Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬುಡಕಟ್ಟು ಜನರು ಮುಖ್ಯವಾಹಿನಿಗೆ ಬರಲಿ : ಸಂಸದ ಈ.ತುಕಾರಾಂ



ಬಳ್ಳಾರಿ, ಜು.16 ಕೇಂದ್ರ ಸರ್ಕಾರ ಜನಸಾಮಾನ್ಯರ ಶ್ರೇಯೋಭಿವೃದ್ಧಿಗಾಗಿ ಜಾರಿಗೊಳಿಸಿರುವ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಗುರಿ ನಮ್ಮದಾಗಿದ್ದು, ಪಿ.ಎಂ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ ಧರ್ತಿ ಆಬಾ ಜನಭಾಗಿ ಅಭಿಯಾ£ವನ್ನು ಜು.15 ರಿಂದ ಜು.30 ರವರೆಗೆ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಬುಡಕಟ್ಟು ಸಮುದಾಯಗಳು ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರಬೇಕು ಎಂದು ಸಂಸದರಾದ ಈ.ತುಕಾರಾಂ ಅವರು ಹೇಳಿದರು.
ಕೇಂದ್ರ ಸರ್ಕಾರ ಬುಡಕಟ್ಟು ಮಂತ್ರಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಬಳ್ಳಾರಿ ಇವರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ಪಿ.ಎಂ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ “ಧರ್ತಿ ಆಬಾ ಜನಭಾಗಿಧಾರಿ ಅಭಿಯಾನದ ಸಂಪೂರ್ಣ ಸವಲತ್ತುಗಳ ಜಾಗೃತಿ ಅಭಿಯಾನ” ಕ್ಕೆ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ 26 ರಾಜ್ಯಗಳು, 04 ಕೇಂದ್ರಾಡಳಿತ ಪ್ರದೇಶಗಳು, ರಾಜ್ಯದ 28 ಜಿಲ್ಲೆಗಳು, 1089 ಗ್ರಾಮಗಳನ್ನು ಆಯ್ಕೆ ಮಾಡಲಾಗಿದ್ದು, ಆ ಪೈಕಿ ಬಳ್ಳಾರಿ ಜಿಲ್ಲೆಯ 5 ವಲಯಗಳಿಂದ (ತಾಲೂಕುಗಳಿಂದ) ಒಟ್ಟು 59 ಗ್ರಾಮಗಳನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ ಆಯ್ಕೆ ಮಾಡಲಾಗಿದೆ.  ದೇಶದಲ್ಲಿ ಸುಮಾರು 5.5 ಕೋಟಿ ಬುಡಕಟ್ಟು ಜನಸಂಖ್ಯೆಯಿದ್ದು, ಬುಡಕಟ್ಟು ಜನ ಸಮಗ್ರ ಅಭಿವೃದ್ಧಿಗಾಗಿ ಮೂಲಭೂತ ಸೌಕರ್ಯಗಳು, ಆರೋಗ್ಯ, ಶಿಕ್ಷಣ, ಜೀವನೋಪಾಯಕ್ಕೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡಲು ಒಟ್ಟಾರೆಯಾಗಿ ಬುಡಕಟ್ಟು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮಕೈಗೊಳ್ಳಬೇಕಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಮೀಸಲಿರುವ 79,156 ಕೋಟಿ ರೂ. ಗಳಲ್ಲಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುವ ದೇಶದ 63,000 ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಬುಡಕಟ್ಟು ಮಂತ್ರಾಲಯ ಈ ಯೋಜನೆಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತಿದೆ.  ದೇಶದ ಸುಮಾರು 8 ಕೋಟಿ ಜನರಿಗೆ ಯೋಜನೆಯ ಲಾಭ ದೊರೆಯಲಿದೆ. 2024-25 ರಿಂದ 2028-29ನೇ ಸಾಲಿನವರೆಗೆ 5 ವಷÀðಗಳಲ್ಲಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು. 2024-25 ರಿಂದ 2025-26ನೇ ಸಾಲಿಗೆ ಮೊದಲ ಹಂತದಲ್ಲಿ 4,000 ಕೋಟಿ ಅನುದಾನವನ್ನು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನದಡಿ 17 ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಬೇಕಾಗಿದೆ. ಈ ಯೋಜನೆಗೆ ಒಳಪಟ್ಟ 59 ಗ್ರಾಮದ ಜನರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಜಿಲ್ಲಾಧಿಕಾರಿ ಪ್ರಶಾಂತ್ ಮಿಶ್ರಾ, ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೇರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ, ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ರಾಘವೇಂದ್ರ ವರ್ಮಾ ಸೇರಿದಂತೆ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ