Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಳಮಟ್ಟದಿಂದ ಪಕ್ಷ ಸಂಘಟನೆಗೆ ಒತ್ತು: ಉಮ್ಮರ್ ಫಾರೂಕ್






ಬಳ್ಳಾರಿ: 17..ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಳ್ಳಾರಿ ಗ್ರಾಮಾಂತರ ಮಂಡಲದ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಮಿಂಚೇರಿ ಗ್ರಾಮದ ಯುವ ನಾಯಕ ಉಮ್ಮರ್ ಫಾರೂಕ್ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನ ಹಾಗೂ ಜಿಲ್ಲಾ ಘಟಕದ ಸೂಚನೆಯ ಮೇರೆಗೆ ಈ ಜವಾಬ್ದಾರಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.


ಈ ಕುರಿತು ಪ್ರಕಟಣೆ ನೀಡಿರುವ ಉಮ್ಮರ್ ಫಾರೂಕ್, “ನನ್ನ ಮೇಲೆ ವಿಶ್ವಾಸವಿಟ್ಟು ಮಹತ್ವದ ಹೊಣೆಗಾರಿಕೆಯನ್ನು ನೀಡಿದ ಪಕ್ಷದ ಎಲ್ಲಾ ಹಿರಿಯ ನಾಯಕರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವುದು ಹಾಗೂ ಅಲ್ಪಸಂಖ್ಯಾತ ಸಮುದಾಯದವರನ್ನು ಪಕ್ಷದ ಮುಖ್ಯವಾಹಿನಿಗೆ ತರುವ ಕೆಲಸಕ್ಕೆ ಆದ್ಯತೆ ನೀಡಲಾಗುತ್ತದೆ,” ಎಂದು ಹೇಳಿದ್ದಾರೆ.


ಬಿಜೆಪಿ ಸರ್ಕಾರಗಳು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಮಾಹಿತಿ ಪ್ರತಿಯೊಬ್ಬ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಯುವ ಸಮುದಾಯಕ್ಕೆ ರಾಜಕೀಯದಲ್ಲಿ ಅವಕಾಶ ಕಲ್ಪಿಸುವ ಉದ್ದೇಶದಿಂದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.


ತಮ್ಮ ಆಯ್ಕೆಗೆ ಸಹಕರಿಸಿದ ಬಳ್ಳಾರಿ ಜಿಲ್ಲಾ ಬಿಜೆಪಿ ಅಧ್ಯಕ್ಷರು, ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರಿಗೆ ಉಮ್ಮರ್ ಫಾರೂಕ್ ಧನ್ಯವಾದ ತಿಳಿಸಿದ್ದಾರೆ. ಯುವ ನಾಯಕನಾಗಿ ಇವರ ಆಯ್ಕೆಯು ಕ್ಷೇತ್ರದಲ್ಲಿ ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲಿದೆ ಎಂದು ಕಾರ್ಯಕರ್ತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.







Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ