LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಧರ್ಮಸ್ಥಳ ಕೇಸ್​: SIT ತನಿಖೆ ಬಗ್ಗೆ ಮಹಿಳಾ ಆಯೋಗ ಅಸಮಾಧಾನ




ಬೆಂಗಳೂರು (ನ.05): ಧರ್ಮಸ್ಥಳ  ಗ್ರಾಮದಲ್ಲಿ ಅಕ್ರಮವಾಗಿ ಶವಗಳನ್ನ ಹೂತಿಡಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ​ಎಸ್​ಐಟಿ ಅಧಿಕಾರಿಗಳು ಇಂಚಿಂಚು ಮಾಹಿತಿ ಕಲೆ ಹಾಕಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಕೂಡ ಅಂತಿಮ ಹಂತ ತಲುಪಿದೆ ಎನ್ನುತ್ತಿರುವಾಗಲೇ ಕೆಲವು ಮಹತ್ವದ ಬೆಳವಣಿಗಳು ಕೂಡ ನಡೆಯುತ್ತಿದೆ. ಇದೀಗ ಎಸ್​ಐಟಿಗೆ ಮಹಿಳಾ ಆಯೋಗ ಪತ್ರ ಬರೆಯುವ ಮೂಲಕ ಅಸಮಾಧಾನ ಹೊರ ಹಾಕಿದೆ. 






ಎಸ್​ಐಟಿಗೆ ಮಹಿಳಾ ಆಯೋಗದಿಂದ ಪತ್ರ: ಧರ್ಮಸ್ಥಳ ಕೇಸ್​ ಕೇವಲ ಚಿನ್ನಯ್ಯನ ಹೇಳಿಕೆ, ಕಳೆಬರಹ ಉತ್ಖನನಕ್ಕೆ ಸೀಮಿತವಾಗಿದೆ ಎಂದು ರಾಜ್ಯ ಮಹಿಳಾ ಆಯೋಗ ಅಸಮಾಧಾನ ಹೊರ ಹಾಕಿದೆ. ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಅತ್ಯಾಚಾರ, ಕೊಲೆ ಪ್ರಕರಣಗಳ ಹಾಗೂ ಅಸಹಜ ಮತ್ತು ಅನುಮಾನಾಸ್ಪದ ಸಾವು ಪ್ರಕರಣಗಳ ಬಗ್ಗೆಯೂ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಎಸ್‍ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ.


ಸಾವುಗಳ ಬಗ್ಗೆ ನಡೆದಿಲ್ಲ ತನಿಖೆ: ಧರ್ಮಸ್ಥಳದ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಯ ವ್ಯಾಪ್ತಿ ಬಗ್ಗೆ ಮಹಿಳಾ ಆಯೋಗ ಅಸಮಾಧಾನ ಹೊರಹಾಕಿದೆ.  ಮಹಿಳೆಯರ ಅಸಹಜ ಸಾವು, ಅತ್ಯಾಚಾರ ಪ್ರಕರಣದ ಸಮಗ್ರ ತನಿಖೆ ನಡೆಸಿಲ್ಲ. ಜೊತೆಗೆ ಕಳೆದ 20 ವರ್ಷಗಳ‌ ಅಸಹಜ ಸಾವಿನ ತನಿಖೆ ನಡೆಸಬೇಕು ಎಂದು ಪತ್ರದ ಮೂಲಕ ಮಹಿಳಾ ಆಯೋಗ ಆಗ್ರಹಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್