Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುವ್ರತ ಕ್ರಿಯೇಟಿವಿಟಿ ಸ್ಪರ್ಧೆ ೨೦೨೫: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಾಸವಿ ಶಾಲೆಯ ವಿದ್ಯಾರ್ಥಿಗಳು





ಬಳ್ಳಾರಿ,ಜು.22.. ಅನುವ್ರತ ಕ್ರಿಯೇಟಿವಿಟಿ ಸ್ಪರ್ಧೆ ೨೦೨೫ ಜುಲೈ ೨ ರಂದು ಶ್ರೀ ವಾಸವಿ ವಿದ್ಯಾಲಯದಲ್ಲಿ ನಡೆದಿದ್ದು,ಈ ಸ್ಪರ್ಧೆಯಲ್ಲಿ ನಮ್ಮ ಶಾಲೆಯ ೫ನೇ ತರಗತಿಯಿಂದ ೧೦ನೇ ತರಗತಿ  ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು ಮತ್ತು  ಬಹುಮಾನಗಳನ್ನು ಪಡೆದು ನಮ್ಮ ಶಾಲೆಗೆ ಗೌರವ ತಂದಿದ್ದಾರೆ.


ಈ ಕಾರ್ಯಕ್ರಮದ ಅಂಗವಾಗಿ ಭಾಷಣ, ಹಾಡುಗಾರಿಕೆ, ಕವನ ರಚನೆ, ಚಿತ್ರ ರಚನೆ, ಪ್ರಬಂಧ ಬರವಣಿಗೆ ಸೇರಿದಂತೆ ಹಲವು ಸ್ಪರ್ಧೆಗಳು ಆಯೋಜಿಸಲ್ಪಟ್ಟಿದ್ದವು.

ನಮ್ಮ ಶಾಲೆಯ ೫ನೇ ತರಗತಿಯಿಂದ ೧೦ನೇ ತರಗತಿಯ ೧೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ, ಹಲವು ವಿದ್ಯಾರ್ಥಿಗಳು ಬಹುಮಾನಗಳನ್ನು ಗೆದ್ದಿದ್ದು ಮತ್ತು ಕೆಲವು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇದು ನಮ್ಮ ಶಾಲೆಗೆ ಹೆಮ್ಮೆಯ ಕ್ಷಣವಾಗಿದ್ದು, ವಿದ್ಯಾರ್ಥಿಗಳ ಸಾಧನೆಯನ್ನು ಎಲ್ಲರೂ ಶ್ಲಾಘಿಸಿದ್ದಾರೆ.

 ಅನುವ್ರತ ಕ್ರಿಯೇಟಿವಿಟಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಯೋಜಕರಿಂದ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಅವರ ಸಾಧನೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು. ವಿಜೇತರ ಸಾಧನೆ ಶಾಲೆಗೆ ಗೌರವ ತಂದಿದ್ದು, ಶಾಲೆಯ ಎಲ್ಲಾ ಸಿಬ್ಬಂದಿ ಹಾಗೂ ಪಾಲಕರು ಸಂತೋಷ ವ್ಯಕ್ತಪಡಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಶ್ರೀವಾಸವಿ ಎಜ್ಯುಕೇಷನ್ ಟ್ರಸ್ಟ್ನ ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್, ಅನುವ್ರತ್ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಪಾರಸ್ಮಲ್,ಉಪಾಧ್ಯಾಕ್ಷರಾದ ಮಂಗಲ್ ಚಂದ್, ಸಂಯೋಜಕರಾದ  ವಿನೋದ್ ಜೈನ್,  ಚಾರ್ಟರ್ಡ್ ಅಕೌಂಟೆAಟ್ ರಾದ ಕೋಮಾಲ್, ಶ್ರೀಕರಣ್, ಶಾಲಾ ಮುಖ್ಯೋಪಾಧ್ಯಾರಾದ ವೀರೇಶ್. ಯು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೋಂಡಿದ್ದರು.

ಶ್ರೀವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪಿ.ಎನ್. ಸುರೇಶ್ ರವರು ವಿಜೇತ ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆ ಸಲ್ಲಿಸಿ, ಅವರ ಭವಿಷ್ಯವೂ ಯಶಸ್ವಿಯಾಗಿ ಬೆಳೆಯಲಿ,ನಮ್ಮ ಮಕ್ಕಳಿಗೆ ಈ ವೇದಿಕೆ ಕಲೆಯ ಮೂಲಕ ತಮ್ಮ ಪ್ರತಿಭೆಯನ್ನು ಹೊರಹೊಮ್ಮಿಸಿಕೊಳ್ಳಲು ಸಹಾಯಮಾಡಿದ್ದು ಅತ್ಯಂತ ಶ್ಲಾಘನೀಯ.  ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮುಖ್ಯಪಾತ್ರ ವಹಿಸುತ್ತವೆ ಎಂದು ಸಂತೋಷ ವ್ಯಕ್ತಪಡಿಸಿದರು.






Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ