LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಜೋಧ್‌ಪುರದಲ್ಲಿ ಭುಗಿಲೆದ್ದ ಕೋಮುಗಲಭೆ: ಇಬ್ಬರು ಪೊಲೀಸರು ಗಾಯ

ಜೋಧ್‌ಪುರ: ರಾಜಸ್ಥಾನದ ಜೋಧ್‌ಪುರದಲ್ಲಿ ಕೋಮುಗಲಭೆ ಭುಗಿಲೆದಿದ್ದು, ಕಲ್ಲು ತೂರಾಟದಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ. ಅಂಗಡಿಯೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ಎರಡು ವಾಹನಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಇಲ್ಲಿನ ಸೂರ್ ಸಾಗರ್ ಪ್ರದೇಶದ ರಾಜಾರಾಮ್ ವೃತ್ತದ ಬಳಿಯ ಈದ್ಗಾ ಹಿಂಭಾಗದಲ್ಲಿ ಗೇಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಘರ್ಷಣೆ ಆರಂಭವಾಗಿದೆ. ಈದ್ಗಾ ಹಿಂಬದಿಯಲ್ಲಿ ಜನರ ಓಡಾಟ ಇಲ್ಲದಂತೆ ಗೇಟ್ ಹಾಕುತ್ತಿರುವುದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ನಿನ್ನೆ ರಾತ್ರಿ, ಉದ್ವಿಗ್ನತೆ ಉಲ್ಬಣಿಸಿ ಕೆಲವರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ರಾಜೇಶ್ ಕುಮಾರ್ ಯಾದವ್ ಹೇಳಿ ದ್ದಾರೆ.

"ಒಂದು ಅಂಗಡಿ ಮತ್ತು ಟ್ರಾಕ್ಟರ್‌ಗೆ ಬೆಂಕಿ ಹಚ್ಚಲಾಗಿದೆ ಮತ್ತು ಜೀಪ್ ನ್ನು ಧ್ವಂಸಗೊಳಿಸಲಾಗಿದೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. ಪೊಲೀಸರು ಲಾಠಿ ಹಾಗೂ ನಾಲ್ಕೈದು ಸುತ್ತು ಅಶ್ರುವಾಯು ಸೆಲ್ ಸಿಡಿಸಿ ಜನರನ್ನು ಚದುರಿಸಿದ್ದಾರೆ. ಶುಕ್ರವಾರ ತಡರಾತ್ರಿ ವೇಳೆಗೆ ಪರಿಸ್ಥಿತಿ ಹತೋಟಿಗೆ ಬಂದರೂ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಶನಿವಾರ ಬೆಳಗ್ಗೆ ಭಾರೀ ಪೊಲೀಸ್ ಮತ್ತು ರಾಜಸ್ಥಾನ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ. ಎರಡೂ ಕಡೆಯ ದೂರುಗಳ ಆಧಾರದ ಮೇಲೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ರಾಜೇಂದ್ರ ಸಿಂಗ್ ಹೇಳಿದ್ದಾರೆ. ಎರಡೂ ಕಡೆಯ ಜನರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಶಂಕಿತರನ್ನು ಬಂಧಿಸಲು ಪೊಲೀಸರು ಇನ್ನೂ ಸ್ಥಳೀಯ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್