Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣ; 7ನೇ ದಿನದತ್ತ ಅಹೋರಾತ್ರಿ ಧರಣಿ

ತಮಟೆ ಚಳುವಳಿ” ಮೂಲಕ ಒಳಮೀಸಲಾತಿ ವರ್ಗೀಕರಣ ವಿರೋಧಿಸಿ ಬಂಜಾರರ ಪ್ರತಿಭಟನೆ

ಗದಗ 13 : ಪರಿಶಿಷ್ಟ ಜಾತಿಗಳಲ್ಲಿನ ಅವೈಜ್ಞಾನಿಕ ಒಳಮೀಸಲಾತಿ ವರ್ಗೀಕರಣದ ವಿರುದ್ಧವಾಗಿ, ಕರ್ನಾಟಕ ಬಂಜಾರ ಹಕ್ಕು ಸಂರಕ್ಷಣಾ ಸಮಿತಿ ಹಾಗೂ ಜಿಲ್ಲಾ ಬಂಜಾರ ಸಮುದಾಯದ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ, ನಗರದ ಗಾಂಧಿ ವೃತ್ತದಲ್ಲಿ ಸೋಮವಾರದಿಂದ ಆರಂಭವಾದ ಬೃಹತ್ ಪ್ರತಿಭಟನೆ ಮತ್ತು ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ ಶನಿವಾರ 7ನೇ ದಿನದತ್ತ ತಲುಪಿದೆ.

ಈ ಹೋರಾಟದಲ್ಲಿ ಜಿಲ್ಲೆಯ ವಿವಿಧ ತಾಂಡಾಗಳ ಸಾವಿರಾರು ಜನರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಶನಿವಾರ ಗದಗ ಜಿಲ್ಲೆಯ 72 ತಾಂಡಾಗಳ ಪೈಕಿ ತಮ್ಮ ವೇಳಾಪಟ್ಟಿಯಂತೆ - ಕಬಲಾಯತ್ ಕಟ್ಟಿ, ಹಮ್ಮಿಗಿ, ಮಜ್ಜೂರ, ಅಕ್ಕಿಗುಂದ, ಉಳ್ಳಟ್ಟಿ, ಬೆಣಸಮಟ್ಟಿ, ಗೌಡಗೇರಿ ತಾಂಡಾಗಳ ಬಂಜಾರರು ಬೆಳಿಗ್ಗೆ 11.00 ಗಂಟೆಗೆ ಗದಗ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ “ತಮಟೆ ಚಳುವಳಿ” ಮೂಲಕ ಮೆರವಣಿಗೆಯಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಅಹೋರಾತ್ರಿ ಧರಣಿಯಲ್ಲಿ ಭಾಗವಹಿಸಿದರು.

ಪ್ರತಿಭಟನಾಕಾರರು ತಮಟೆ, ನಗಾರಿ ಮೂಂತಾದ ವಾದ್ಯಗಳನ್ನು ರಸ್ತೆಯುದ್ದಕ್ಕೂ ಬಾರಿಸುತ್ತಾ “ತಮಟೆ ಚಳುವಳಿ” ಮುಖಾಂತರ ಸರ್ಕಾರದ ಅವೈಜ್ಞಾನಿಕ ಒಳಮೀಸಲಾತಿ ನಿರ್ಧಾರವನ್ನು ಕೂಡಲೇ ಕೈಬಿಡಬೇಕೆಂದು ಎಚ್ಚರಿಕೆ ನೀಡಿದರು.

ಈ ಪ್ರತಿಭಟನೆಯಲ್ಲಿ ಕೆ.ಸಿ. ನಭಾಪುರ, ಎನ್.ಟಿ ಪೂಜಾರ, ಪರಮೇಶ ನಾಯಕ್, ಚಂದು ನಾಯಕ್, ಧನಸಿಂಗ್ ನಾಯಕ್, ಈಶ್ವರ್ ನಾಯಕ್, ಐ.ಎಸ್. ಪೂಜಾರ್, ಟಿ.ಡಿ. ಪೂಜಾರ್, ಮಜ್ಜುರ್ ತಾಂಡೆ ಆನಂದ ನಾಯಕ್, ಶಿವಪ್ಪ ಲಮಾಣಿ, ಚನ್ನಪ್ಪ ಕಾರಬಾರಿ, ವಸಂತ್ ಲಮಾಣಿ, ವೆಂಕಪ್ಪ ಲಮಾಣಿ, ಬಾಲು ಲಮಾಣಿ, ಕೃಷ್ಣ ಲಮಾಣಿ, ಭೀಮಪ್ಪ ಪೂಜಾರಿ, ರಾಜೇಶ್ ಲಮಾಣಿ, ಧನ್ಯಪ್ಪ ಲಮಾಣಿ, ಸುರೇಶ ಲಮಾಣಿ, ಬಾಪೂಜಿ ಲಮಾಣಿ, ಕಬಲಾಯತ್ ಕಟ್ಟಿ, ನೂರಪ್ಪ ನಾಯಕ್, ರಾಮಪ್ಪ ದೊಡ್ಮನಿ, ಕೇಶಪ್ಪಾ ಲಮಾಣಿ, ಧರಮಪ್ಪ ಲಮಾಣಿ, ಥಾಕುರ್ ಲಮಾಣಿ, ಅಕ್ಕಿಗುಂದ ತಾಂಡಾದ ವೆಂಕಪ್ಪ ಕಾರಬಾರಿ ಸಕ್ರಪ್ಪ ನಾಯಕ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ