Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೈತ ಉತ್ಪಾದಕ ಸಂಸ್ಥೆಗಳಿಗೆ ತರಬೇತಿ


ನೇಸರಗಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಹಾಗೂ ಕೃಷಿ ಚಿಂತಕರಾದ ಮಾನ್ಯ ಡಾ. ಪ್ರಭಾಕರ ಬ. ಕೋರೆಯವರ ೭೮ ನೇ ಹುಟ್ಟುಹಬ್ಬದ ಅಂಗವಾಗಿ ೨೬ ನೇ ಕಾರ್ಯಕ್ರಮವಾಗಿ ಕೆಎಲ್‌ಇ ಕೃಷಿ ವಿಜ್ಞಾನ ಕೇಂದ್ರ, ಮತ್ತಿಕೊಪ್ಪ, ರೈತ ಉತ್ಪಾದಕ ಸಂಸ್ಥೆಗಳ ಉತ್ಕೃ? ಕೇಂದ್ರ, ಬೆಂಗಳೂರು ಹಾಗೂ ಜಲಾನಯನ ಮತ್ತು ತೋಟಗಾರಿಕೆ ಇಲಾಖೆ, ಬೆಳಗಾವಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟ  ಇವರ ಸಹಯೋಗದಲ್ಲಿ ಜಲಾನಯನ ಮತ್ತು ತೋಟಗಾರಿಕೆ ಇಲಾಖೆ ಪ್ರೋತ್ಸಾಹಿತ ಅಮೃತ ರೈತ ಉತ್ಪಾದಕರ ಸಂಸ್ಥೆಗಳ ಪದಾಧಿಕಾರಿಗಳಿಗೆ ರೈತ ಉತ್ಪಾದಕ ಕಂಪನಿಗಳ ರಚನೆ, ಜವಾಬ್ದಾರಿಗಳು, ಆಡಳಿತಾತ್ಮಕ ನಿರ್ವಹಣೆ ಹಾಗೂ ಮೌಲ್ಯವರ್ಧನೆ ವಿಶ್ಲೇ?ಣೆ ಕುರಿತು  ಎರಡು ದಿನಗಳ ತರಬೇತಿ ಕಾರ್ಯಕ್ರಮವನ್ನು ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕೇಂದ್ರದ ಮುಖ್ಯಸ್ಥರಾದ ಡಾ. ಮಂಜುನಾಥ ಚೌರಡ್ಡಿಯವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿದರು. ನಂತರ ಮಾತನಾಡಿದ ಅವರು, ರೈತರ ಗುಂಪನ್ನು ಬಲಪಡಿಸಲು ಹಾಗೂ ಪರಸ್ಪರ ಸಂಪರ್ಕದೊಂದಿಗೆ ಕೃಷಿಯನ್ನು ಲಾಭದಾಯಕ ಮಾಡುವ ಹಾಗೂ ಉತ್ತಮ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ದೇಶದಲ್ಲಿ ೧೦,೦೦೦ ರೈತ ಉತ್ಪಾದಕ ಸಂಸ್ಥೆಗಳನ್ನು ರಚನೆ ಮಾಡಲಾಗುತ್ತಿದೆ.  ಈ ಸಂಸ್ಥೆಗಳ ಮೂಲಕ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ರೈತರಿಗೆ ಅನೇಕ ತಂತ್ರಜ್ಞಾನಗಳ ಮಾಹಿತಿಯನ್ನು ರೈತ ಉತ್ಪಾದಕ ಸಂಸ್ಥೆಯ ಸದಸ್ಯರಿಗೆ ಕಾಲಕಾಲಕ್ಕೆ ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ ನೀಡಿ ರೈತರನ್ನು ಆರ್ಥಿಕವಾಗಿ ಸಬಲಗೊಳಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.  ಈ ಹಿನ್ನಲೆಯಲ್ಲಿ ರೈತ ಉತ್ಪಾದಕ ಸಂಸ್ಥೆಯ ಸದಸ್ಯರು ಕೃಷಿ ವಿಜ್ಞಾನ ಕೇಂದ್ರದ ಸಂಪರ್ಕವಿಟ್ಟುಕೊಂಡು ಉತ್ಪಾದಕತೆ ಹೆಚ್ಚಿಸಬೇಕೆಂದು ಕರೆ ನೀಡಿದರು.

ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃ? ಕೇಂದ್ರದ ಹಿರಿಯ ಸಲಹೆಗಾರರಾದ ಜಯಣ್ಣ ವಾಯ್. ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಗಳ ಕಾರ್ಯಕ್ಷಮತೆಯನ್ನು  ಬಲಪಡಿಸಲು ರೈತ ಉತ್ಪಾದಕ ಸಂಸ್ಥೆಗಳ ಉತ್ಕೃ? ಕೇಂದ್ರದ ವತಿಯಿಂದ ರೈತ ಉತ್ಪಾದಕ ಕಂಪನಿಗಳ ರಚನೆ, ಜವಾಬ್ದಾರಿಗಳು, ಆಡಳಿತ್ಮಾಕ ನಿರ್ವಹಣೆ ಹಾಗೂ ಮೌಲ್ಯ ಸರಪಳಿ ವಿಶ್ಲೇ?ಣೆ ಕುರಿತು ರಾಜ್ಯದ ರೈತ ಉತ್ಪಾದಕ ಸಂಸ್ಥೆಗಳಿಗೆ ತರಬೇತಿಯನ್ನು ಕಾಲಕಾಲಕ್ಕೆ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು ಹಾಗೂ ಸದಸ್ಯರು ಈ ಕಾರ್ಯಕ್ರಮದ ಪ್ರಯೋಜನ ಪಡೆದು ಸಂಸ್ಥೆಯ ಕಾರ್ಯಕ್ಷಮತೆಯನ್ನು ಉತ್ತಮಪಡಿಸಬೇಕೆಂದು ತಿಳಿಸಿದರು.  ಕೇಂದ್ರದ ವಿಜ್ಞಾನಿ ಎಸ್. ಎಮ್. ವಾರದ ನೈಸರ್ಗಿಕ ಕೃಷಿ ಕುರಿತು ಉಪನ್ಯಾಸ ನೀಡಿದರು.  ಪ್ರವೀಣ ಯಡಹಳ್ಳಿ ಕಾರ್ಯಕ್ರಮದಲ್ಲಿ ಸ್ವಾಗತಿಸಿ ವಂದಿಸಿದರು, ಕೇಂದ್ರದ ಸಿಬ್ಬಂದಿ ಶಂಕರಗೌಡ ಪಾಟೀಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

                                                  ಮಂಜುನಾಥ ಚೌರಡ್ಡಿ

          ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ