LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೃಷ್ಣಾ ನದಿ ಭೋರ್ಗರೆತಕ್ಕೆ ಸಾವಿರಾರು ಹೆಕ್ಟೇರ್ ಬೆಳೆ ನಾಶ

ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಬ್ಬರಿಸುತ್ತಿದೆ. ನದಿ ಪಾತ್ರ ಬಿಟ್ಟು ಸುಮಾರು ಅರ್ಧ ಕಿಲೋ ಮೀಟರ್​​ ವ್ಯಾಪ್ತಿಯ ಮನೆ, ಕೃಷಿ ಜಮೀನುಗಳು ಜಲಾವೃತವಾಗಿವೆ. ಪ್ರವಾಹಪೀಡಿತರನ್ನು ಕಾಳಜಿ ಕೇಂದ್ರಗಳು ಹಾಗೂ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.


ಕಳೆದೊಂದು ವಾರದಿಂದ ಕೃಷಿ ಜಮೀನುಗಳಿಗೆ ನದಿ ನೀರು ನುಗ್ಗಿ ಉದ್ದು, ತೊಗರಿ, ಕಬ್ಬು, ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಕೊಳೆಯಲಾರಂಭಿಸಿವೆ. ದಿನ ದಿನಕ್ಕೆ ನೀರಿನ ಮಟ್ಟ ಹೆಚ್ಚಾಗುತ್ತಿದೆ.


ನದಿಯ ಎರಡೂ ಬದಿಗಳಲ್ಲಿ ಕಪ್ಪು ಮಣ್ಣಿನಿಂದ ಕೂಡಿದ ಜಮೀನುಗಳಿವೆ. ಈ ಭಾಗದಲ್ಲಿ ಹೇರಳವಾಗಿ ಕಬ್ಬು ಬೆಳೆಯುತ್ತಾರೆ. ಕಳೆದ ಫೆಬ್ರವರಿ, ಮಾರ್ಚ್​ ತಿಂಗಳಲ್ಲಿ ಕೃಷ್ಣಾ ನದಿ ಸಂಪೂರ್ಣ ಬತ್ತಿ ಹೋಗಿತ್ತು. ಆಗ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು. ಜೂನ್ ಮೊದಲನೇ ವಾರದಲ್ಲಿ ನದಿಯಲ್ಲಿ ನೀರು ಬರುತ್ತಿದ್ದಂತೆ ರೈತರು ಸಂತೋಷ ವ್ಯಕ್ತಪಡಿಸಿ ನದಿಗೆ ಪೂಜೆ ಸಲ್ಲಿಸಿ ಸ್ವಾಗತಿಸಿದ್ದರು.


ಆದರೆ, ಇದೀಗ ರೈತ ನದಿಯ ರೌದ್ರಾವತಾರಕ್ಕೆ ಬೆಚ್ಚಿಬಿದ್ದಿದ್ದಾನೆ. ಅಪಾಯ ಮಟ್ಟ ಮೀರಿ ಹರಿಯುತ್ತಿರುವುದರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ರೈತ ಭೂಪಾಲ್ ಹಳಿಂಗಳಿ ಎಂಬವರು ಮಾತನಾಡಿ, ''ಕೃಷ್ಣಾ ನದಿಯಿಂದ ಉತ್ತಮ ಜೀವನ ಕಟ್ಟಿಕೊಳ್ಳಬೇಕೆಂಬ ರೈತರಿಗೆ ಪ್ರತಿವರ್ಷ ಒಂದಿಲ್ಲೊಂದು ಪೆಟ್ಟು ಬೀಳುತ್ತಿದೆ. ಇದರಿಂದ ರೈತರ ಜೀವನ ಕಷ್ಟಕರವಾಗಿದೆ. ಕಳೆದ ಬಾರಿ ನದಿಯಲ್ಲಿ ನೀರು ಬತ್ತಿ ಹೋಗಿತ್ತು. ಈ ಬಾರಿ ಪ್ರವಾಹ ಎದುರಾಗಿದೆ. ಕೃಷ್ಣಾ ನದಿ ನಂಬಿಕೊಂಡೇ ನಾವು ಜೀವನ ಸಾಗಿಸುವವರು. ನದಿಯಿಂದ ನಮಗೆ ಪ್ರತಿವರ್ಷ ಲಕ್ಷಾಂತರ ರೂಪಾಯಿ ನಷ್ಟವಾಗುತ್ತಿದೆ. ಸರ್ಕಾರಗಳು ಪ್ರತಿ ಎಕರೆಗೆ 10 ಸಾವಿರ ರೂಪಾಯಿಯಂತೆ ಪರಿಹಾರ ನೀಡಿ ಕೈತೊಳೆದುಕೊಂಡು ಸುಮ್ಮನಾಗುತ್ತವೆ. ಸರ್ಕಾರ ತುರ್ತಾಗಿ ಮಧ್ಯಪ್ರವೇಶಿಸಿ ಶಾಶ್ವತ ನೆರವು ನೀಡಬೇಕು" ಎಂದು ಆಗ್ರಹಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್