Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸ್ವತಂತ್ರವಾಗಿ ಪೊಲೀಸ್ ಮಹಾನಿರ್ದೇಶಕರ ನೇಮಕಕ್ಕೆ ಉತ್ತರ ಪ್ರದೇಶ ಸರ್ಕಾರ ನಿರ್ಧಾರ

ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆಗೆ ಮುನ್ನ ಆಡಳಿತಾತ್ಮಕ ವಿಷಯದಲ್ಲಿ ಮಹತ್ವದ ಬದಲಾವಣೆ ನಡೆದಿದೆ. ಕೇಂದ್ರ ಲೋಕಸೇವಾ ಆಯೋಗದ(ಯುಪಿಎಸ್‌ಸಿ) ಸಮಿತಿ ಪ್ರಕ್ರಿಯೆಯನ್ನು ಬೈಪಾಸ್​ ಮಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಸರ್ಕಾರ, ರಾಜ್ಯದ ಪೊಲೀಸ್ ಮಹಾನಿರ್ದೇಶಕರನ್ನು (ಡಿಜಿಪಿ) ಸ್ವತಂತ್ರವಾಗಿಯೇ ನೇಮಕ ಮಾಡುವ ನಿರ್ಧಾರ ತೆಗೆದುಕೊಂಡಿದೆ.


ಸೋಮವಾರ ನಡೆದ ಸಚಿವ ಸಂಪುಟ ಸಭೆ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿತು. ಇದರ ಪರಿಣಾಮವಾಗಿ ಉತ್ತರ ಪ್ರದೇಶ ಸರ್ಕಾರ ಇನ್ನು ಮುಂದೆ ಡಿಜಿಪಿಯನ್ನು ಸ್ವತಂತ್ರ್ಯವಾಗಿ ನೇಮಕ ಮಾಡಲಿದೆ.


ಡಿಜಿಪಿ ಆಯ್ಕೆಗೆ ಹೈಕೋರ್ಟ್​ನ ನಿವೃತ್ತ ನ್ಯಾಯಾಮೂರ್ತಿಗಳ ನೇತೃತ್ವದ ಸಮಿತಿಯನ್ನು ಯೋಗಿ ಸರ್ಕಾರ ರಚಿಸಿದೆ. ಈ ಸಮಿತಿಯಲ್ಲಿ ಮುಖ್ಯ ಕಾರ್ಯದರ್ಶಿ, ಯುಪಿಎಸ್​ಸಿ ನಾಮನಿರ್ದೇಶಿತ ಸದಸ್ಯರು, ಉತ್ತರ ಪ್ರದೇಶ ಲೋಕಸೇವಾ ಆಯೋಗದ ಅಧ್ಯಕ್ಷರು ಅಥವಾ ಅವರ ನಾಮನಿರ್ದೇಶಿತರು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಪ್ರಧಾನ ಕಾರ್ಯದರ್ಶಿ (ಗೃಹ) ಮತ್ತು ನಿವೃತ್ತ ಡಿಜಿಪಿ ಇರಲಿದ್ದಾರೆ.


ಈ ಬದಲಾವಣೆಯಲ್ಲಿ ಡಿಜಿಪಿ ಹುದ್ದೆಯ ಅವಧಿಯನ್ನು ಎರಡು ವರ್ಷಕ್ಕೆ ನಿಗದಿಪಡಿಸಲಾಗಿದೆ. ಪಂಜಾಬ್​ ಬಳಿಕ ಇದೀಗ ಉತ್ತರ ಪ್ರದೇಶ ಡಿಜಿಪಿ ನೇಮಕಾತಿಗೆ ತಮ್ಮದೇ ಆದ ವ್ಯವಸ್ಥೆಯನ್ನು ಜಾರಿಗೆ ತಂದ ಎರಡನೇ ರಾಜ್ಯವಾಗಿದೆ.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ