Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಗರ ಮಾಲಾ ಯೋಜನೆಯಡಿ ಪ್ರವಾಸೋದ್ಯಮ ಅಭಿವೃದ್ದಿ 

ಬೀಳಗಿ ಮತಕ್ಷೇತ್ರದಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಕುರಿತು ಸಭೆ

ಬಾಗಲಕೋಟೆ, ಮೇ ೧೪: ಬೀಳಗಿ ತಾಲೂಕಿನ ಹೆರಕಲ್ ದಿಂದ ಆಲಮಟ್ಟಿ ಪ್ರದೇಶದವರೆಗೆ ವ್ಯಾಪಿಸಿರುವ ಆಲಮಟ್ಟಿ ಹಿನ್ನೀರಿನಲ್ಲಿ ಸಾಗರ ಮಾಲಾ ಯೋಜನೆಯಡಿ ರಿವರ್ ಕ್ರೂಸ್ ಪ್ರವಾಸೋದ್ಯಮ ಹಾಗೂ ಜಲ ಸಾಹಸ ಕ್ರೀಡಾ ಚಟುವಟಿಕೆಗಳ ಅಭಿವೃದ್ದಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಬೀಳಗಿ ಶಾಸಕರು ಆಗಿರುವ ಹಟ್ಟಿ ಚಿನ್ನದ ಗಣಿ ನಿಯಮಿತದ ಅಧ್ಯಕ್ಷ ಜೆ.ಟಿ.ಪಾಟೀಲ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬೀಳಗಿ ಮತಕ್ಷೇತ್ರದ ವ್ಯಾಪ್ತಿಯ ವಿವಿದೆಡೆ ಪ್ರವಾಸೋದ್ಯ ಅಭಿವೃದ್ಧಿ ವಿಷಯಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಯೋಜನೆಯಡಿ ಅಂದಾಜು ೧೨.೨೦ ಕೋಟಿ ರೂ.ಗಳ ವೆಚ್ಚದಲ್ಲಿ ಕ್ರೂಸ್ ಪ್ರವಾಸೋದ್ಯಮ ಅಭಿವೃದ್ದಿಯ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಈಗಾಗಲೇ ಹೆರಕಲ್ ಗ್ರಾಮ ವ್ಯಾಪ್ತಿಯ ಟರ್ಮಿನಲ್ ಕಟ್ಟಡ ನಿರ್ಮಾಣಕ್ಕೆ ಗುರುತಿಸಿದ ೨.೩೦ ಎಕರೆ ಜಮೀನನ್ನು ಲೀಸ್ ಮೇಲೆ ಕರ್ನಾಟಕ ಜಲಸಾರಿಗೆ ಜಲಮಂಡಳಿಗೆ ೧೫ ದಿನಗಳಲ್ಲಿ ಹಸ್ತಾಂತರಿಸಲು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆರಕಲ್‌ದಿಂದ ಚಿಕ್ಕಸಂಗಮದ ಪ್ರದೇಶದವರೆಗೆ ವ್ಯಾಪಿಸಿರುವ ಆಲಮಟ್ಟಿ ಹಿನ್ನೀರಿನಲ್ಲಿ ಬೋಟಿಂಗ್ ಸೇರಿದಂತೆ ಇತರೆ ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೆ ಕೆಬಿಜೆಎನ್‌ಎಲ್ ದಿಂದ ಅನುಮತಿ ಪಡೆಯಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದ ಮಾದರಿಯಲ್ಲಿ ಅನುಷ್ಠಾನಗೊಳಿಸಲು ವಿಸ್ತೃತ ಯೋಜನಾ ವರದಿ ಸಿದ್ದಪಡಿಸಲು ಪ್ರವಾಸೋದ್ಯಮ ಇಲಾಖೆಗೆ ಸೂಚನೆ ನೀಡಿದರು. ಸದರಿ ಸ್ಥಳದಲ್ಲಿ ಅರಣ್ಯ ವಸತಿ ವಿಹಾರಧಾಮ (ಜಂಗಲ್ ಲಾಡ್ಜಸ್ & ರೆಸಾರ್ಟ) ನಿರ್ಮಾಣಕ್ಕೆ ಜಮೀನು ಪಡೆಯಲು ಪ್ರಸ್ತಾವಣೆ ಸಲ್ಲಿಸಲು ತಿಳಿಸಲಾಯಿತು.
ಎರಡನೇ ಹಂತದಲ್ಲಿ ಆಲಮಟ್ಟಿ ಹಿನ್ನೀರಿನ ದ್ವೀಪದಲ್ಲಿ ಪ್ರವಾಸೋದ್ಯಮ ಚಟವಟಿಕೆಗಳ ಅಭಿವೃದ್ದಿ ಪಡಿಸಲು ತಿಳಿಸಿ, ಈ ಯೋಜನೆಯಡಿ ಕೈಗೊಳ್ಳಲಾಗುವ ಕೆಲಸ ಕಾರ್ಯಗಳನ್ನು ಕರ್ನಾಟಕ ಜಲಸಾರಿಗೆ ಮಂಡಳಿ ಕಾರವಾರ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಈ ಬಗ್ಗೆ ವಿಸ್ತೃತವಾದ ಕ್ರೀಯಾ ಯೋಜನೆಯನ್ನು ಸಿದ್ದಪಡಿಸಿಕೊಂಡು ಮೇ ೨೨ ರಂದು ಬೆಂಗಳೂರಿನಲ್ಲಿ ಪ್ರದರ್ಶಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಕಾರ್ಯಗಳ ಜೊತೆಯಲ್ಲಿ ಈ ವ್ಯಾಪ್ತಿಯಲ್ಲಿ ಅರಣ್ಯೀಕರಣ ಕಾರ್ಯ ಕೈಗೊಳ್ಳಲು ಅರಣ್ಯ ಇಲಾಖೆಗೆ ಸೂಚಿಸಿದರು.
ಬೀಳಗಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಚಿಕ್ಕಸಂಗಮ ಪ್ರವಾಸಿ ತಾಣ ಅಭಿವೃದ್ದಿಯು ಅಂತರರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತೆ ಆಗಬೇಕುರೀ ನಿಟ್ಟಿನಲ್ಲಿ ಕ್ರೀಯಾ ಯೋಜನೆಯನ್ನು ರೂಪಿಸುವ ಕೆಲಸವಾಗಬೇಕು. ಜಲ ಕ್ರೀಡೆ, ಕ್ರೂಸ್ ಸೇವೆ, ಐತಿಹಾಸಿಕ ಹಾಗೂ ಧಾರ್ಮಿಕ ತಾಣ ಹಾಗೂ ಪರಿಸರ ಪ್ರವಾಸ ತಾಣಗಳ ಅಭಿವೃದ್ದಿಯಿಂದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೊಸ ಚೈತನ್ಯ ಬರುವಂತೆ ಮಾಡಲು ತಿಳಿಸಿದರು. ಅಲ್ಲದೇ ಈ ಭಾಗದಲ್ಲಿ ೮೪ ವಿವಿಧ ಜಾತಿಯ ವಲಸೆ ಪಕ್ಷಿಗಳು ಬರುತ್ತಿದ್ದು, ಅನುಗಳಿಗೆ ಅನುಗುಣವಾಗಿ ಅಂದಾಜು ೫೦ ಸಾವಿರ ಸಸಿಗಳನ್ನು ಮಳೆಗಾಲದ ಪೂರ್ವದಲ್ಲಿ ನೆಡಲು ಅರಣ್ಯ ಇಲಾಖೆಗೆ ಸೂಚಿಸಿದರು. 
ಸಭೆಯಲ್ಲಿ ಪ್ರವಾಸೋದ್ಯಮ ಅಭಿವೃದ್ದಿ ಹಿನ್ನಲೆಯಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ರೀತಿಯಲ್ಲಿ ವಿಳಂಬಕ್ಕೆ ಅವಕಾಶ ಕೊಡದೇ ಪ್ರಾರಂಭಿಸಿದ ಅಭಿವೃದ್ದಿಯ ಕಾರ್ಯಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವವರೆಗೆ ತಮ್ಮ ಜವಾಬ್ದಾರಿ ಮುಖ್ಯವಾಗಿದೆ. ಇದನ್ನು ಮನಗಂಡು ಸರಿಯಾದ ರೀತಿಯಲ್ಲಿ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್ ಮನೋಹರ ಅಹಿರೆ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಚೈತ್ರಾ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಿ.ಎಸ್.ಹಿತ್ತಲಮನಿ, ಕೆಬಿಜೆಎನ್‌ಎಲ್ ಕಾರ್ಯಪಾಲಕ ಅಭಿಯಂತರ ತಾರಾನಾಥ ದೊಡಮನಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಕಾರ್ಯಪಾಲಕ ಅಭಿಯಂತರರು ತಾರಾನಾಥ ರಾಠೋಡ, ತಹಶೀಲ್ದಾರ ವಾಸುದೇವ ಸ್ಮಾಮಿ ಸೇರಿದಂತೆ ಇತರರೆ ಅಧಿಕಾರಿಗಳು ಉಪಸ್ಥಿತರಿದ್ದರು.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ