LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿನ ಕೇಡುಗಾಲಕ್ಕೆ ಸಹಬಾಳ್ವೆ ಶಾಂತಿಯ ಅಗತ್ಯವಿದೆ 

 

ಬಳ್ಳಾರಿ ಏ, ೨೨..: ಪರಸ್ಪರ ಸ್ನೇಹ, ಸಹಬಾಳ್ವೆ , ಸೌಜನ್ಯ ಸೌಹಾರ್ದತೆ, ಶಾಂತಿಯಿಂದ ನಾವೆಲ್ಲರೂ ಬದುಕಿ ಭಾರತದ ನೆಲದಲ್ಲಿ  ಬಹುತ್ವವನ್ನು ಎತ್ತಿ ಹಿಡಿಯಬೇಕಾದ ಅಗತ್ಯ ಇಂದಿನ ಕೇಡುಗಾಲಕ್ಕಿದೆ ಎಂದು ಪ್ರಾಧ್ಯಾಪಕ ದಸ್ತಗೀರಸಾಬ್ ದಿನ್ನಿ ಅಭಿಪ್ರಾಯಪಟ್ಟರು.
 ತಾಲೂಕಿನ ದಮ್ಮೂರು ಗ್ರಾಮದ ವೆಂಕಾವಧೂತ ಮಠದಲ್ಲಿ ಸರಳಾದೇವಿ ಸರಕಾರಿ ಪ್ರಥಮ ದರ್ಜೆ (ಸ್ವಾಯತ್ತ ) ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದಲ್ಲಿ ’ಹೊಸ ತಲೆಮಾರು ಮತ್ತು ಸೌಹಾರ್ದತೆ’ ವಿಷಯದ ಕುರಿತು ಮಾತನಾಡಿದರು.
 ನಮ್ಮ ಸುತ್ತಲಿನ ಸಮಾಜದಲ್ಲಿ ಮೋಸ, ವಂಚನೆ, ಶೋಷಣೆ, ಅತ್ಯಾಚಾರ, ದೌರ್ಜನ್ಯ, ಮರ್ಯಾದೆಗೇಡು ಹತ್ಯೆ ,ಜಾತಿ ತಾರತಮ್ಯ ಕೃತ್ಯಗಳು ಢಾಳಾಗಿ ಗೋಚರಿಸುತ್ತಿವೆ. ಇವುಗಳ ಸಂಕಟದ ಮಗ್ಗಲು ಕಲಕಬೇಕಿದೆ. ಹೊಸ ತಲೆಮಾರು  ಗಂಭೀರವಾಗಿ ಆಲೋಚಿಸಿ,ಮಾನವ ಸಂಬಂಧಗಳನ್ನು ಗಟ್ಟಿಗೊಳಿಸಿ ನವ ಸಮಾಜಕ್ಕೆ ಕೈಜೋಡಿಸಬೇಕಿದೆ ಎಂದು ವಿಶ್ಲೇಷಿಸಿದರು.
ಸಹಾಯಕ ಪ್ರಾಧ್ಯಾಪಕ ದೊಡ್ಡ ಬಸವರಾಜ್ ಸಾಮಾಜಿಕ ಮೌಲ್ಯಗಳು ಕುಸಿಯುತ್ತಿರುವ ವರ್ತಮಾನಕ್ಕೆ ಸೌಹಾರ್ದತ ಮೌಲ್ಯಗಳು ಬದುಕಿನ ಗುರಿಯಾಗಲಿ ಎಂದು ಆಶಿಸಿದರು. 
ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾರ್ಯಕ್ರಮಾಧಿಕಾರಿ ಕೆ. ಬಸಪ್ಪ ಸಕರಾತ್ಮಕ ಮಾನವ ಮೌಲ್ಯಗಳು ಮತ್ತು ನೈತಿಕ ತತ್ವಗಳನ್ನು ಬೆಳೆಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸಹಕಾರಿಯಾಗಲಿದೆ. ಭಾರತೀಯ ಸಂಸ್ಕೃತಿ ಮತ್ತು ಕನ್ನಡ ಸಾಹಿತ್ಯವು ಸೌಹಾರ್ದತೆಯ ವಿಚಾರಗಳನ್ನೇ ಪ್ರಧಾನ ಆಶಯವಾಗಿಸಿಕೊಂಡಿದೆ. ಯುವ ಸಮುದಾಯ  ನವ ಮಾಧ್ಯಮಗಳ ಈ ಕಾಲಘಟ್ಟದಲ್ಲಿ ಬಹಳ ಎಚ್ಚರಿಕೆಯಿಂದ ಬದುಕನ್ನು ರೂಪಿಸಿಕೊಂಡು ಹೆಜ್ಜೆಗಳನ್ನು ಇಡಬೇಕಾಗಿದೆ ಎಂದರು.
ವೇದಿಕೆಯ ಮೇಲೆ ಎನ್. ಎಸ್. ಎಸ್. ಘಟಕಗಳ ಕಾರ್ಯಕ್ರಮಾಧಿಕಾರಿಗಳಾದ ಬಿ.ರಾಮಸ್ವಾಮಿ, ಎಂ. ಎನ್. ಪ್ರವೀಣಕುಮಾರ,ಅತಿಥಿ ಉಪನ್ಯಾಸಕ ಮಾರೆಪ್ಪ, ಯುವ ಕಲಾವಿದ ಆಂಜನೇಯ ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್