Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚ್ಚಂಗಿದುರ್ಗ : ಪುಷ್ಪಗಿರಿ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ

ಹರಪನಹಳ್ಳಿ: ತಾಲ್ಲೂಕಿನ ಉಚ್ಚಂಗಿದುರ್ಗ ಗ್ರಾಮದ ಪುಷ್ಪಗಿರಿ ಪಬ್ಲಿಕ್ ಶಾಲೆಯಲ್ಲಿ ಗುರುವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಪ್ರಚಲಿತ ವಿದ್ಯಮಾನ, ವಿಜ್ಞಾನದ ಆಗು ಹೋಗುಗಳ ಅರಿವಿಗೆ ಉತ್ತಮ ವೇದಿಕೆಯಾಯಿತು.


ವಿವಿಧ ಮಾದರಿಗಳು, ರಸಗೊಬ್ಬರ ತಯಾರಿಕಾ ವಿಧಾನ, ಹಸಿ ಹಾಗೂ ಒಣ ಕಸ ವಿಂಗಡಣೆ, ಆಹಾರ ಸಂಸ್ಕರಣೆಯ ವಿಧಾನಗಳು, ಮಣ್ಣಿನ ಫಲವತ್ತತೆ ಹೆಚ್ಚಿಸುವುದು, ಪರಿಸರ ಸಂರಕ್ಷಣೆ, ನೀರಿನ ಮೂಲಗಳು ಹಾವುಗಳ ಸಂರಕ್ಷಣೆ, ಅರಣ್ಯ ನಾಶದಿಂದಾಗುವ ದುಷ್ಪರಿಣಾಮಗಳು, ಪರಿಸರ ಸಮತೋಲನ ಕಾಪಾಡುವಲ್ಲಿ ವನ್ಯಜೀವಿಗಳ ಪಾತ್ರ ಮುಂತಾದ ಅಂಶಗಳನ್ನೊಳಗೊಂಡ 165 ಮಾದರಿಗಳನ್ನು ವಿದ್ಯಾರ್ಥಿಗಳು ತಯಾರಿಸಿ ಗಮನ ಸಳೆದರು.


ರಸ್ತೆ ದಾಟುವಾಗ ಸಾರ್ವಜನಿಕರು ಅನುಸರಿಸಬೇಕಾದ ಕ್ರಮಗಳು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಪಾಲಿಸಬೇಕಾದ ನಿಯಮಗಳು, ಉಲ್ಲಂಘಿಸಿದರೆ ದಂಡ ವಿಧಿಸುವ ಪ್ರಕ್ರಿಯೆಗಳ ಬಗ್ಗೆ ಸುಲಲಿತವಾಗಿ ವಿವರಿಸುವ ಮೂಲಕ ವಿದ್ಯಾರ್ಥಿಗಳು ಮೆಚ್ಚುಗೆಗೆ ಪಾತ್ರರಾದರು.


ವಿಜ್ಞಾನ ವಸ್ತು ಪ್ರದರ್ಶನಕ್ಕೆ ಮಕ್ಕಳ ಪೋಷಕರು ಹಾಗೂ ಸಾರ್ವಜನಿಕರು ಭೇಟಿನೀಡಿದ್ದರು. ಮಕ್ಕಳು ತಯಾರಿಸಿದ ವಿಜ್ಞಾನದ ಮಾದರಿಗಳನ್ನು ವೀಕ್ಷಣೆ ಮಾಡಿ ಸಂತಸಪಟ್ಟರು. ಮಕ್ಕಳಲ್ಲಿರುವ ಕ್ರಿಯಾಶೀಲತೆ, ವಿಜ್ಞಾನದ ಬಗ್ಗೆ ಇರುವ ಕುತೂಹಲ ಕಂಡು ಬೆರಗುಗೊಂಡರು.

ಶಾಲಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಕ್ಕಳ ಹಾಗೂ ಪೋಷಕರ ಕ್ರೀಡಾಕೂಟದಲ್ಲಿ ಭಾಗವಹಿಸಿ ವಿಜೇತರಾದ ಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಅಭಿನಂದಿಸಲಾಯಿತು.ತರಗತಿ ಉತ್ತಮ ವಿದ್ಯಾರ್ಥಿ ಪ್ರಶಸ್ತಿ, ಉತ್ತಮ ವಸ್ತು ಪ್ರದರ್ಶನದಲ್ಲಿ ಗಮನ ಸೆಳೆದ ಮಾದರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.


ದೇಶದ ಸಮಗ್ರ ಪ್ರಗತಿಗೆ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ. ಪುಷ್ಪಗಿರಿ ಶಾಲೆ ಗ್ರಾಮೀಣ ಭಾಗದಲ್ಲಿ ಗುಣ ಮಟ್ಟದ ಶಿಕ್ಷಣ ನೀಡುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದು ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದ ಡಾ.ಶಕುಂತಲಾ ತಿಳಿಸಿದರು.'ಮಕ್ಳಳ ಸೃಜನಶೀಲತೆ, ಆಸಕ್ತಿ, ಪ್ರತಿಭೆ ಅನಾವರಣಗೊಳ್ಳಲು ವಸ್ತು ಪ್ರದರ್ಶನ ಸಾಕ್ಷಿಯಾಗಿದೆ. ಕಲಿಕೆಯ ಜ್ಞಾನ ಎಲ್ಲರಿಗೂ ತಲುಪಲಿ'ಎಂದು ಶಾಲಾ ಕಾರ್ಯದರ್ಶಿ ನಾಗರಾಜಪ್ಪ ತಿಳಿಸಿದರು.ಪುಷ್ಪಗಿರಿ ಕಲ್ಯಾಣ ಸಂಸ್ಥೆ ಅಧ್ಯಕ್ಷ ಮಹಾರುದ್ರಾಚರ್, ಪರೀಕ್ಷೆಗಳು ಸಮೀಪಿಸುತ್ತಿದೆ, ಪೋಷಕರು ಮಕ್ಕಳಿಗೆ ಮನೆಯಲ್ಲಿ ಓದಲು ಉತ್ತೇಜಿಸಬೇಕು ಎಂದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ನಿರ್ದೇಶಕ ಪ್ರಶಾಂತ್ ಎನ್. ಮುಖ್ಯ ಶಿಕ್ಷಕ ಸಂತೋಷ್ ಸೇರಿದಂತೆ ಶಿಕ್ಷಕರು ಪೋಷಕರು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ