Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಭೂಗತ ಪಾತಕಿ ಪ್ಲ್ಯಾನ್

ಮುಂಬೈ,15: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡು ಹಾರಿಸಿದ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ತೀವ್ರ ವಿಚಾರಣೆಗೂ ಒಳಪಡಿಸಿದ್ದಾರೆ.

ಈ ವಿಚಾರಣೆಯಲ್ಲಿ ಭಯಬೀಳಿಸುವಂತ ಪಾತಕಿಯೊಬ್ಬನ ಹೆಸರು ಕೇಳಿ ಬಂದಿದೆ. ಸಲ್ಮಾನ್ ಹತ್ಯೆಗೆ ನಟೋರಿಸ್ ರೋಹಿತ್ ಗೊದಾರ ಸಂಚು ಹಾಕಿದ್ದ ಅನ್ನುವ ಅಂಶ ಬೆಳಕಿಗೆ ಬಂದಿದೆ.

ಮೊನ್ನೆಯಷ್ಟೇ ಮುಂಬೈ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದರು. ಬಂಧನಕ್ಕೆ ಒಳಗಾದ 6ನೇ ಆರೋಪಿ ಇವನಾಗಿದ್ದಾನೆ. ಬಂಧಿತ ಆರೋಪಿಯನ್ನ ಹರ್ಪಾಲ್ ಎಂದು ಗುರುತಿಸಲಾಗಿದೆ. ಮೊನ್ನೆಯಷ್ಟೇ ಮೊಹಮ್ಮದ್ ರಫೀಕ್ ಚೌಧರಿ ಹೆಸರಿನ 5ನೇ ಆರೋಪಿಯನ್ನು ರಾಜಸ್ಥಾನದ ನಾಗೌರ್ ನಲ್ಲಿ ಬಂಧಿಸಿದ್ದರು ಪೊಲೀಸರು.

ಸಲ್ಮಾನ್ ಖಾನ್  ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು. ಈ ವೇಳೆ ಅನುಜ್ ಥಾಪಸ್  ಎಂಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಜ್ ಕುಟುಂಬ ಮುಂಬೈ ಹೈಕೋರ್ಟ್ ಮೆಟ್ಟಿಲು ಏರಿದ್ದರು. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ತಮ್ಮ ಮಗನು ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಆದರೆ, ಅವರು ಮಗನನ್ನು ಕೊಂದಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಣೆಯಲ್ಲಿನ ಸಿಸಿಟಿವಿ ವಿಡಿಯೋವನ್ನು ಒಪ್ಪಿಸುವಂತೆ ಮತ್ತು ಹೊಸದಾಗಿ ಮರಣೋತ್ತರ ಪರೀಕ್ಷೆಯನ್ನು ಮಾಡಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ. ಥಾಪನ್ ಠಾಣೆಯ ಪೊಲೀಸರ ಹಿಂಸೆಯಿಂದಾಗಿ ತಾವು ಮಗನನ್ನು ಕಳೆದುಕೊಂಡಿದ್ದೇವೆ ಎಂದಿದ್ದಾರೆ ಪೋಷಕರು.

 
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ