LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ತಿರುಪತಿಯಲ್ಲಿ ಏಜೆಂಟ್​​​​​ಗಳಿಗೆ ಕಡಿವಾಣ ಹಾಕಲು ಟಿಟಿಡಿ ಸೂಪರ್ ಪ್ಲಾನ್!

ತಿರುಪತಿ:  ತಿರುಮಲ ದೇವಸ್ಥಾನ ಆಡಳಿತ ಮಂಡಳಿ  ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಇಒ) ಜೆ. ಶ್ಯಾಮಲಾ ರಾವ್ ಅವರು ಶ್ರೀವಾರಿ ಭಕ್ತರಿಗೆ ಟಿಟಿಡಿ ಒದಗಿಸುವ ಆನ್‌ಲೈನ್ ಅರ್ಜಿ ಸೇವೆಗಳಿಗೆ ಆಧಾರ್ ಲಿಂಕ್ ಮಾಡಲು ಮುಂದಾಗಿದ್ದು, ಇದರಿಂದ ಪಾರದರ್ಶಕತೆಯ ಜತೆಗೆ ದಲ್ಲಾಳಿ ವ್ಯವಸ್ಥೆಯನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ.

ತಿರುಪತಿಯ ಟಿಟಿಡಿ ಆಡಳಿತ ಭವನದ ಕಾನ್ಫರೆನ್ಸ್ ಹಾಲ್‌ನಲ್ಲಿ ಯುಐಡಿಎಐ (ಆಧಾರ್ ಸಂಸ್ಥೆ), ಟಿಸಿಎಸ್, ಜಿಐಒ ಮತ್ತು ಟಿಟಿಡಿಯ ಐಟಿ ವಿಭಾಗದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಇಒ, ಇಲ್ಲಿಯವರೆಗೆ ಟಿಟಿಡಿ ಭಕ್ತರಿಗೆ ದರ್ಶನ, ವಸತಿ, ಆರ್ಜಿತ ಸೇವೆಗಳು, ಶ್ರೀವಾರಿ ಸೇವೆ ಮತ್ತಿತರ ಸೇವೆಗಳನ್ನು ಆನ್‌ಲೈನ್‌ನಲ್ಲಿ ಕಾಯ್ದಿರಿಸಲು ಅನುವು ಮಾಡಿಕೊಡಲಾಗುತ್ತಿದೆ.

ಆದರೆ, ಇನ್ನು ಮುಂದೆ ಆಧಾರ್ ಲಿಂಕ್ ಮಾಡುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಮತ್ತು ಈ ಅರ್ಜಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಇಒ ಐಟಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಯುಐಡಿಐ ಅಧಿಕಾರಿಗಳ ಸಹಕಾರ ತೆಗೆದುಕೊಳ್ಳಬೇಕು. ಆಧಾರ್ ಮೂಲಕ ಯಾತ್ರಾರ್ಥಿಗಳ ಗುರುತಿಸುವಿಕೆ, ತಪಾಸಣೆ, ಬಯೋಮೆಟ್ರಿಕ್ ಪರಿಶೀಲನೆ, ಆಧಾರ್ ನಕಲು ತಡೆಯುವುದು ಹೇಗೆ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಿದರು. ಯುಐಡಿಎಐ ಅಧಿಕಾರಿಗಳು ಪವರ್ ಪಾಯಿಂಟ್ ಪ್ರೆಸೆಂಟೇಶನ್ ಮೂಲಕ ಅರ್ಜಿಗಳಿಗೆ ಆಧಾರ್ ಅನ್ನು ಹೇಗೆ ಲಿಂಕ್ ಮಾಡುವುದು ಎಂಬ ಬಗ್ಗೆ ವಿವರಿಸಿದರು. ಶೀಘ್ರದಲ್ಲೇ ಈ ಬಗ್ಗೆ ಆಡಳಿತ ಮಂಡಳಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್