LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ವರುಣನ ಆರ್ಭಟ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಆರಂಭವಾಗಿದೆ, ಕಳೆದ ಎರಡು ತಿಂಗಳಿನಿಂದ ಇದ್ದ ಬಿಸಿಲಿನ ಅಬ್ಬರ ಇಳಿದಿದೆ. ಬೆಂಗಳೂರಿನಲ್ಲಿ ಗುರುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಬೆಳಗ್ಗೆ ಕೂಡ ಜಿಟಿ ಜಿಟಿ ಮಳೆ ಇದೆ. ಹಾಗೆಯೇ ಬೆಳಗಾವಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಹಲವೆಡೆ ಇಂದು ಭಾರಿ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಲಬುರಗಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಮಾಗಡಿ, ಮಂಠಾಳ, ರಾಯಲ್ಪಾಡು, ಮಧುಗಿರಿ, ಅಜ್ಜಂಪುರ, ಮಾಣಿ, ಮಂಕಿ, ಚನ್ನರಾಯಪಟ್ಟಣ, ಅಂಕೋಲಾ, ಶಾಹಪುರ, ಬಾಳೆಹೊನ್ನೂರು, ಶ್ರವಣಬೆಳಗೊಳ, ತುಮಕೂರು, ತೊಂಡೇಭಾವಿ, ಕಾರವಾರ, ಶಿವಮೊಗ್ಗ, ಬನವಾಸಿ, ಕೋಟ, ಕುಂದಾಪುರ, ಮುಲ್ಕಿ, ಖಜೂರಿ, ಅಥಣಿ, ಬಾದಾಮಿ, ಧಾರವಾಡ, ಮಹಾಲಿಂಗಪುರ, ಬೀದರ್, ಬಾದಾಮಿ, ಧಾರವಾಡ, ಬಿಳಗಿ, ಹಾವೇರಿ, ಕೂಡಲಸಂಗಮ, ಬೇಲೂರು, ದಾವಣಗೆರೆ, ಗುಬ್ಬಿ, ದೊಡ್ಡಬಳ್ಳಾಪುರ, ಹೆಸರಘಟ್ಟದಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಎಚ್​ಎಎಲ್​ನಲ್ಲಿ 30.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 34.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 32.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 32.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್