ಬೆಂಗಳೂರು: ಪ್ರತಿ ಬಾರಿ ಬಿಗ್ ಬಜೆಟ್ ಸಿನಿಮಾಗಳು ಬರುವಾಗಲೂ ದುಬಾರಿ ಟಿಕೆಟ್ ದರ ನಿಗದಿ ಮಾಡಲಾಗುತ್ತದೆ. ಅದರಲ್ಲೂ ಪರಭಾಷಾ ಸಿನಿಮಾಗಳು ಕರ್ನಾಟಕದಲ್ಲಿ ರಿಲೀಸ್ ಆಗುತ್ತವೆ ಎಂದರೆ ಟಿಕೆಟ್ ದರ 500ರಿಂದ ಆರಂಭ ಆಗಿ 1000 ರೂಪಾಯಿ ತಲುಪಿದ ಉದಾಹರಣೆ ಇದೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಏಕರೂಪ ಟಿಕೆಟ್ ದರ ಜಾರಿಗೆ ತರೋದಾಗಿ ಹೇಳಿತ್ತು. ಸೆಪ್ಟೆಂಬರ್ 12ರಿಂದ ಈ ನಿಯಮ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಇದಕ್ಕೆ ಕೆಲವು ಷರತ್ತುಗಳು ಕೂಡ ಇರಲಿವೆ.
ಮಲ್ಟಿಪ್ಲೆಕ್ಸ್ಗಳಲ್ಲಿ ಟಿಕೆಟ್ ದರಕ್ಕೆ ಕಡಿವಾಣವೇ ಇಲ್ಲದಂತೆ ಆಗಿತ್ತು. ಇದರಿಂದ ಜನಸಾಮಾನ್ಯರು ಸಿನಿಮಾ ನೋಡೋದು ಕಷ್ಟ ಎಂಬಂತಹ ಪರಿಸ್ಥಿತಿ ನಿರ್ಮಾಣ ಆಗಿತ್ತು. ಈ ಕಾರಣದಿಂದಲೇ ಜನರು ಥಿಯೇಟರ್ನತ್ತ ಮುಖ ಮಾಡುವುದಿಲ್ಲ ಎಂಬ ಮಾತುಗಳು ಕೂಡ ಕೇಳಿ ಬಂದವು. ಈಗ ಇದಕ್ಕೆ ಕಡಿವಾಣ ಬಿದ್ದಿದೆ. ಸರ್ಕಾರ ಇಂದು ಹೊಸ ಆದೇಶವನ್ನು ಹೊರಡಿಸಿದೆ.
ಹೊಸ ಆದೇಶವು ಇಂದಿನಿಂದಲೇ ಅನ್ವಯ ಆಗಲಿದೆ. ಇದರ ಪ್ರಕಾರ ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್ನಲ್ಲಿ ಟಿಕೆಟ್ನ ಮೂಲ ಬೆಲೆ 200 ರೂಪಾಯಿ ದಾಟುವಂತಿಲ್ಲ. ಶೇ.18 ತೆರಿಗೆಯೂ ಸೇರಿದರೆ ಸಿನಿಮಾದ ಟಿಕೆಟ್ ದರ 236 ರೂಪಾಯಿ ಆಗಲಿದೆ. ಇದು ಪ್ರೇಕ್ಷಕ ನಿಟ್ಟುಸಿರು ಬಿಡುವಂತೆ ಮಾಡಿದೆ.
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.