ಜಮಖಂಡಿ; ಸ್ಥಳೀಯ ಜೀನಿಯಸ್ ಶಾಲೆಯ ಹಳೆಯ ವಿದ್ಯಾರ್ಥಿಗಳು ಭಾರತೀಯ ಸೇನೆಯ ಅಗ್ನಿವೀರ ಯೋಜನೆಯಡಿ ಆಯ್ಕೆಯಾದ ಮೂವರು ವಿದ್ಯಾರ್ಥಿಗಳನ್ನು ಶಾಲೆಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಅಗ್ನಿವೀರರಾಗಿ ಆಯ್ಕೆಯಾದ ಕು. ಅಭಿನಂದನ ಶ್ರೀ. ಯಾಬನ್ನವರ, ಕು. ಅನಿರುದ್ಧ ಬಾ. ಮಡಿವಾಳರ ಹಾಗೂ ಕು. ಸಿದ್ದು ಬ. ಇಟ್ಟಿ ಅವರನ್ನು ಶಾಲೆಯ ವತಿಯಿಂದ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ವಿದ್ಯಾರ್ಥಿಗಳ ಈ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದ್ದು, ದೇಶಸೇವೆಯತ್ತ ಯುವಕರು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶ್ರೀಶೈಲ ಶಂ. ರಾವಳೋಜಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀ ಶಿವಲಿಂಗ ಹ. ಕುಂಬಾರ, ಮುಖ್ಯೋಪಾಧ್ಯಾಯರಾದ ಪರಶುರಾಮ ಸಿ. ಪಾಟೀಲ ಹಾಗೂ ಶಾಲೆಯ ಶಿಕ್ಷಕ-ಶಿಕ್ಷಕಿಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.