Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ಸ್ಪಂದನೆ

ನವದೆಹಲಿ: ವಾರಕರಿ ಸಂಪ್ರದಾಯದವರು ಫಂಡರಾಪುರ ವಾರಿ ಆಚರಣೆ ಹಿನ್ನೆಲೆಯಲ್ಲಿ ಫಂಡರಾಪುರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಯಶವಂತಪುರ -ಫಂಡರಾಪುರ ಎಕ್ಸ್‌ಪ್ರೆಸ್ ರೈಲನ್ನು (ಸಂಖ್ಯೆ-16541) ವಾರಕ್ಕೊಮ್ಮೆ ಬದಲಾಗಿ ಜೂನ್ 25ರಿಂದ ಜುಲೈ 30ರ ವರೆಗೆ ಪ್ರತಿ ನಿತ್ಯ ಸಂಚರಿಸುವಂತೆ ಮಾಡಬೇಕೆನ್ನುವ ಉತ್ತರ ಕನ್ನಡ ಲೋಕಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಡಿದ ಮನವಿಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಪಂದಿಸಿದ್ದಾರೆ.


ನವದೆಹಲಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಚಿವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದರು. ಜೂನ್ 25ರಿಂದ ಜುಲೈ 30ರ ವರೆಗೆ ರೈಲು ಪ್ರತಿ ದಿನ ಚಲಿಸಿದರೆ ಅಪಾರ ಸಂಖ್ಯೆಯ ಯಾತ್ರಾರ್ಥಿಗಳಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ಆದ್ದರಿಂದ ಈ ಮನವಿಯನ್ನು ಪರಿಗಣಿಸಿ ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ನಿತ್ಯ ನೀಡಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಅವರು ವಿನಂತಿಸಿದರು.


ತಕ್ಷಣ ಸ್ಪಂದಿಸಿದ ಸಚಿವ ಅಶ್ವಿನಿ ವೈಷ್ಣವ್, ಈ ಬಗ್ಗೆ ಕೂಡಲೆ ಪರಿಶೀಲಿಸಿ ನಿತ್ಯ ರೈಲು ಓಡಿಸಲು ಕ್ರಮ ಕೈಗೊಳ್ಳಲಾಗುವುದು. ಒಂದೊಮ್ಮೆ ಅದೇ ರೈಲನ್ನು ನಿತ್ಯ ಓಡಿಸಲು ಸಾಧ್ಯವಾಗದಿದ್ದಲ್ಲಿ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಸಚಿವರ ಈ ಭರವಸೆಯಿಂದಾಗಿ ಫಂಡರಾಪುರ ವಿಠ್ಠಲ ಭಕ್ತರಿಗೆ ಅನುಕೂಲವಾದಂತಾಗಿದೆ.


ನಿಟ್ಟೂರಿನ ರಮೇಶ್ ಎಸ್ ನಾರ್ವೇಕರ್ ಮತ್ತು ಖಾನಾಪುರದ ಶಾಂತಾರಾಮ ಗಂಗಾರಾಮ ಹೆಬ್ಬಾಳ್ಕರ್ ಅವರು, ಹುಬ್ಬಳ್ಳಿಯಿಂದ ಫಂಡರಾಪುರಕ್ಕೆ ರೈಲು ಸೇವೆಯ ಸಮಸ್ಯೆಯ ಕುರಿತು ವಾರಕರಿಯ ಸಂಪ್ರದಾಯದ ಜನರ ಪರವಾಗಿ ಕಾಗೇರಿಗೆ ಮನವಿ ಸಲ್ಲಿಸಿದ್ದರು.


ಈ ಹಿನ್ನೆಲೆಯಲ್ಲಿ ಕಾಗೇರಿ ಅವರು ಕೇಂದ್ರ ಸಚಿವರನ್ನು ಭೇಟಿಯಾಗಿ ಈ ಕುರಿತು ಮನವಿ ಮಾಡಿ, ರೈಲಿನ ಅಗತ್ಯತೆಯನ್ನು ಮನದಟ್ಟು ಮಾಡಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಧನ್ಯವಾದ ಸಲ್ಲಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ