LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಮೌಲ್ಯಾಧಾರಿತ ಶಿಕ್ಷಣಕ್ಕೆ ವಾಲ್ಮೀಕಿಯವರ ಆದರ್ಶಗಳು ಪ್ರೇರಣೆ-ಸಜ್ಜನ

ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ




ತಾಳಿಕೋಟೆ, ಮಿಣಜಗಿ ಕ್ರಾಸ್‌ನಲ್ಲಿರುವ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಭಕ್ತಿಭಾವದಿಂದ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.
       ಕಾರ್ಯಕ್ರಮದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಅರ್ಪಿಸಲಾಯಿತು.   
       ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಸ್.ಎಂ.ಸಜ್ಜನ ಅವರು ಮಾತನಾಡಿ ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಭಾರತೀಯ ಸಂಸ್ಕೃತಿ, ಸಾಹಿತ್ಯ, ನೈತಿಕ ಮೌಲ್ಯಗಳು ಹಾಗೂ ಮಾನವೀಯತೆಯ ಪ್ರತೀಕವಾಗಿದೆ. ಅವರ ಜೀವನ ಮತ್ತು ಆದರ್ಶಗಳು ಸಮಾಜಕ್ಕೆ ಸತ್ಯ, ಧರ್ಮ, ಸಮಾನತೆ, ಕರ್ತವ್ಯನಿಷ್ಠೆ ಹಾಗೂ ಸದಾಚಾರದ ಮಹತ್ವವನ್ನು ಸಾರುತ್ತವೆ ಶಿಕ್ಷಣ ಕ್ಷೇತ್ರದಲ್ಲಿ ಮೌಲ್ಯಾಧಾರಿತ ಶಿಕ್ಷಣದ ಮಹತ್ವವನ್ನು ಅರೀತುಕೊಂಡು ಸಾಗಬೇಕು ವಿದ್ಯಾರ್ಥಿಗಳು ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.
       ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ವಿವೇಕಾನಂದ ಸಜ್ಜನ್ ಅವರು, ವಿವಿಧ ವಿಭಾಗಗಳ ಪ್ರಾಂಶುಪಾಲರು, ಮುಖ್ಯಗುರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದು, ಮಹರ್ಷಿ ವಾಲ್ಮೀಕಿಯವರ ಜೀವನ, ಸಾಹಿತ್ಯಿಕ ಕೊಡುಗೆ ಮತ್ತು ಸಮಾಜಕ್ಕೆ ಅವರು ನೀಡಿದ ಸಂದೇಶವನ್ನು ಸ್ಮರಿಸಿದರು.
       ಕಾರ್ಯಕ್ರಮದಲ್ಲಿ ಸಂಸ್ಥೆಯ ವಿವಿಧ ವಿಭಾಗಗಳ ಸಿಬ್ಬಂದಿ ಭಾಗವಹಿಸಿ ಆದಿಕವಿ ಮಹರ್ಷಿ ವಾಲ್ಮೀಕಿಯವರಿಗೆ ಗೌರವ ನಮನ ಸಲ್ಲಿಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಮೌಲ್ಯಾಧಾರಿತ ಶಿಕ್ಷಣಕ್ಕೆ ವಾಲ್ಮೀಕಿಯವರ ಆದರ್ಶಗಳು ಪ್ರೇರಣೆ-ಸಜ್ಜನಶ್ರೀಕೃಷ್ಣನ ಚರಿತ್ರೆ ಆಲಿಸುವುದು ಅಮೃತಪಾನಕ್ಕೆ ಸಮಾನ: ಪಂಡಿತ ಅನಂತಾಚಾರ್ಯ ಅಕಮಂಚಿಇಂಡಿ: ಮಹರ್ಷಿ ವಾಲ್ಮೀಕಿಯವರ ತತ್ವಾದರ್ಶಗಳು ಪ್ರತಿಯೊಬ್ಬರಿಗೂ ಮಾದರಿ – ತಹಶೀಲ್ದಾರ್ ನಾಗೇಂದ್ರ ಕೊಳಶೆಟ್ಟಿಇಂಡಿ: ಅಧಿಕಾರಿಗಳು ಸರಿಯಾಗಿ ಸ್ಪಂದಿಸದಿದ್ದರೆ ವರ್ಗಾವಣೆ ಎಚ್ಚರಿಕೆ ನೀಡಿದ ಶಾಸಕ ಯಶವಂತರಾಯಗೌಡ ಪಾಟೀಲ  ವಾಲ್ಮೀಕಿ ಜಯಂತಿ ಕಾರ್ಯಕ್ರಮ / ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ ಅಭಿಮತ  ಪ್ರಾಯೋಗಿಕ ಅನುಭವ ನೀಡುವ ಶಿಕ್ಷಣದ ಅವಶ್ಯಕತೆ ಇದೆ: ಡಾ. ಸಾಗರ್ ದೇಶಪಾಂಡೆರಾಮಾಯಣ ಜೀವನದ ಮೌಲ್ಯ ತಿಳಿಸುವ ಮಹಾನ್ ಗ್ರಂಥ: ವಿದ್ಯಾಶಂಕರ್ ಕಾಗವಾಡ್: ಶಿರಗುಪ್ಪಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಎಸ್‌ಸಿ ಸಮುದಾಯದ ಕಾರ್ಮಿಕರಿಂದ ನಿರಂತರ ಸತ್ಯಾಗ್ರಹಕಾಗವಾಡ: ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಬದುಕಿನ ಮೌಲ್ಯ ಸಾರಿದ ಮಹರ್ಷಿ ವಾಲ್ಮೀಕಿ