ಚನ್ನಮ್ಮ ಕಿತ್ತೂರು : ತಾಲೂಕಿನ ನಿಚ್ಚಣಕಿ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಕುಸುಮಾ ಅವರು ತಮ್ಮ ದಕ್ಷ ಹಾಗೂ ಪ್ರಾಮಾಣಿಕ ಸೇವೆಯ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರ ಕರ್ತವ್ಯ ನಿಷ್ಠೆಯನ್ನು ಗುರುತಿಸಿ ಕಿತ್ತೂರು ತಾಲೂಕು ಪಂಚತ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ ಅವರು ಇವರನ್ನು 'ಉತ್ತಮ ನೌಕರರು' ಎಂದು ಪ್ರಶಂಸಿಸಿದ್ದಾರೆ. ಕೇವಲ ಆಡಳಿತಾತ್ಮಕ ಕೆಲಸಗಳಲ್ಲದೆ, ಕನ್ನಡ ನಾಡು-ನುಡಿ ಹಾಗೂ ಸಾಹಿತ್ಯಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ಹೊಂದಿರುವ ಇವರು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಗಳಿಗೆ ಸಕ್ರಿಯವಾಗಿ ಸಹಕರಿಸುತ್ತಾ ಬಂದಿದ್ದಾರೆ. ಇವರ ಈ ಬಹುಮುಖಿ ಸೇವೆಯನ್ನು ಗೌರವಿಸಿ ಕಿತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪರಿಷತ್ತಿನ ಪದಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು
