Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಾರಿ ಯೂರಿಯಾ ಖರೀದಿಗೆ ಆಧಾರ್ ಎಫ್ಐಡಿ ಕಡ್ಡಾಯ: ಸೋಮಸುಂದರ್


ಬಳ್ಳಾರಿ, ಏ.10: ಈ ಬಾರಿ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರನ್ನು ಕಾಳಸಂತೆ ಮಾರಾಟಕ್ಕೆ ಕಡಿವಾಣ ಹಾಕಲು. ವಿತರಣೆಯನ್ನು ವ್ಯವಸ್ಥಿತಗೊಳಿಸಲು ಕೃಷಿ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.

ಈ ನಿಟ್ಟಿನಲ್ಲಿ ನಿನ್ನೆ ಸಂಜೆ ನಗರದ ಬಿಡಿಎಎ ಸಭಾಂಗಣದಲ್ಲಿ ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಸಭೆಯನ್ನು ಕೃಷಿ ಇಲಾಖೆ ಹಮ್ಮಿಕೊಂಡಿತ್ತು.

ಸಭೆಯಲ್ಲಿ ಮಾತನಾಡಿದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್ ಕೆ.ಎಂ. ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸುವಾಗ ಆಧಾರ್ ಕಾರ್ಡ್ ಅಥವಾ ರೈತ ಗುರುತಿನ ಸಂಖ್ಯೆ (ಎಫ್ ಐ ಡಿ) ನೀಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದ್ದಾರೆ.

2026-27ನೇ ಸಾಲಿನಿಂದ ರಸಗೊಬ್ಬರ ಮಾರಾಟ ಪ್ರಕ್ರಿಯೆಯ ಮೇಲೆ ನಿಗಾ ಇರಿಸಲು ಇಲಾಖೆಯು ವಿಶೇಷ ಆಪ್ ಬಿಡುಗಡೆ ಮಾಡಿದೆ. ಚಿಲ್ಲರೆ ಗೊಬ್ಬರ ಮಾರಾಟಗಾರರು ಇನ್ನು ಮುಂದೆ ಈ ಆಪ್ ಮೂಲಕವೇ ರೈತರ ಆಧಾರ್ ಅಥವಾ ಎಫ್ ಐ ಡಿ ಸಂಖ್ಯೆಯನ್ನು ದಾಖಲಿಸಿ ಗೊಬ್ಬರ ವಿತರಿಸಬೇಕು. ಇದರಿಂದ ರಸಗೊಬ್ಬರ ದುರ್ಬಳಕೆಯಾಗುವುದನ್ನು ತಪ್ಪಿಸಬಹುದು ಎಂದು ಹೇಳಿದ್ದಾರೆ.

ಸಭೆಯಲ್ಲಿ ಕೃಷಿ ಇಲಾಖೆಯ ಎಸ್. ಎನ್. ಮಂಜುನಾಥ, ವಿಚಕ್ಷಣ ವಿಭಾಗದ ಜಂಟಿ ನಿರ್ದೇಶಕ ಎಸ್.ಶಿವಕುಮಾರ್, ಉಪ ನಿರ್ದೇಶಕ ಮೃತ್ಯುಂಜಯ,

ಕೃಷಿ ಪರಿಕರಗಳ ಮಾರಾಟಗಾರರ ಸಂಘದ ಜಿಲ್ಲಾ ಅಧ್ಯಕ್ಷ ಹೆಚ್.ತಿಮ್ಮನಗೌಡ ಸಿದ್ದಮ್ಮನಹಳ್ಳಿ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಪಾಲಯ್ಯ, ವಿಜ್ಞಾನಿ ಮಂಜುನಾಥ, ವಿತರಕರ ಸಂಘದ ಕಾರ್ಯದರ್ಶಿ ಶ್ರೀನಿವಾಸರೆಡ್ಡಿ ಮೊದಲಾದವರು ಪಾಲ್ಗೊಂಡಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*