Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್




ಬಳ್ಳಾರಿ,ಜೂ.12: ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಪಡೆದುಕೊಂಡು ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ  ಕ್ಲಿನಿಕ್‌ಗಳನ್ನು ಕೊಳಗಲ್ಲು ಗ್ರಾಮದಲ್ಲಿ ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಹೇಳಿದ್ದಾರೆ.
ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆ ಮೇರೆಗೆ ಬಳ್ಳಾರಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಬ್ದುಲ್ಲಾ.ಆರ್ ನೇತೃತ್ವದ ತಂಡವು ಕುರುಗೋಡು ತಾಲ್ಲೂಕಿನ ಕೊಳಗಲ್ಲು ಗ್ರಾಮದಲ್ಲಿ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಕೇವಲ ಪಿ.ಯು.ಸಿ ತನಕ ಓದಿಕೊಂಡು ಔಷಧಿಗಳ ಬಗ್ಗೆ ಮಾಹಿತಿ ಪಡೆದುಕೊಂಡು ಜನತೆಗೆ ಚಿಕಿತ್ಸೆ ನೀಡುತ್ತಿದ್ದ ಮಹೇಶ್ ಕ್ಲಿನಿಕ್, ಮೆಹಬೂಬ್ ಭಾಷ ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರು ತಮ್ಮ ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸಬೇಕು. ಅವರಿಂದಲೇ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ.
ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬAದಲ್ಲಿ ಅವರ ವೈದ್ಯಕೀಯ ಪದವಿ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರು ಎಂದು ಕಂಡುಬAದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಿದರೆ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ರಡಿ ಕ್ರಮ ಜರುಗಿಸಬಹುದಾಗಿದೆ ಎಂದು ಹೇಳಿದ್ದಾರೆ.
ದಾಳಿಯ ವೇಳೆ ಕುರುಗೋಡು ವೈದ್ಯಾಧಿಕಾರಿ ಡಾ.ಮಂಜುನಾಥ ಜವಳಿ, ಜಿಲ್ಲಾ ಕೆ.ಪಿ.ಎಮ್.ಇ ವಿಭಾಗದ ಆರೋಗ್ಯ ನಿರೀಕ್ಷಣಾಧಿಕಾರಿ ಅರುಣ್ ಕುಮಾರ್, ಗೋಪಾಲ್ ಕೆ.ಹೆಚ್ ಇದ್ದರು





Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ