LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಟೈರ್ ಒಡೆದು ಟಾಟಾ ಏಸ್ ವಾಹನ ಪಲ್ಟಿ, 32 ಜನ ಮಹಿಳಾ ಕೂಲಿ ಕಾರ್ಮಿಕರು ಅಪಾಯದಿಂದ ಪಾರು

ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಮುಖಂಡ ಚಿದಾನಂದ ಸವದಿ


ಅಥಣಿ: ಸತ್ತಿ ಗ್ರಾಮದಿಂದ ಅಡಹಳಟ್ಟಿ ಗ್ರಾಮಕ್ಕೆ ಕೆಲಸದ ನಿಮಿತ್ತ ಹೊರಟಿದ್ದ ಟಾಟಾ ಏಸ್ ವಾಹನವೊಂದು ಟೈರ್ ಒಡೆದು ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಘಟನೆ ನಡೆದಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕೂಲಿ ಕೆಲಸಕ್ಕೆ ಹೋರಟಿದ್ದ 32 ಜನ ಮಹಿಳಾ ಕೂಲಿ ಕಾರ್ಮಿಕರಿದ್ದ ವಾಹನ ಪಲ್ಟಿಯಾಗಿ ಗಾಯಗೊಂಡ ಕಾರ್ಮಿಕರನ್ನು ಕೂಡಲೇ ಅಥಣಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದ ಬಳಿ ಮಂಗಳವಾರ ಬೆಳಗಿನ ಜಾವ ಟಾಯರ್ ಒಡೆದು ಪರಿಣಾಮ ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾಗಿ 32 ಜನ ಕೂಲಿ ಕಾರ್ಮಿಕರು ಗಂಬೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಕೆಲವು ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರ ಪುತ್ರ ಚಿದಾನಂದ ಸವದಿ ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ಧಾವಿಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ ಅವರಿಗೆ ಧೈರ್ಯ ತುಂಬುವ ಕಾಯಕ ಮಾಡಿದ್ದು ಅಲ್ಲದೆ ವೈದ್ಯರೊಂದಿಗೆ ಮಾತನಾಡಿ ಎಲ್ಲ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು. ಈ ಕುರಿತು ಐಗಳಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ವೇಳೆ ಜೇಡೆಪ್ಪ ಕುಂಬಾರ, ಪ್ರದೀಪ ನಂದಗಾಂವ, ಮಂಜು ನೂಲಿ, ಮಹಾಂತೇಶ ಠಕ್ಕಣ್ಣವರ, ಅಜಯ ಮಂಗಸೂಳಿ, ವಿಜಯ ರಜಪೂತ, ರಾಹುಲ ನಾಯಿಕ, ಆನಂದ ಮಾದಗುಡಿ, ತಾಲೂಕು ವೈಧ್ಯಾಧಿಕಾರಿ ಬಸನಗೌಡ ಕಾಗೆ, ಸಿಪಿಐ. ಸಂತೋಷ ಹಳ್ಳೂರ, ಐಗಳಿ ಪಿಎಸ್‌ಐ ಚಂದ್ರಶೇಖರ ಸಾಗನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್