LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕುಪ್ವಾರದಲ್ಲಿ ಉಗ್ರಗಾಮಿ ನಿಗ್ರಹ ಕಾರ್ಯಾಚರಣೆ ವೇಳೆ ಮೂವರು ಸೇನಾ ಯೋಧರು ಗಾಯ

ಶ್ರೀನಗರ: ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ಕುಪ್ವಾರದಲ್ಲಿ ಶನಿವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಕನಿಷ್ಠ ಮೂವರು ಸೇನಾ ಯೋಧರು ಗಾಯಗೊಂಡಿದ್ದಾರೆ. ಇದೇ ವೇಳೆ, ಓರ್ವ ಉಗ್ರನನ್ನು ಭದ್ರತಾ ಸಿಬ್ಬಂದಿ ಸದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.


ಇಲ್ಲಿನ ಟ್ರೆಹ್ಗಾಮ್ ಪ್ರದೇಶದ ಮಚಿಲ್ ಸೆಕ್ಟರ್‌ನಲ್ಲಿರುವ ಕುಮ್ಕಾಡಿ ಪೋಸ್ಟ್‌ನಲ್ಲಿ ಭದ್ರತಾ ಪಡೆಗಳ ಉಗ್ರಗಾಮಿ ನಿಗ್ರಹ ಕಾರ್ಯಾಚರಣೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಗುಂಡಿನ ದಾಳಿ ನಡೆದಿದೆ. ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಲ್ಲಿ ನಡೆದ ಎರಡನೇ ಎನ್‌ಕೌಂಟರ್ ಇದಾಗಿದೆ.


ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ಕುಮ್ಕಾಡಿ ಪೋಸ್ಟ್ ಬಳಿ ಉಗ್ರರ ಚಲನವಲನವನ್ನು ಪತ್ತೆಹಚ್ಚಿವೆ. ಈ ವೇಳೆ ಪರಸ್ಪರ ಗುಂಡಿನ ಚಕಮಕಿಗೆ ಜರುಗಿದೆ. ಇದುವರೆಗೆ ಒಬ್ಬ ಉಗ್ರಗಾಮಿಯನ್ನು ಎನ್​ಕೌಂಟರ್​ ಮಾಡಲಾಗಿದೆ. ಈ ಘಟನೆಯಲ್ಲಿ ಕನಿಷ್ಠ ಮೂವರು ಸೇನಾ ಯೋಧರು ಗಾಯಗೊಂಡಿದ್ದಾರೆ. ಗಾಯಾಳು ಸೈನಿಕರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಗುಂಡಿನ ಚಕಮಕಿ ಮುಂದುವರೆದಿದೆ.


 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್