Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಬಾಗಲಕೊಟೆ ವಿವಿಯ ಪ್ರಥಮ ಘಟಿಕೋತ್ಸವ ; ರಾಜ್ಯಪಾಲರು ಭಾಗಿ

 

 ಜಮಖಂಡಿ;ನಗರದ ಬಾಗಲಕೋಟ ವಿಶ್ವವಿದ್ಯಾಲದ ಪ್ರಥಮ ಕಘಟಿಕೋತ್ಸವವು ಶುಕ್ರವಾರ ಏ 24 ರಂದು ಬೆಳಿಗ್ಗೆ 11.30 ಗಂಟೆಗೆ ಬಿಎಲ್‌ಡಿಇ. ಆವರಣದ ದರ್ಬಾರ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕುಲಸಚಿವ ಡಾ. ಆನಂದ ದೇಶಪಾಂಡೆ ತಿಳಿಸಿದರು. ಬುಧವಾರ ವಿವಿಯ ಸಭಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯಗಳ ಕುಲಾಧಿಪತಿ, ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ವಹಿಸಲಿದ್ದಾರೆ. ಸಹಕುಲಾಧಿಪತಿ, ಉನ್ನತಶಿಕ್ಷಣ ಸಚಿವ ಡಾ.ಎಂ,ಸಿ ,ಸುಧಾಕರ ಭಾಗವಹಿಸಲಿದ್ದು ಮಹರಾಷ್ಟ್ರ ನಾಗಪುರದ ಇಂಡಿಯನ್‌ ಇನ್ಸಿಟ್ಯೂಟ್‌ ಆಫ್‌ ಮ್ಯಾನೇಜ್ಮೆಂಟ್‌ನ ನಿರ್ದೇಶಕ ಭೀಮರಾಯ. ಎ,ಮೇತ್ರಿ, ಕುಲಸಚಿವರು, ಸಿಂಡಿಕೇಟ್‌ ಸದಸ್ಯರು, ವಿದ್ಯಾವಿಷಯಕ್‌ ಪರಿಷತ್‌ನ ಸದಸ್ಯರು ವೇದಿಕೆಯಲ್ಲಿರುತ್ತಾರೆ ಎಂದು ತಿಳಿಸಿದರು. ವಿಶ್ವ ವಿದ್ಯಾಲಯವು 2023ರಲ್ಲಿ ಪ್ರಾರಂಭವಾಗಿದೆ, 72 ಕಾಲೇಜುಗಳು ವಿವಿಯ ವ್ಯಾಪ್ತಿಗೆ ಬರುತ್ತವೆ. 2023-24 ರಲ್ಲಿ ಪ್ರವೇಶ ಪಡೆದ ವಿದ್ಯಾರ್ಥಿಗಳ ತಂಡ ತೇರ್ಗಡೆಯಾಗಿದೆ . ಒಟ್ಟು 16 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದಾರೆ. ಈ ಪೈಕಿ ಕಲಾ ವಿಭಾಗದಲ್ಲಿ 6, ಕಾಮರ್ಸ್‌ ನಲ್ಲಿ ಇಬ್ಬರು, ಎಜ್ಯುಕೇಷನ್‌ನಲ್ಲಿ ನಾಲ್ವರು ಹಾಗೂ ವಿಜ್ಞಾನ ವಿಭಾಗದಲ್ಲಿ ನಾಲ್ಕು ಜನ ವಿದ್ಯಾರ್ಥಿಗಳಿದ್ದಾರೆ ಎಂದು ಹೇಳಿದರು. ಮೂವರು ಸಾಧಕರಿಗೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್‌ ಪದವಿ ಪ್ರಧಾನ ಮಾಡಲಿದೆ. ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠ ಇಳಕಲ್‌ನ ಗುರುಮಹಾಂತ ಸ್ವಾಮಿಗಳು, ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರು, ಬಾಹ್ಯಾಕಾಶ ವಿಜ್ಞಾನಿ ಎಸ್‌,ನಂಬಿ ನಾಯರಾಯಣನ್‌, ಟೆಕ್‌ ಉದ್ಯಮಿ ಮಹೇಶ್‌ ಬೆಲ್ಲದ ಅವರನ್ನು ಗೌರವಡಾಕ್ಟರೇಟ್‌ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಕುಲಸಚಿವ ಸೋಮಲಿಂಗ ಗೆಣ್ಣೂರ, ಕುಲಸಚಿವೆ (ಮೌಲ್ಯಮಾಪನ) ಪ್ರೋ.ಲತಾ.ಕೆ.ಪಿ., ಹಣಕಾಸು ಅಧಿಕಾರಿ ಡಾ.ಚಿದಾನಂದ ಢವಳೇಶ್ವರ, ಪ್ರೋ.ದಯಾನಂದ .ಜಿ. ಸಹುಕಾರ, ಡಾ.ಮಲ್ಲಿಕಾರ್ಜುನ ಮರಡಿ , ಪ್ರೋ.ರಾಜೇಶ್ವರಿ ಮಠದ ಇದ್ದರು. ಎಂಡಿಎ ವಿಭಾಗದ ಪೂಜಾ ಅಸೊಡಿ ನಿರೂಪಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ