Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ : ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಕ್ಕೆ ಮೂವರು ಬಲಿ



ಬೆಳಗಾವಿಯ ಬೈಲಹೊಂಗಲ ತಾಲೂಕಿನ ಮರಕುಂಬಿ ಬಳಿಯ ಇನಾಮದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟಗೊಂಡು ಭೀಕರ ದುರಂತ ಸಂಭವಿಸಿ ಮೂವರು ಮೃತಪಟ್ಟಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ವರದಿಯಾಗಿದೆ.

ಈ ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಅವರನ್ನು ಅಕ್ಷಯ ತೋಪಡೆ(45), ದೀಪಕ್ ಮುನವಳ್ಳಿ(31), ಸುದರ್ಶನ ಬನೋಶಿ(25) ಗುರುತಿಸಲಾಗಿದೆ. ಐದು ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ದುರಂತದಲ್ಲಿ ಗಾಯಗೊಂಡ ಕಾರ್ಮಿಕರ ವಿವರ : ಮಂಜುನಾಥ ತೇರದಾಳ, ರಾಘವೇಂದ್ರ ಗಿರಿಯಾಳ, ಗುರು ತಮ್ಮನ್ನವರ, ಭರತ ಸಾರವಾಡಿ ಮತ್ತು ಮಂಜುನಾಥ ಕಾಜಗಾರ ಎನ್ನಲಾಗಿದೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿರುವವರನ್ನು ಝೀರೋ ಟ್ರಾಫಿಕ್‌ನಲ್ಲಿಯೇ ಬೈಲಹೊಂಗಲದಿಂದ ಬೆಳಗಾವಿ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ.



ಕಾರ್ಖಾನೆಯ ನಂಬರ್ 1 ಕಂಪಾರ್ಟಮೆಂಟ್ ನಲ್ಲಿ ವಾಲ್ ರಿಪೇರಿ ಮಾಡೋ ಸಂದರ್ಭದಲ್ಲಿ ಈ ದುರಂತ ಸಂಭವಿಸಿದ್ದು, ರಿಪೇರಿ ವೇಳೆ ಏಕಾಏಕಿ ಬಾಯ್ಲರ್‌ನಲ್ಲಿ ಭಾರೀ ಸ್ಪೋಟ ಉಂಟಾಗಿದೆ. ಅದರೊಳಗೆ ಇದ್ದ ಬಿಸಿ ಮಳ್ಳಿ ಕಾರ್ಮಿಕರ ಮೈ ಮೇಲೆ ಎರಚಿಕೊಂಡ ಪರಿಣಾಮವಾಗಿ ಸ್ಥಳದಲ್ಲೇ ಹಲವರು ತೀವ್ರವಾಗಿ ಸುಟ್ಟು ಗಾಯದಿಂದ ನರಳಾಡಿದ್ದಾರೆ.

ಈ ದುರಂತವು ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಾಯ್ಲರ್ ಸ್ಪೋಟಕ್ಕೆ ನಿಖರ ಕಾರಣ, ನಿರ್ಲಕ್ಷ್ಯ ಅಥವಾ ಸುರಕ್ಷತಾ ಲೋಪಗಳಿರುವ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಕಾರ್ಖಾನೆಯ ಸುರಕ್ಷತಾ ಕ್ರಮಗಳು ಹಾಗೂ ತಾಂತ್ರಿಕ ನಿರ್ವಹಣೆ ಕುರಿತಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಆಸ್ಪತ್ರೆಗೆ ಬೆಳಗಾವಿ ಎಸ್ಪಿ ಕೆ.ರಾಮರಾಜನ್, ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದರು. ನಂತರ ಅವರು ದುರಂತ ನಡೆದ ಸ್ಥಳಕ್ಕೂ ಭೇಟಿ ನೀಡಿ, ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ.

ಗಾಯಗೊಂಡ ಕೆಲವರ ಸ್ಥಿತಿ ಇನ್ನೂ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿದೆ. ಈ ದುರಂತವು ಇಡೀ ಪ್ರದೇಶದಲ್ಲಿ ತೀವ್ರ ಶೋಕ ಮತ್ತು ಆತಂಕವನ್ನುಂಟುಮಾಡಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ