Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಯೋಗಾತ್ಮಕ ಸಂಶೋಧನೆಗಳಿಗೆ ತಂತ್ರಜ್ಞಾನ ಬಳಸಿರಿ: ಪ್ರೊ.ಎಂ.ಸಿ ಎರಿಸ್ವಾಮಿ





ಬಳ್ಳಾರಿ,ಮಾ.26
ಎಐ ಮತ್ತು ಮಷಿನ್ ಲರ್ನಿಂಗ್ ನಂತಹ ತಂತ್ರಜ್ಞಾನಗಳನ್ನು ಎಲ್ಲದಕ್ಕೂ ಬಳಕೆ ಮಾಡದೆ ಉತ್ತಮ ಸಾಮಾಜಿಕ ಸಂಶೋಧನೆಗಳು ಹೊರತರಲು ಪ್ರಯೋಗಾತ್ಮಕವಾಗಿ ಬಳಸಬೇಕು ಎಂದು ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಣ ನಿಕಾಯದ ಡೀನರು ಮತ್ತು ಪ್ರ‍್ರಾಧ್ಯಾಪಕರಾದ ಪ್ರೊ.ಎಂ.ಸಿ ಎರಿಸ್ವಾಮಿ ಅವರು ಅಭಿಪ್ರಾಯಪಟ್ಟರು.
ಇಲ್ಲಿನ ವಿವಿಯ ಡಾ.ಬಿ.ಆರ್ ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಶಿಕ್ಷಣ ಅಧ್ಯಯನ ವಿಭಾಗವು ಆಯೋಜಿಸಿದ್ದ ಒಂದು ದಿನದ “ಮುಂದಿನ ಪೀಳಿಗೆಯ ಉದಯೋನ್ಮುಖ ಸಂಶೋಧನಾ ಕೌಶಲ್ಯಗಳ ತಂತ್ರಜ್ಞಾನದೊAದಿಗೆ ಡೇಟಾ ವಿಶ್ಲೇಷಣೆ” ಎಂಬ ವಿಷಯ ಕುರಿತು ರಾಷ್ಟಿçÃಯ ಕಾರ್ಯಾಗಾರದ ಉದ್ಘಾಟನಾ ಭಾಷಣಕಾರರಾಗಿ ಭಾಗವಹಿಸಿ ಅವರು ಮಾತನಾಡಿದರು.
ಇಂದು ತಂತ್ರಜ್ಞಾನದ ಅತಿಯಾದ ಬಳಕೆಯಿಂದಾಗಿ ಅವುಗಳು ನಮ್ಮನ್ನು ಆವರಿಸಿಕೊಂಡಿವೆ. ಇದರಿಂದಾಗಿ ನಮ್ಮಲ್ಲಿರುವಂತ ವೈಚಾರಿಕ ಸ್ವಂತಿಕೆಯನ್ನು ಕಳೆದುಕೊಳ್ಳುತ್ತಿದ್ದೇವೆ ಎಂಬ ವಿಷಾದವಿದೆ. ಆದರೆ ಎಐ ನಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ಪರಿಣಾಮಕಾರಿ ಬೋಧನೆ ಸಾಧ್ಯವಾಗಿದೆ ಎಂದು ಹೇಳಿದರು.
ತಾಂತ್ರಿಕ ಕೌಶಲ್ಯಗಳಿಂದ ದತ್ತಾಂಶಗಳನ್ನು ಹೆÀಚ್ಚು ಕಲೆಹಾಕುವ ಮೂಲಕ ಸಂಶೋಧನೆಯಲ್ಲಿ ಒಳ್ಳೆಯ ಫಲಿತಾಂಶವನ್ನು ಪಡೆಯಬಹುದು. ಸಮೀಕ್ಷೆ, ಸಂಶೋಧನೆಯ ಅಂತರಗಳ ವಿಸ್ತರಣೆಯ ಮೂಲಕ ಸಾಮಾಜಿಕ ಸಂಬAಧಗಳನ್ನು ಸುಧಾರಿಸಲು ತಂತ್ರಜ್ಞಾನ ಆಧಾರಿತ ಅಧ್ಯಯನಗಳಿಂದ ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಪತಿ ಪ್ರೊ.ಎಂ.ಮುನಿರಾಜು ಅವರು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಶಿಕ್ಷಕನಿಗೆ ಸಮನಾಗಿ ಯಾವುದು ಇಲ್ಲ. ತಂತ್ರಜ್ಞಾನಗಳ ಬಳಕೆಯಿಂದಾಗಿ ತರಗತಿಗಳು ಇಂದು ಆಧುನಿಕ ಸ್ವರೂಪ ಪಡೆದುಕೊಂಡಿವೆ. ತಂತ್ರಜ್ಞಾನದ ಅತಿಯಾದ ಬಳಕೆಯಿಂದಾಗಿ ಸಂಬAಧಗಳಲ್ಲಿ ಸಾಮರಸ್ಯಗಳ ಕೊರತೆ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಷ್ಟಿçÃಯ ಕಾರ್ಯಾಗಾರದ ಸಂಚಾಲಕರಾದ ಡಾ.ಸುಷ್ಮಾ ಎನ್ ಜೋಗನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಯ ಕುಲಸಚಿವರಾದ ಪ್ರೊ.ಎನ್.ಎಂ ಸಾಲಿ, ಕೇಂದ್ರೀಯ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಡಾ.ಕೆ.ತಿಯಾಗು, ಆಂಧ್ರಪ್ರದೇಶದ ಪ್ರಾದೇಶಿಕ ಎನ್‌ಸಿಇಆರ್‌ಟಿ ಕೇಂದ್ರ ನೆಲ್ಲೂರಿನ ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶ ಬಡಿಗೇರ್, ಕಾರ್ಯಾಗಾರದ ಸಹ ಸಂಚಾಲಕರಾದ ಡಾ.ಗೋಪಾಲ್ ಎನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಒಂದು ದಿನದ ರಾಷ್ಟಿçÃಯ ಕಾರ್ಯಾಗಾರದಲ್ಲಿ ವಿವಿಧ ಬಿ.ಇಡಿ ಕಾಲೇಜುಗಳ ಅಧ್ಯಾಪಕರುಗಳು, ಸಂಶೋಧನಾರ್ಥಿಗಳು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಹಾಜರಿದ್ದರು. ಪಾಂಡುರAಗ ನಿರೂಪಿಸಿದರು. ವಿವಿಯ ಶಿಕ್ಷಣ ನಿಕಾಯದ ಡೀನರು ಮತ್ತು ವಿಭಾಗದ ಮುಖ್ಯಸ್ಥರಾದ ಡಾ ಸಾಹೇಬ್ ಅಲಿ ಹೆಚ್ ನಿರಗುಡಿ ಅತಿಥಿಗಳನ್ನು ಸ್ವಾಗತಿಸಿದರು. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ಪ್ರಶಾಂತ ಕುಮಾರ ಟಿ ಎಂ ವಂದಿಸಿದರು.
ವಿವಿಯ ಎಲ್ಲ ನಿಕಾಯದ ಡೀನರು, ಎಲ್ಲ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಜರಿದ್ದರು.






Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*