Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟ್ಯಾಂಕರ್​​ ಗುದ್ದಿದ ಪರಿಣಾಮ ಸೇತುವೆಯಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್​​

ಕೊಪ್ಪಳ, 

ಸೇತುವೆ ಮೇಲಿಂದ ಟ್ರ್ಯಾಕ್ಟರ್‌ ಕೆಳಗೆಬಿದ್ದ ಪರಿಣಾಮ 6 ಜನರು ದುರ್ಮಣ ಹೊಂದಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಸೇತುವೆ ಮೇಲಿಂದ ಟ್ರ್ಯಾಕ್ಟರ್ ಕೆಳಗೆಬಿದ್ದು ದುರಂತ ಸಂಭವಿಸಿದ್ದು, ಸ್ಥಳದಲ್ಲೇ ಕೆಂಚಪ್ಪ (35), ಮಹಾಂತೇಶ್ (18) ಭರತ್ (01) ಸವಿತಾ (12) ಮಾರೇಶ್ ಹಾಗೂ ಗೌರಮ್ಮ ಎನ್ನುವರು ಮೃತಪಟ್ಟಿದ್ದಾರೆ. ಇನ್ನು ಘಟನೆಯಲ್ಲಿ ಗಾಯಗೊಂಡಿರುವ ಹತ್ತಕ್ಕೂ ಹೆಚ್ಚು ಜನರನ್ನು ಹೊಸಪೇಟೆ ಹಾಗೂ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಹುಲಿಗೆಮ್ಮ ಜಾತ್ರೆಗೆ ತೆರಳುತ್ತಿರುವಾಗ  ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಟ್ಯಾಂಕರ್​ ಗುದ್ದಿದೆ. ಪರಿಣಾಮ ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡು ಸೇತುವೆ ಮೇಲಿಂದ ಕೆಳಕ್ಕೆ ಬಿದ್ದಿದೆ. ಮೃತರೆಲ್ಲರೂ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದವರು ಎಂಬುದು ತಿಳಿದುಬಂದಿದೆ.  ಮೃತದೇಹಗಳನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಹೊಸಪೇಟೆ ಮತ್ತು ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Advertisement

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಪೇಟೆ ಆಸ್ಪತ್ರೆಯ ಶವಾಗಾರದ ಎದುರು ಮನೆಯವರನ್ನು ಕಳೆದುಕೊಂಡು ತಂದೆ, ಮಗನ ಆಕ್ರಂದನ ಹೇಳತೀರದಾಗಿದೆ. ಶವಾಗಾರದ ಎದುರು ಒಬ್ಬರಿಗೊಬ್ಬರು ತಬ್ಬಿಕೊಂಡು ರೋದಿಸುತ್ತಂತಿರುವ ದೃಶ್ಯ ನೋಡುಗರ ಕಣ್ಣಂಚಲ್ಲೂ ನೀರು ತರಿಸುವಂತಿದೆ. ಹೊಸಪೇಟೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಕೊಪ್ಪಳ ಎಸ್ಪಿ ಎಲ್.‌ ಅರಸಿದ್ದಿ ಭೇಟಿ ನೀಡಿದ್ದು, ಗಾಯಾಳುಗಳಿಂದ ಮಾಹಿತಿ ಪಡೆದಿದ್ದಾರೆ.

ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಸಿಎಂ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಅಪಘಾತದ ಬಗ್ಗೆ ಕರೆ ಮಾಡಿ ಸಿಎಂ ಜತೆ ಮಾತನಾಡಿದ ಸಂಸದ ತುಕಾರಾಂ, ಅವರ ಒಪ್ಪಿಗೆಯ ಮೇರೆಗೆ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸಂಸದರ ಅನುದಾನದಡಿ ಪರಿಹಾರ ನೀಡ್ತೇನೆ ಎಂದವರು ತಿಳಿಸಿದ್ದಾರೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರ ಸಂಘ ಉದ್ಘಾಟಿಸಿದ ಲಕ್ಷ್ಮೀ ಹೆಬ್ಬಾಳಕರ್ಕಾಂಗ್ರೆಸ್ ನಡೆ - ನಿಮ್ಮ ಮತ ರಕ್ಷಣೆ ಕಡೆರಿಜ್ವಾನ್ ಅರ್ಷದ್ ಅವರಿಗೆ ಸಚಿವ ಸ್ಥಾನ ನೀಡಿ : ಫರಾನ್ ಅಹಮದ್ ಆಗ್ರಹ ರೈತರಿಗೆ ಸಕಾಲದಲ್ಲಿ ಸಮರ್ಪಕವಾಗಿ  ಬೀಜ ಮತ್ತು ರಸಗೊಬ್ಬರ ವಿತರಣೆ ಮಾಡಿ : ಕೇಶವ ರೆಡ್ಡಿ ಒತ್ತಾಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ  ಟ್ರಸ್ಟ್ (ರಿ ) ಬಳ್ಳಾರಿ ವಿಶ್ವ ತಂಬಾಕು ಮುಕ್ತ  ದಿನಾಚರಣೆ ನಕಲಿ ಬಿತ್ತನೆ ಬೀಜ, ರಸಗೊಬ್ಬರ ಮಾರಾಟ ತಡೆಗೆ ಕ್ರಮ ಆತ್ಮನಿರ್ಭರ ಭಾರತದತ್ತ ಹೆಜ್ಜೆ: ದೇವಲಾಪುರದಲ್ಲಿ ಸೋಯಾಬೀನ್ ಕ್ಷೇತ್ರೋತ್ಸವ ಹಾಗೂ ಬೀಜ ಕಿಟ್ ವಿತರಣೆ"ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ"*ಜುಲೈ 12ರಂದು  ವಿಶ್ವಕರ್ಮರ ಜನ ಜಾಗೃತಿ ಜಿಲ್ಲಾ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ*ಸುಪ್ರೀಂ ಕೋರ್ಟ್ ವಕಾಲತ್ತು ಕುರಿತು ವಿಶೇಷ ಉಪನ್ಯಾಸ