ಕೊಪ್ಪಳ, ಅಕ್ಟೋಬರ್ 23, : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 23ರಂದು ವೀರಮಾತೆ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಈಶಾನ್ಯ ಕರ್ನಾಟಕ ಶಿಕ್ಷಕರ ಮತಕ್ಷೇತ್ರದ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಮಾಜದ ಬಂಧುಗಳ ಜೊತೆಯಲ್ಲಿ ವೀರಮಾತೆ ಕಿತ್ತೂರ ರಾಣಿ ಚೆನ್ನಮ್ಮನ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿ, ವಿವಿದ ಇಲಾಖೆಗಳ ಅಧಿಕಾರಿ, ಸಿಬ್ಬಂದಿ ಹಾಗೂ ಸಮಾಜದ ಮುಖಂಡರಾದ ಕರಿಯಪ್ಪ, ಶರಣಪ್ಪ, ಬಸವರಾಜ, ಗವಿಸಿದ್ದಪ್ಪ, ವೀರೇಶ, ಫಕ್ಕೀರಗೌಡ, ಶಿವಕುಮಾರ, ದೇವರಾಜ ಹಾಲಸಮುದ್ರ, ಮಂಜುನಾಥ ಬೆಲ್ಲದ ಹಾಗೂ ಇನ್ನಿತರು ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.