Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಭಗೀರಥ ಮೂರ್ತಿಯ ಅನಾವರಣ ಹಾಗೂ ಉಪ್ಪಾರ ಸಮಾಜದವರಿಂದ ಸತ್ಕಾರ ಸಮಾರಂಭ

ಮೂಡಲಗಿ : ಆ. 5ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಸತ್ಯಭಾಮಾ ರುಕ್ಷ್ಮಿಣಿ ಬಾಳಪ್ಪ ಹಂದಿಗುಂದ ಕಲ್ಯಾಣ ಮಂಟಪದಲ್ಲಿ ಮಹರ್ಷಿ ಶ್ರೀ ಭಗೀರಥ ಮೂರ್ತಿಯ ಅನಾವರಣ ಹಾಗೂ ಉಪ್ಪಾರ ಸಮಾಜದವರಿಂದ ಸತ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಉಪ್ಪಾರ ಸಮಾಜದ ತಾಲೂಕಾ ಅಧ್ಯಕ್ಷ ರಾಮಣ್ಣಾ ಹಂದಿಗುಂದ ಹೇಳಿದರು.

ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹೊಸದುರ್ಗದ ಜಗದ್ಗುರು ಭಗೀರಥ ಚಿನ್ಮೂಲಾದ್ರಿ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು. ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಚಾಮರಾಜ ನಗರದ ಶಾಸಕ ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ, ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಭಾಗವಹಿಸುವರು. ಸಮಾರಂಭದಲ್ಲಿ ನೂತನ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ, ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಗುವುದು. ಸಮಾರಂಭಕ್ಕೆ ಸಮಾಜದ ಹಾಗೂ ವಿವಿಧ ಅನ್ಯ ಸಮಾಜದ ಮುಂಖಡರು, ಜಿಪಂ, ತಾಪಂ, ಪುರಸಭೆ, ಪಪಂ ಸದಸ್ಯರು ಆಗಮಿಸುವರು ಎಂದು ತಿಳಿಸಿದರು.

ನ್ಯಾಯವಾದಿ ಲಕ್ಷ್ಮಣ ಅಡಿಹುಡಿ ಮಾತನಾಡಿ ಗುಡ್ಡಮಡ್ಡಿ ವೀರಭದ್ರೇಶ್ವರ ಗುಡಿಯಿಂದ ಸಕಲ ವಾಧ್ಯ ಮೇಳದೊಂದಿಗೆ ನೂರಾರು ಮಹಿಳೆಯರ ಕುಂಭಮೇಳ ಮೂರ್ತಿಯ ಮೇರವಣಿಗೆ ಜರುವದು ನಂತರ ಮೂರ್ತಿ ಪ್ರತಿಷ್ಠಾಪಣೆ ಜರುಗಿ 11 ಗಂಟೆಗೆ ಸಾವಿರಾರು ಜನರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಈಶ್ವರ ಕಂಕಣವಾಡಿ, ಮಹಾದೇವ ಕಂಕಣವಾಡಿ, ಸುಭಾಸ ಗುಡ್ಯಾಗೋಳ, ಶಿವಪ್ಪ ಅಟ್ಟಿಮಟ್ಟಿ, ಅಜ್ಜಪ್ಪ ಕಂಕಣವಾಡಿ, ಮಹಾದೇವ ಕರಗಣ್ಣಿ ಬರಮಪ್ಪ ಕಪ್ಪಲಗುದ್ದಿ,ಅಲ್ಲಪ್ಪ ಕಂಕಣವಾಡಿ, ಯಲ್ಲಪ್ಪ ಖಾನಟ್ಟಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ