LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಚನ ಸಾಹಿತ್ಯ ಸರ್ವಕಾಲಿಕ ಸತ್ಯ ಸಂಗತಿಗಳನ್ನು ಪ್ರತಿಪಾದಿಸುತ್ತದೆ : ಶಿಕ್ಷಕ ವೀರಭದ್ರಯ್ಯ ಹಿರೇಮಠ

ಕೊಪ್ಪಳ:(ಡಿ.13) ವಚನ ಸಾಹಿತ್ಯದ ಅಧ್ಯಯನದಿಂದ ಸರ್ವರಲ್ಲೂ ಸಮಾನತೆ ಸೋದರತ್ವದಿಂದ ಬಾಳುವ ಶಕ್ತಿ-ಯುಕ್ತಿಯನ್ನ ತುಂಬುತ್ತವೆ. ಆ ಕಾರಣಕ್ಕಾಗಿ ಅಂದು, ಇಂದು, ಮುಂದೆಯೂ ಕೂಡಾ ವಚನ ಸಾಹಿತ್ಯ ಸರ್ವಕಾಲಿಕ ಸತ್ಯ ಸಂಗತಿಗಳನ್ನು ಪ್ರತಿಪಾದಿಸುತ್ತದೆ ಎಂದು ಕೊಪ್ಪಳ ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಶಾಲೆಯ ಶಿಕ್ಷಕರಾದ ವೀರಭದ್ರಯ್ಯ ಹಿರೇಮಠ ಹೇಳಿದರು.


ತಾಲೂಕಿನ ಯತ್ನಟ್ಟಿ ಗ್ರಾಮದ ಸರಕಾರಿ ಶಾಲೆಯಲ್ಲಿ ನಡೆದ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಶಾಲೆಗೊಂದು ವಚನ ವಾಚನ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.


ಹನ್ನೆರಡೆನೆಯ ಶತಮಾನದ ಶರಣ-ಶರಣೆಯರ ನಡೆ ನುಡಿಗಳು ಇಂದಿಗೂ ಪ್ರಸುತ್ತ, ಅವರ ತತ್ವ ಸಿದ್ದಾಂತಗಳನ್ನು ಮಕ್ಕಳು, ಯುವಕರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ನಿಮ್ಮ ಜೀವನ ಸಾರ್ಥವಾಗುತ್ತದೆ ಎಂದರು.


ಇನ್ನೋರ್ವ ಮುಖ್ಯ ಅತಿಥಿಗಳಾದ ಸಂಗೀತ ಕಲಾವಿದರಾದ ಶ್ರೀಮತಿ ಅನ್ನಪೂರ್ಣ ಮನ್ನಾಪೂರು ಮಾತನಾಡಿ, ಶರಣರು-ಶರಣಿಯರು ಈ ನಾಡಿನ ದೇಶದ ಬೆಲೆ ಕಟ್ಟಲಾಗದ ಬಹು ದೊಡ್ಡ ಆಸ್ತಿಯಾಗಿದ್ದಾರೆ. ನಾವು ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಹಾಲು ತೊರಗೆ ಬೆಲ್ಲದ ಕೆಸರು ಸಕ್ಕರೆಯ ಮಳ್ಳಲಿನಂತೆಯಾಗುತ್ತದೆ. ಮಕ್ಕಳು ಈ ನಾಡಿನ ದೊಡ್ಡ ಆಸ್ತಿಯಾಗಿ ಬೆಳೆಯಬೇಕು ಹಾಗಾಗಿ ವಚನ ಸಾಹಿತ್ಯವನ್ನು ಓದಿ ಪಚನ ಮಾಡಿಕೊಂಡು ಮುನ್ನ ನಡೆದರೆ ನಿಮ್ಮ ಭವಿಷ್ಯ ಉಜ್ಜಲವಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಜಿ.ಎಸ್. ಗೋನಾಳ ಹಾಗೂ ಶಿಕ್ಷಕರಾದ ಸಿದ್ದಪ್ಪ ಮೇಟಿ ಮಾತನಾಡಿದರು.


ಪ್ರಾಸ್ತವಿಕವಾಗಿ ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತಿನ ತಾಲೂಕು ಘಟಕದ ಅಧ್ಯಕ್ಷರಾದ ಮೈಲಾರಪ್ಪ ಉಂಕಿ ಮಾತನಾಡಿ, ನಮ್ಮ ಪರಿಷತ್ತಿನ ಉದ್ದೇಶ ಶಾಲೆಗೊಂದು ವಚನ ವಾಚನ ಕಾರ್ಯಕ್ರಮ ಮಾಡಿ ವಿದ್ಯಾರ್ಥಿಗಳಯಲ್ಲಿ ವಚನ ಸಾಹಿತ್ಯದಲ್ಲಿನ ಸಮಾನತೆಯ ತತ್ವ ಸಿದ್ದಾಂತಗಳನ್ನು ತಲುಪಿಸುವ ಕಾರ್ಯ ಮಾಡುತ್ತಿದ್ದು, ಇದರಿಂದ ಸಾರ್ವಜನಿಕರಿಂದ ಒಳ್ಳೆಯ ಪ್ರತಿಕ್ರಯೆ ವ್ಯಕ್ತವಾಗಿದೆ ಎಂದರು, ವಚನ ವಾಚನ ಸ್ಪರ್ದೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ಮೆಹಬೂಬು ನದಾಪ, ಭವಾನಿ ಕೆಂಚನಗೌಡ್ರ, ಧನ್ಯ ಮಂಗಳೂರು, ಖುಷಿ ಟಣಕನಕಲ್, ಸುಶ್ಮಿತಾ ಪೂಜಾರ, ರಾಜೇಶ್ವರಿ ಇವರಿಗೆ ಬಹುಮಾನ ವಿತರಿಸಲಾಯಿತು.  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೃತುಂಜಯ ಮಳಿಮಠ ವಹಿಸಿದ್ದರು. ಕಾರ್ಯಕ್ರಮವನ್ನು ಸಿದ್ದಪ್ಪ ಮೇಟಿ ನಿರೂಪಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್