Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೂಢನಂಬಿಕೆಯೇ ಇವತ್ತಿನ ರಾಕ್ಷಸರು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್




ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿವರ ಹೇಳಿಕೆ

 *ಬೆಂಗಳೂರು:* ಮಹಿಳೆಯರ ಪಾಲಿಗೆ ಮೂಢನಂಬಿಕೆಯೇ ರಾಕ್ಷಸ. ಇಂದಿನ ಆಧುನಿಕ ಕಾಲದಲ್ಲೂ ಊರು ಊರುಗಳಲ್ಲಿ, ಗಲ್ಲಿ ಗಲ್ಲಿಗಳಲ್ಲಿ ಮೂಢನಂಬಿಕೆಯಂಥ ರಾಕ್ಷಸ ಪದ್ಧತಿಯನ್ನು ನೋಡುತ್ತಿದ್ದೇವೆ. ಅದರ ವಿರುದ್ಧ ಹೋರಾಟ ಮಾಡೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕರೆ ನೀಡಿದರು.


ಬೆಂಗಳೂರು ಖಾಸಗಿ ಹೋಟೆಲ್‌ ನಲ್ಲಿ ಜೆಡಿ ಮೀಡಿಯಾ ಹೌಸ್ ವತಿಯಿಂದ ಮಹಿಳಾ ದಿನಾಚರಣೆ ಅಂಗವಾಗಿ ನಡೆದ *'ಸಾಧಕಿ'* ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆ ಕೇವಲ ಸಾಧಕಿ, ಕ್ಷಮಯಾಧರಿತ್ರಿ ಮಾತ್ರವಲ್ಲ. ಗಂಡಸರ ಭುಜಕ್ಕೆ ಭುಜಕೊಟ್ಟು ಸಮಾನವಾಗಿ ಬೆಳೆದಿದ್ದಾಳೆ ಎಂದರು.‌


ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಇದ್ದಾರೆ. ಮಹಿಳೆಯರು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕು. ನಮ್ಮ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ, ವಿದ್ಯಾಭ್ಯಾಸ ನೀಡೋಣ. ಗಂಡ ಮಾಡಿದ ಸಾಧನೆಯನ್ನು ಹೆಂಡತಿ ತುಂಬಾ ಸಂಭ್ರಮಿಸುತ್ತಾಳೆ. ಇಂಥ ಪ್ರವೃತ್ತಿ ಎಲ್ಲಾ ಮಹಿಳೆಯರಲ್ಲೂ ಬರಬೇಕು ಎಂದರು‌‌.


ಇಂದಿನ ಆಧುನಿಕ ಮಹಿಳೆ ತನ್ನ ಸಾಧನೆಗೆ ಯಾವ ಕ್ಷೇತ್ರವನ್ನೂ ಬಿಟ್ಟಿಲ್ಲ.

ಪುರುಷರಿಗೆ ಸರಿಸಮನಾಗಿ, ಹಲವು ಕ್ಷೇತ್ರಗಳಲ್ಲಿ ಅವರನ್ನೂ ಮೀರಿಸುವ ರೀತಿಯಲ್ಲಿ ಸಾಧನೆ ಮಾಡುವ ಮೂಲಕ ಇಂದು ಮಹಿಳೆ ದಿಟ್ಟತನವನ್ನು ಪ್ರದರ್ಶಿಸುತ್ತಿದ್ದಾಳೆ.

ಸಮಾಜದಲ್ಲಿರಬಹುದು, ಕುಟುಂಬದಲ್ಲಿರಬಹುದು ಸಂಕಷ್ಟ ಎದುರಾದಾಗಲೆಲ್ಲ ಗಟ್ಟಿಯಾಗಿ ನಿಂತು ಎದುರಿಸುವವಳು ಮಹಿಳೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.


ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ, ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್, ಚಿತ್ರ ನಟರಾದ ಅನಿರುದ್ಧ್ ಜತ್ಕರ್, ನಟಿ ಸಂಪದ, ಕಾರ್ಯಕ್ರಮದ ಆಯೋಜಕರಾದ  ಜೆ.ಡಿ.ಮೀಡಿಯಾ ಹೌಸ್‌ನ ಎಂಡಿ ಅನಿತಾ ಗೌಡ, ಹೇಮಾ ಸಾಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ