11: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ನೀಟ್​-ಯುಜಿ) ವೇಳೆ ಪ್ರಶ್ನೆಪತ್ರಿಕೆ ಸೋರಿಕೆ ವರದಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪರೀಕ್ಷೆಯಲ್ಲಿ ಯಶಸ್ವಿಯಾಗಿರುವ ವಿದ್ಯಾರ್ಥಿಗಳ ಕೌನ್ಸೆಲಿಂಗ್​ ನಿಲ್ಲಿಸಲು ನಿರಾಕರಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ನ್ಯೂನತೆಗಳ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ(ಎನ್​ಟಿಎ)ಗೆ ನೋಟಿಸ್ ನೀಡಿದೆ. ವಿದ್ಯಾರ್ಥಿಗಳ ಗ್ರೇಸ್​ ಅಂಕಗಳನ್ನು ನೀಡಲಾಗುತ್ತಿದೆ.

ನ್ಯಾಯಮೂರ್ತಿ ವಿಕ್ರಮ್ ನಾಥ್​ ಹಾಗೂ ನ್ಯಾಯಮೂರ್ತಿ ಎ ಅಮಾನುಲ್ಲಾ ಅವರ ಪೀಠವು ಜುಲೈ 8 ರಂದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣಗಳ ಪಟ್ಟಿ ಮಾಡಿದೆ. ಪರೀಕ್ಷೆಯ ಪಾವಿತ್ರ್ಯತೆಯನ್ನು ಪ್ರಶ್ನಿಸಲಾಗಿದೆ ಅದಕ್ಕೆ ನಮಗೆ ಉತ್ತರಗಳು ಬೇಕು ಎಂದು ಹೇಳಿದರು. 2024ನೇ ಸಾಲಿನ ನೀಟ್​-ಯುಜಿ ಪರೀಕ್ಷೆಯನ್ನು ಹೊಸದಾಗಿ ನಡೆಸಬೇಕು ಎಂದು ಕೋರಿ ಹಲವು ಅಭ್ಯರ್ಥಿಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದಾರೆ.

2024ನೇ ಸಾಲಿನ ನೀಟ್​ ಪರೀಕ್ಷೆಯು ಕಳೆದ ತಿಂಗಳ 5 ರಂದು ನಡೆದಿತ್ತು, ದೇಶದಲ್ಲಿರುವ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಹಾಗೂ ಇತರೆ ಕೋರ್ಸ್​ಗಳ ಪ್ರವೇಶಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಈ ಪರೀಕ್ಷೆಯನ್ನು ನಡೆಸಿತ್ತು.

ಜೂನ್​ 4ರಂದು ಪ್ರಕಟವಾದ ನೀಟ್​ ಫಲಿತಾಂಶದ ಆಧಾರದ ಮೇಲೆ ವಿದ್ಯಾರ್ಥಿಗಳ ಕೌನ್ಸೆಲಿಂಗ್​ಗೆ ತಡೆಯಾಜ್ಞೆ ನೀಡಬೇಕು ಮತ್ತು ಹೊಸದಾಗಿ ನೀಟ್​ ಯುಜಿ ಪರೀಕ್ಷೆಯನ್ನು ನಡೆಸಬೇಕು ಎಂದು ಅರ್ಜಿಗಳು ಒತ್ತಾಯಿಸಿದ್ದವು.

ನೀಟ್​ ಪರೀಕ್ಷೆ ಬರೆದ ಆಂಧ್ರಪ್ರದೇಶ ವಿದ್ಯಾರ್ಥಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಸಮಯದ ನಷ್ಟದ ಆಧಾರದ ಮೇಲೆ 1536 ವಿದ್ಯಾರ್ಥಿಗಳಿಗೆ ಗ್ರೇಸ್​ ಅಂಕಗಳನ್ನು ನೀಡುವ ಎನ್​ಟಿಎ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.

 

 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*