LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

IISc ವಿದ್ಯಾರ್ಥಿಗಳ ಹಣ ದುರ್ಬಳಕೆ: ಇಬ್ಬರು ಹೊರಗುತ್ತಿಗೆ ಸಿಬ್ಬಂದಿ ಬಂಧನ

ಬೆಂಗಳೂರು: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ (ಐಐಎಸ್‌ಸಿ) ವಿದ್ಯಾರ್ಥಿಗಳಿಗಾಗಿ ಮಂಜೂರಾದ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡು ವಂಚಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ಸಿಬ್ಬಂದಿಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ತಾತ್ಕಾಲಿಕ ಕಾರ್ಯದರ್ಶಿ ವಿ.ಸೌಂದರ್ಯ ಹಾಗೂ ಸಹಾಯಕಿ ಆ‌ರ್.ದೀಪಿಕಾ ಎಂಬಿಬ್ಬರನ್ನು ಬಂಧಿಸಲಾಗಿದೆ. ಇಬ್ಬರೂ ಸಹ ಹೊರಗುತ್ತಿಗೆ ಸಂಸ್ಥೆಯಾದ ವೆಂಕಟೇಶ್ವರ ಎಂಟರ್‌ಪ್ರೈಸಸ್ ಮೂಲಕ ನೇಮಕಗೊಂಡು ಐಐಎಸ್‌ಸಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.


ಐಐಎಸ್‌ಸಿ ವಿದ್ಯಾರ್ಥಿಗಳ ವಿದೇಶ ಪ್ರಯಾಣಕ್ಕೆ ಪಾವತಿಸಬೇಕಾದ ಮುಂಗಡ ಹಣ ಅಂದಾಜು 80 ಲಕ್ಷ ರೂ.ಗಳನ್ನು ಇಬ್ಬರೂ ದುರ್ಬಳಕೆ ಮಾಡಿಕೊಂಡಿದ್ದರು. ಹಣ ಮಂಜೂರಾತಿ ಆದೇಶಗಳನ್ನು ತಿರುಚಿ, ವಿದ್ಯಾರ್ಥಿಗಳ ಬ್ಯಾಂಕ್ ಖಾತೆ ವಿವರಗಳನ್ನು ಕಾನೂನುಬಾಹಿರವಾಗಿ ಬದಲಾಯಿಸಿ ತಮ್ಮ ಕುಟುಂಬದ ಸದಸ್ಯರ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದರು. ಸಂಸ್ಥೆಯ ಆಂತರಿಕ ತನಿಖೆಯಲ್ಲಿ ಇಬ್ಬರು ಹಣ ದುರ್ಬಳಕೆ ಮಾಡಿಕೊಂಡಿರುವುದು ಪತ್ತೆಯಾಗಿತ್ತು. ಇಬ್ಬರೂ ಸಹ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ಸಂಸ್ಥೆಯ ರಿಜಿಸ್ಟ್ರಾ‌ರ್ ಶ್ರೀಧ‌ರ್ ವಾರಿಯರ್ ಅವರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್