LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Koppal

*ನಾಳೆ ಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಆಚರಣೆ*


ಕೊಪ್ಪಳ/ಜಿಲ್ಲಾ ಹಾಗೂ ತಾಲೂಕ ಹೂಗಾರ ಸಮಾಜ , ಹೂಗಾರ ,ಜೀರ, ಗುರವ, ಪೂಜಾರ ,ಫುಲಾರಿ , ಫೂಲ್ ಮಾಲಿ ಸಮಾಜದ ಒಕ್ಕೂಟದ ವತಿಯಿಂದ ದಿ,5 ರ ಸೋಮವಾರ ಬೆಳಗ್ಗೆ 11:30 ಗಂಟೆಗೆ ನಗರದ ಭಾಗ್ಯನಗರ ರಸ್ತೆಯಲ್ಲಿರುವ ಪಾನಗಂಟಿ ಕಲ್ಯಾಣ ಮಂಟಪದಲ್ಲಿ ಶರಣ ಹೂಗಾರ ಮಾದಯ್ಯನವರ ಜಯ oತ್ಯೋತ್ಸವ ಆಚರಣೆ ಸಮಾರಂಭ ಜರುಗಲಿದೆ ಎಂದು ಸಮಾಜದ ತಾಲೂಕಾಧ್ಯಕ್ಷ ಸತೀಶ್ ಹೂಗಾರ್ ಹೇಳಿದರು, 
ಅವರು ಶನಿವಾರ ನಗರದ ಪತ್ರಿಕಾ ಭವನದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಈ ಕುರಿತು ಮಾಹಿತಿ ನೀಡಿದ ಅವರು ಸಮಾಜದ ಶೈಕ್ಷಣಿಕ ಆರ್ಥಿಕ ರಾಜಕೀಯ ಬೆಳವಣಿಗೆಗಾಗಿ ಸರಕಾರದ ಗಮನ ಸೆಳೆಯುವದರ ಜೊತೆಗೆ ಅಗತ್ಯ ಮೂಲಭೂತ ಸೌಕರ್ಯ ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಲು ಮತ್ತು ಸಮಾಜದ ಸಂಘಟನೆ ಬೆಳೆಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು, 
ಮುಂದುವರೆದು ಮಾತನಾಡಿ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಮೈನಳ್ಳಿ ಬಿಕ್ಕನಹಳ್ಳಿ ಶ್ರೀ ಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು, ಸಿನ್ನೂರು ನದಿ ಮಹಾಶಕ್ತಿ ಪೀಠದ ಶ್ರೀ ಗುರು ರಾಜೇಂದ್ರ ಶಿವಯೋಗಿಗಳು ವಹಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಲಿದ್ದಾರೆ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ,ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ರವರ ಉಪಸ್ಥಿತಿಯಲ್ಲಿ ಕೊಪ್ಪಳ ಶಾಸಕ ಹಾಗೂ ಬಳ್ಳಾರಿ ವಲಯ ಹಾಲು ಒಕ್ಕೂಟದ ಅಧ್ಯಕ್ಷ ಕೆ ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಸಂಸದ ಕೆ ರಾಜಶೇಖರ ಹಿಟ್ನಾಳ ,ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಿಧಾನ ಪರಿಷತ್ತಿನ ಸದಸ್ಯರಾದ ಹೇಮಲತಾ ನಾಯಕ್, ಶಶಿಲ್ ನಮೋಶಿ, ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಸೇರಿದಂತೆ ಮಾಜಿ ಸಂಸದ ಸಂಗಣ್ಣ ಕರಡಿ, ಬಿಜೆಪಿ ಮುಖಂಡರಾದ ಬಸವರಾಜ್ ಕ್ಯಾವಟರ್, ಮಹಾಂತೇಶ್ ಮೈನಹಳ್ಳಿ, ಜೆಡಿಎಸ್ ಮುಖಂಡ ಸಿ,ವಿ,ಚಂದ್ರಶೇಖರ, ನಗರಸಭೆಯ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು ಎಂದು ಸಮಾಜದ ತಾಲೂಕ ಅಧ್ಯಕ್ಷ ಸತೀಶ್ ಹೂಗಾರ್ ತಿಳಿಸಿ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ, ಈ ಸಂದರ್ಭದಲ್ಲಿ ಸಮಾಜದ ಪದಾಧಿಕಾರಿಗಳಾದ ತೇಜಪ್ಪ ಹೂಗಾರ್, ಶಿವಾನಂದಪ್ಪ ಹೂಗಾರ್, ಹನುಮೇಶ್ ಹೂಗಾರ್, ಎಂ ಪಿ ಗವಿ ಹೂಗಾರ್, ಸೇರಿದಂತೆ ಅನೇಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮತ್ತು ಯಶಸ್ವಿ ಗೊಳಿಸುವಂತೆ ಮನವಿ ಮಾಡಿಕೊಂಡು ಸರ್ವರನ್ನು ಸ್ವಾಗತಿಸಿದ್ದಾರೆ,

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ