Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜೃಂಬಣೆಯಿಂದ ನಡೆದ ಮಲೆ ಮಾದಪ್ಪನ ರಥೋತ್ಸವ: ಸಾಕ್ಷಿಯಾದ ಸಾವಿರಾರು ಭಕ್ತರು




ಹನೂರು,ಏಪ್ರಿಲ್ 10:  : ರಾಜ್ಯದ  ಪ್ರಸಿದ್ಧ ಯಾತ್ರ  ಧಾರ್ಮಿಕ ಸ್ಥಳವಾದ  ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಪ್ರಯುಕ್ತ ಕೊನೆಯ ದಿನವಾದ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು.


ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಾದಪ್ಪನ ರಥೋತ್ಸವದ ಕಾರ್ಯದಲ್ಲಿ ಶ್ರೀ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿಗಳು ಸೇರಿದಂತೆ ಬೇಡಗಂಪಣ ಅರ್ಚಕರು ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ತೇರನ್ನು ವಿವಿಧ ಬಗೆಯ ಪುಷ್ಪಗಳು, ತಳಿರು ತೋರಣ, ಬಣ್ಣದ ಬಟ್ಟೆಗಳಿಂದ ಸಿಂಗರಿಸಲಾಗಿತ್ತು.


ರಥೋತ್ಸವಕ್ಕೂ ಮುನ್ನ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ಬೇಡಗಂಪಣ ಅರ್ಚಕ ವೃಂದದವರು ದೇಗುಲದ ಗರ್ಭಗುಡಿಯಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ತೇರಿನ ಬಳಿ ಧಾರ್ಮಿಕ ವಿಧಿ ವಿಧಾನ, ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಉತ್ಸವ ಮೂರ್ತಿ ಇರಿಸಿ ಬೂದು ಕುಂಬಳಕಾಯಿ ದೃಷ್ಟಿ ತೆಗೆದು ಮಹಾಮಂಗಳಾರತಿ ಹಾಗೂ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಬೆಲ್ಲದ ಆರತಿ ಬೆಳಗಲಾಯಿತು. ಬಳಿಕವಷ್ಟೇ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.


ದೇಗುಲದ ಮುಖ್ಯದ್ವಾರದ ಆವರಣದಿಂದ ಸತ್ತಿಗೆ ಸೂರಿಪಾನಿ, ಛತ್ರಿ, ಚಾಮರ, ನಂದಿ ದ್ವಜ ಹಾಗೂ ಮಂಗಳವಾದ್ಯದೊಂದಿಗೆ ತೇರು ಎಳೆಯಲಾಯಿತು. ಹುಲಿವಾಹನ, ಬಸವ ವಾಹನ ಹಾಗೂ ರುದ್ರಾಕ್ಷಿ ವಾಹನೋತ್ಸವವು ನಡೆಯಿತು. ವೀರಗಾಸೆ ಕುಣಿತ ಭಕ್ತಾದಿಗಳ ಗಮನ ಸೆಳೆಯಿತು. ಭಕ್ತರು ತೇರಿಗೆ ಹಣ್ಣು, ದವಸ ಧಾನ್ಯಗಳನ್ನು ಎಸೆದು ಮಾದಪ್ಪನ ಕೃಪೆಗೆ ಪಾತ್ರರಾದರು.


ತಮಿಳುನಾಡು ಹಾಗೂ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯಬಾರದು ಎಂದು ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು ಎಂದು ಪ್ರಾಧಿಕಾರದ ಕಾರ್ಯದರ್ಶಿ ರಘು ತಿಳಿಸಿದರು  . ಇದೇ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧಿಕಾರಿಗಳು,ನೌಕರರು, ಆರಕ್ಷಕ ಸಿಬ್ಬಂದಿವರ್ಗ ,ಭಕ್ತರು ಹಾಜರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ