LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ: ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಜಿನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅವರು ರಾಜಕೀಯವಾಗಿ ಈ ಪ್ರಕರಣವನ್ನು ಬಳಸುತ್ತಿದ್ದಾರೆ, ನಾವೂ ರಾಜಕೀಯವಾಗಿ ಉತ್ತರಿಸುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಅದರ ವರದಿಯೇ ಬಂದಿಲ್ಲ. ಈಗಲೇ ತಮ್ಮ ಸಂವಿಧಾನಿಕ ಪವರ್ ನ್ನು ದುರುಪಯೋಗಪಡಿಸಿಕೊಂಡು ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿದರು.


ಮುಂದೆ ಬಂಧನವಾದರೆ ರಾಜಿನಾಮೆ ನೀಡಬೇಕಾಗುತ್ತದೆಯಲ್ಲವೇ ಎನ್ನುವ ಪ್ರಶ್ನೆಗೆ, ಊಹಾಪೋಹದ ಪ್ರಶ್ನೆಗಳಿಗೆಲ್ಲ ನಾನು ಉತ್ತರಿಸುವುದಿಲ್ಲ. ರಾಷ್ಟ್ರದಲ್ಲಿ ಬಿಜೆಪಿಯೇತರ ಪಕ್ಷಗಳ ಸರಕಾರ ಬಂದಾಗಲೆಲ್ಲ ಈ ರೀತಿ ಕಾಡಿಸುವುದು ಹಿಂದಿನಿದಂಲೂ ನಡೆಯುತ್ತಲೇ ಇದೆ. ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು, ಮಂತ್ರಿಗಳೂ ಮುಖ್ಯಮಂತ್ರಿಗಳ ಬೆನ್ನಿಗೆ ನಿಂತಿದ್ದೇವೆ. ಅವರು ರಾಜಿನಾಮೆ ಕೊಡುವ ಪ್ರಶ್ನೆ ಇಲ್ಲ. ಅವರ ರಾಜಕೀಯಕ್ಕೆ ನಾವೂ ರಾಜಕೀಯವಾಗಿಯೇ ಉತ್ತರ ನೀಡುತ್ತೇವೆ ಎಂದು ಹೆಬ್ಬಾಳಕರ್ ತಿಳಿಸಿದರು.


ಅಂದಿನ ಯಡಿಯೂರಪ್ಪ ಪ್ರಕರಣಕ್ಕೂ ಇದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಬಿಜೆಪಿಯವರದ್ದೇ ಸರಕಾರವಿತ್ತು. ಅವರ ಪಕ್ಷದವರೇ ಅವರ ಬೆನ್ನಿಗೆ ಚೂರಿ ಹಾಕಿ ಜೈಲಿಗೆ ಕಳಿಸಿದ್ದಾರೆ. ಇದು ಆ ರೀತಿಯ ಪ್ರಕರಣವಲ್ಲ. ಈ ಪ್ರಕರಣದ ಕುರಿತು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷ. ರಾಜಕೀಯವಾಗಿ ಮುಖ್ಯಮಂತ್ರಿಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. 40 ವರ್ಷದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ ರಾಜಕೀಯ ಮಾಡಿದವರು ಸಿದ್ದರಾಮಯ್ಯನವರು. ಅವರ ಮುಖಕಕ್ಕೆ ಮಸಿ ಬಳಿಯಲು ಹೋದವರ ಕೈಗೆ ಮೊದಲು ಮಸಿ ಬಳಿದಿದೆ. ಜನರು ಅವರನ್ನು ಕ್ಷಮಿಸುವುದಿಲ್ಲ. ಈ ರಾಜ್ಯದ ಜನರು 5 ವರ್ಷ ಸುಭದ್ರ ಆಡಳಿತ ನಡೆಸಲು ಆಶಿರ್ವಾದ ಮಾಡಿದ್ದಾರೆ.  ನಾವು 5 ವರ್ಷ ಆಡಳಿತ ಮಾಡುತ್ತೇವೆ ಎಂದು ಸಚಿವರು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್