Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸತನದ ಸುಳಿವಿನೊಂದಿಗೆ ಟೈಮ್ ಪಾಸ್ ಟ್ರೇಲರ್ ಬಿಡುಗಡೆ







     ಜನಪ್ರಿಯ ಸಿನಿಮಾಗಳ ಅಲೆಯ ನಡುವೆಯೇ ಒಂದಷ್ಟು ಹೊಸತನ ಹೊಂದಿರುವ ಚಿತ್ರಗಳು ತಣ್ಣಗೆ ಪ್ರೇಕ್ಷಕರ ಮುಂದೆ ಬರಲು ಅಣಿಯಾಗುತ್ತಿವೆ. ಸದ್ಯದ ಮಟ್ಟಿಗೆ ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಚಿತ್ರ 'ಟೈಮ್ ಪಾಸ್'.


     ಕೆ. ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ 'ಟೈಮ್ ಪಾಸ್ ಚಿತ್ರ' ಇದೇ ಅಕ್ಟೋಬರ್ ೧೭ರಂದು ಬಿಡುಗಡೆಗೊಳ್ಳಲಿದ್ದು, ಚಿತ್ರದ ಟ್ರೇಲರ್ ಇದೀಗ ಬಿಡುಗಡೆಗೊಂಡಿದೆ. ಈ ಈ ಸಂದರ್ಭದಲ್ಲಿ ಚಿತ್ರತಂಡ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡಿದೆ.


      ನಿರ್ದೇಶಕ ಚೇತನ್ ಜೋಡಿದಾರ್ ಈ ಚಿತ್ರದ ಕಥಾ ಹಂದರದ ಬಗೆಗಿನ ಒಂದಷ್ಟು ಸೂಕ್ಷ್ಮ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಿನಿಮಾ ಮಾಡೋ ಕನಸಿಟ್ಟುಕೊಂಡವರ ಏಳುಬೀಳಿನ ಕಥನ ಹೊಂದಿರುವ ಈ ಸಿನಿಮಾದೊಳಗೆ ಮತ್ತೊಂದು ಸಿನಿಮಾ ಕಥೆ ಪ್ರೇಕ್ಷಕರನ್ನು ತಲುಪಿಕೊಳ್ಳಲಿದೆಯಂತೆ. ತಮ್ಮ ಚಿತ್ರಕ್ಕೆ ಉತ್ತೇಜನ ಕೊಡಬೇಕೆಂದು ನಿರ್ದೇಶಕರು ಪ್ರೇಕ್ಷಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.


     ತಮ್ಮದೇ ಬದುಕಿನಲ್ಲಿ ನಡೆದ ಘಟನೆಗಳಿಗೂ, ಈ ಸಿನಿಮಾ ಕಥೆಗೂ ಇರುವ ನಂಟಿನ ಸುಳಿವನ್ನೂ ಕೂಡಾ ನಿರ್ದೇಶಕರು ತೆರೆದಿಟ್ಟಿದ್ದಾರೆ. ಇದು ಚೇತನ್ ಜೋಡಿದಾರ್ ನಿರ್ದೇಶನದ ಚೊಚ್ಚಲ ಸಿನಿಮಾ. ಸಾಮಾನ್ಯವಾಗಿ ಹೀಗೆ ನಿರ್ದೇಶನಕ್ಕಿಳಿಯುವವರ ಹಿಂದೆ ಒಂದಷ್ಟು ಅನುಭವಗಳ ಹಿನ್ನೆಲೆ ಇರುತ್ತದೆ. ಆದರೆ ಚೇತನ್ ಜೋಡಿದಾರ್ ಈವರೆಗೆ ಯಾವ ನಿರ್ದೇಶಕರ ಬಳಿಯಲ್ಲಿಯೂ ಕಸುಬು ಕಲಿತಿಲ್ಲ. ಯೂಟ್ಯೂಬ್ ಮೂಲಕವೇ ನಿರ್ದೇಶನದ ಪಟ್ಟುಗಳನ್ನು ಕರಗತ ಮಾಡಿಕೊಂಡು, ತಮ್ಮ ಜೀವಮಾನದ ಕನಸನ್ನು 'ಟೈಮ್ ಪಾಸ್' ಮೂಲಕ ನನಸು ಮಾಡಿಕೊಂಡಿದ್ದಾರೆ. ಅದು ಪ್ರೇಕ್ಷಕರಿಗೂ ರುಚಿಸುತ್ತದೆಂಬ ವಿಶ್ವಾಸ ಅವರ ಮಾತುಗಳಲ್ಲಿ ಧ್ವನಿಸುತ್ತಿತ್ತು.


     ಡಾರ್ಕ್ ಹ್ಯೂಮರ್ ಜಾನರಿಗೆ ಸೇರಿಕೊಳ್ಳುವ ಈ ಚಿತ್ರವನ್ನು ಶ್ರೀಚೇತನ ಸರ್ವಿಸಸ್ ಬ್ಯಾನರ್ ಮೂಲಕ ಗುಂಡೂರು ಶೇಖರ್, ಕಿರಣ್ ಕುಮಾರ್ ಶೆಟ್ಟಿ ಎಂ.ಹೆಚ್. ಕೃಷ್ಣಮೂರ್ತಿ ನಿರ್ಮಾಣ ಮಾಡಿದ್ದಾರೆ. ಇಮ್ರಾನ್ ಪಾಷಾ, ವೈಸಿರಿ ಕೆ ಗೌಡ, ರತ್ಷಾರಾಮ್, ಕೆ. ಚೇತನ್ ಜೋಡಿದಾರ್, ಓಂ ಶ್ರೀ ಯಕ್ಷಶಿಫ್, ಪ್ರಭಾಕರ್ ರಾವ್, ನವೀನ್ ಕುಮಾರ್, ಸಂಪತ್ ಕುಮಾರ್, ಅಶ್ವಿನಿ ಶ್ರೀನಿವಾಸ್ ಮುಖ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಗಿರೀಶ್ ಗೌಡ ಸಾಹಸ ನಿರ್ದೇಶನ, ವೈಷ್ಣವಿ ಸತ್ಯನಾರಾಯಣ್ ನೃತ್ಯ ನಿರ್ದೇಶನ, ರಾಜೀವ್ ಗಣೇಶ್ ಛಾಯಾಗ್ರಹಣ, ಮಣಿ ಪ್ರಚಾರ ಕಲೆ, ಡಿ. ಶಾಮಸುಂದರ್, ಬಿ.ಕೆ ದಯಾನಂದ ನಿರ್ಮಾಣ ನಿರ್ವಹಣೆ, ಹರಿ ಪರಮ್ ಸಂಕಲನ, ಡಿ.ಎಂ ಉದಯ ಕುಮಾರ್ (ಡಿಕೆ) ಸಂಗೀತ ನಿರ್ದೇಶನ  ಚಿತ್ರಕ್ಕಿದೆ.
















Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ