Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಭಾರತ ಹಿನ್ನೆಲೆಯಲ್ಲಿ ಭಾನುವಾರ ವಿವಿಧ ಕಾರ್ಯಕ್ರಮ

ಬೆಳಗಾವಿ:: ರಂಗಸೃಷ್ಟಿ ಸಾಂಸ್ಕೃತಿಕ ಸಂಘಟನೆ ಬೆಳಗಾವಿ ಹಾಗೂ ಬೆಂಗಳೂರಿನ ಭಾಗವತರು ಸಾಂಸ್ಕೃತಿಕ ಸಂಘಟನೆ  ಇವರ ಸಂಯುಕ್ತ ಆಶ್ರಯದಲ್ಲಿ  ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮವು ನಗರದ ಕನ್ನಡ ಭವನದಲ್ಲಿ ಡಿ. ೨೨ (ರವಿವಾರ) ರಂದು ಬೆಳಗ್ಗೆ ೧೦ ಗಂಟೆಯಿಂದ ಸಂಜೆ ೫ ವರೆಗೆ ನಡೆಯಲಿದೆ.


        ಅಂದು ಕಾನೂನು ಮತ್ತು ಪ್ರವಾಸೋಧ್ಯಮ ಸಚಿವರಾದ ಎಚ್.ಕೆ.ಪಾಟೀಲ ಅವರು ಬೆಳಿಗ್ಗೆ ೧೦ ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಸಚೇತಕರು, ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಮಹಾಂತೇಶ ಕವಟಗಿಮಠ ಅವರು ಆಗಮಿಸಲಿದ್ದು, ಕಾರ‍್ಯಕ್ರಮ ಅಧ್ಯಕ್ಷತೆಯನ್ನು ನಿವೃತ್ತ ಅಧೀಕ್ಷಕ ಅಭಿಯಂತರಾದ ರಮೇಶ ಜಂಗ ಅವರು ವಹಿಸಲಿದ್ದು, ಕೆ.ರೇವಣ್ಣ ಉಪಸ್ಥಿತರಿರುವರು. ಭಾಗವತರು ಪ್ರಕಾಶನಗೊಳಿಸಿದ ಡಾ.ರಾಮಕೃಷ್ಣ ಮರಾಠೆ ಅವರು ಬರೆದ ರಂಗಭೂಮಿಯ ಸ್ವಾತಂತ್ರ್ಯ ಸಂಗ್ರಾಮ ಕೃತಿಯನ್ನು ಸಾಹಿತಿಗಳಾದ ಡಾ.ಸರಜೂ ಕಾಟ್ಕರ್ ಬಿಡುಗಡೆಗೊಳಿಸುವರು. ಈ ಕಾರ‍್ಯಕ್ರಮದ ಸಾನಿಧ್ಯವನ್ನು ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಪೂಜ್ಯ ಡಾ.ಅಲ್ಲಮಪ್ರಭು ಸ್ವಾಮಿಜಿ ಅವರು ವಹಿಸುವರು.


ಅಂದು ಮಧ್ಯಾಹ್ನ ೧೨ ಗಂಟೆಗೆ ವಿಚಾರ ಸಂಕಿರಣ ನಡೆಯಲಿದ್ದು  ಬೆಳಗಾವಿ ಅಧಿವೇಶನ ಮತ್ತು ಗಾಂಧೀಜಿ  ವಿಷಯವಾಗಿ ಡಾ.ಪಿ.ಜಿ ಕೆಂಪಣ್ಣವರ ಹಾಗೂ ಕನ್ನಡ ರಂಗಭೂಮಿಯಲ್ಲಿ ಗಾಂಧೀಜಿ ವಿಷಯವಾಗಿ ಧಾರವಾಡ ರಂಗಕರ್ಮಿಗಳಾದ ಡಾ. ಪ್ರಕಾಶ ಗರುಡ ಇವರುಗಳು ಮಾತನಾಡಲಿರುವರು. ಪ್ರಗತಿವಾಹಿನಿಯ ಎಂ.ಕೆ.ಹೆಗಡೆ ಇವರು ಪ್ರತಿಕ್ರಿಯೆ ನೀಡಲಿರುವರು. ಈ ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಜಗಜಂಪಿ ವಹಿಸುವರು


ಮದ್ಯಾಹ್ನ ೨.೩೦ ಗಂಟೆಗೆ ಸಾಹಿತಿಗಳಾದ ಬಿ.ಎಸ್ ಗವಿಮಠ ಅವರ ಅಧ್ಯಕ್ಷತೆಯಲ್ಲಿ ರಂಗಗೌರವ ಮತ್ತು ಸಮಾರೋಪ ಕಾರ‍್ಯಕ್ರಮ ಜರುಗಲಿದ್ದು, ಅಥಿತಿಗಳಾಗಿ ವಿಶ್ವಜ್ಯೋತಿ ನಾಟಕ ಮಂಡಳಿಯ ಮಾಲೀಕರಾದ ರಾಜಣ್ಣ ಜೇವರಗಿ, ಸಾಹಿತಿಗಳಾದ ರವಿ ಕೋಟಾರಗಸ್ತಿ, ಬೆಂಗಳೂರು ರಂಗಕರ್ಮಿ ಮತ್ತು ಪ್ರಕಾಶಕರಾದ ಬಿ.ಎಸ್ ವಿದ್ಯಾರಣ್ಯ, ಭಾಗವತರು ಸಂಘಟನೆ ಉಪಾಧ್ಯಕ್ಷರಾದ ಹೆಚ್.ಬಿ. ಚಂದ್ರೇಗೌಡ ಅವರು ಉಪಸ್ಥಿತರಿರುವರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ