ಹಸಿರು ಕ್ರಾಂತಿ ವರದಿ ಬೆಳಗಾವಿ
28ನೇ ಜೂನ್ 2026 ರಂದು ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಎಲ್ಲ ಮಕ್ಕಳಿಗೆ ಪೋಲಿಯೋ ವಿರುದ್ಧ ರಕ್ಷಣೆ ನೀಡಲು ಬಾಯಿಯ ಮೂಲಕ ಪೋಲಿಯೋ 2 ಹನಿಗಳನ್ನು ಹಾಕುವ ಮೂಲಕ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೊದಲನೇ ದಿನ 28ನೇ ಜೂನ್ 2026 ರಂದು ಪೋಲಿಯೋ ಬೂತ್‌ಗಳಲ್ಲಿ ಹಾಗೂ ನಂತರದ 2-3 ದಿನಗಳಲ್ಲಿ ಮನೆ-ಮನೆ ಭೇಟಿಯ ಮೂಲಕ 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ವಿಶೇಷವಾಗಿ ವಲಸಿಗ ಸಮುದಾಯದ, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಸ್ಲಂಗಳಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ ಬಾಯಿಯ ಮೂಲಕ ಎರಡು ಹನಿ ಪೋಲಿಯೋ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಮಗುವು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳುವ ಗುರಿ ಹೊಂದಲಾಗಿದೆ.
ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿ 15ಕ್ಕೂ ಹೆಚ್ಚು ವರ್ಷಗಳಾಗಿದೆ. ಇದು ಒಂದು ಮಹತ್ತರ ಸಾಧನೆಯಾಗಿದ್ದರೂ, ಇತ್ತೀಚಿನ ದಿನಗಳಲ್ಲಿ ಭಾರತದ ನೆರೆಯ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬಂದ ಕಾರಣ ನಮ್ಮ ಭಾರತ ದೇಶದ ಮಕ್ಕಳನ್ನು ಅಪಾಯದಂಚಿನಲ್ಲಿರಿಸಿದೆ.
ನೆರಯ ದೇಶಗಳ ಮೂಲಕ ಭಾರತಕ್ಕೆ ಪೋಲಿಯೋ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಹಾಗೂ ಪೋಲಿಯೋ ಮುಕ್ತ ಭಾರತ ಸ್ಥಿತಿಯನ್ನು ಮುಂದುವರೆಸಿಕೊಂಡು ಹೋಗಲು ಮುಂಜಾಗ್ರತಾ ದೃಷ್ಟಿಯಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಮುಂದುವರಿಸಲಾಗಿದೆ. 0-5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ರಾಷ್ಟ್ರಿಯ ಲಸಿಕಾ ದಿನ (ಪಲ್ಸ್ ಪೋಲಿಯೋ) ವನ್ನು 28ನೇ ಜೂನ್ 2026 ರಂದು ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ.
ಜಿಲ್ಲೆಯ 4,71,041 ಮಕ್ಕಳಿಗೆ ಲಸಿಕೆ ಹಾಕುವ ಗುರಿ:
ಪ್ರತಿ ವರ್ಷದಂತೆ ಈ ವರ್ಷವೂ 28ನೇ ಜೂನ್ 2026 ರಂದು ಹಮ್ಮಿಕೊಳ್ಳಲಾಗಿರುವ ಒಂದು ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಪ್ರತಿ ಮಗುವಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ನೀಡಲಿದ್ದು, ಅಂದಾಜು 4,71,041 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.
ಜಿಲ್ಲೆಯಲ್ಲಿ ಎಲ್ಲ ಆಸ್ಪತ್ರೆ, ಅಂಗನವಾಡಿಗಳಲ್ಲಲ್ಲದೆ ಗುಡ್ಡಗಾಡು ಪ್ರದೇಶ, ಇಟ್ಟಿಗೆ ಬಟ್ಟಿ, ಕಾಮಗಾರಿ ಪ್ರದೇಶ, ವಲಸೆ ಪ್ರದೇಶಗಳು, ತೋಟದ ಮನೆ, ಪಟ್ಟಣ, ನಗರ ಪ್ರದೇಶಗಳ ರೈಲ್ವೇ ಸ್ಟೇಷನ್, ಏರ್‌ಪೋರ್ಟ್‌ಗಳಲ್ಲಿ, ಕೊಳಚೆ ಪ್ರದೇಶಗಳು ಪ್ರದೇಶಗಳಲ್ಲಿ ಕೂಡ ಆದ್ಯತೆ ಮೇರೆಗೆ ಲಸಿಕೆ ಹಾಕಲು ಕ್ರಮವಹಿಸಲಾಗಿದೆ. ಈಗಾಗಲೇ ತಾಲೂಕು ಮಟ್ಟದಲ್ಲಿ ತಹಸೀಲ್ದಾರ್‌ರು ಮತ್ತು ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲ ಇಲಾಖೆಗಳ ಸಮನ್ವಯ ಸಭೆ ಜರುಗಿಸಿ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ.
ಪಲ್ಸ್ ಪೋಲಿಯೋದ ಸಂಪೂರ್ಣ ಯಶಸ್ಸನ್ನು ಸಾಧಿಸಲು ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದಲ್ಲದೆ ಇತರೆ ಸಹಕಾರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಪಲ್ಸ್ ಪೋಲಿಯೋ ಕಾರ್ಯಕ್ರಮ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಸಿದ್ಧತೆ
ಗುರಿ (0-5 ವರ್ಷ) : 4.71,041
ಬೂತ್‌ಗಳ ಸಂಖ್ಯೆ: 2331
ಸಂಚಾರಿ ತಂಡ: 49
ಟ್ರಾನ್ಸಿಟ್ ತಂಡ: 74
ಲಸಿಕಾ ಕಾರ್ಯಕರ್ತರು: 9514
ಮೇಲ್ವಿಚಾರಕರು: 618
ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋಗೆ ಸಂಬಂಧಿಸಿದಂತೆ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸುಮಾರು 5 ವರ್ಷದೊಳಗಿನ 4,71,041 ಮಕ್ಕಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಅದಕ್ಕಾಗಿ 2331 ಬೂತ್‌ಗಳಲ್ಲಿ ಸುಮಾರು 9514 ಲಸಿಕಾ ಕಾರ್ಯಕರ್ತರನ್ನು ನೇಮಕ ಮಾಡಲಾಗಿದೆ. ಇದಲ್ಲದೇ 49 ಸಂಚಾರಿ ತಂಡಗಳನ್ನು ಮಾಡಲಾಗಿದ್ದು, 618 ಮೇಲ್ವಿಚಾರಕನ್ನು ನೇಮಿಸಿ ವ್ಯವಸ್ಥಿತಗೊಳಿಸಲಾಗಿದೆ. ಈ ಪಲ್ಸ್ ಕಾರ್ಯದಲ್ಲಿ ಮಕ್ಕಳಿಗೆ ಪಲ್ಸ್ ಹನಿಗಳನ್ನು ಹಾಕಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸೋಣ. ಪೋಲಿಯೋ ವಿರುದ್ಧ ಹೋರಾಡಲು ಮಕ್ಕಳಿಗೆ ಬಲ ತುಂಬೋಣ.
-ಡಾ.ಐ.ಪಿ.ಗಡದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಬೆಳಗಾವಿ.
