LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಗುರಜಾತ್‌ನಲ್ಲಿ ಸೇತುವೆ ಕುಸಿತು ನದಿಗೆ ಬಿದ್ದ ವಾಹನಗಳು; 9 ಸಾವು, ಹಲವು ವಾಹನಗಳು ಜಖಂ

ವಡೋದರಾ(ಗುಜರಾತ್​): ಇಂದು ಬೆಳಗ್ಗೆ ಗುಜರಾತ್​ನ ವಡೋದರಾ ಜಿಲ್ಲೆಯಲ್ಲಿ 40 ವರ್ಷಗಳಷ್ಟು ಹಳೆಯದಾದ ಸೇತುವೆಯ ಒಂದು ಭಾಗ ಕುಸಿದು ಹಲವಾರು ವಾಹನಗಳು ನದಿಗೆ ಬಿದ್ದಿವೆ. ಈ ಘಟನೆಯಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ.


ವಾಹನಗಳು ಸಂಚರಿಸುತ್ತಿದ್ದಾಗಲೇ ದಿಢೀರ್​ ಎಂದು ಕುಸಿದ ಸೇತುವೆ: ಬೆಳಗ್ಗೆ 7:30ರ ಸುಮಾರಿಗೆ 'ಗಂಭೀರಾ ಸೇತುವೆ'ಯ ಸ್ಲ್ಯಾಬ್ಬ್​ ಕುಸಿದಿದೆ. ಪರಿಣಾಮ ಈ ಬ್ರಿಡ್ಜ್​ ಮೇಲೆ ಸಂಚರಿಸುತ್ತಿದ್ದ ಎರಡು ಟ್ರಕ್‌, ವ್ಯಾನ್‌ಗಳು ಸೇರಿದಂತೆ ಐದರಿಂದ ಆರು ವಾಹನಗಳು ಮಹಿಸಾಗರ್ ನದಿಗೆ ಬಿದ್ದಿವೆ. ಘಟನೆಯಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಈಟಿವಿ ಭಾರತ್‌ಗೆ ತಿಳಿಸಿದ್ದಾರೆ.


ಮುಕ್ಕಾಲು ಕಿಮೀಗಿಂತಲೂ ಹೆಚ್ಚು ಉದ್ದದ ಸೇತುವೆ: 1986ರಲ್ಲಿ ನಿರ್ಮಿಸಲಾದ ಗಂಭೀರಾ ಸೇತುವೆಯು ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಪ್ರದೇಶಗಳನ್ನು ಸಂಪರ್ಕಿಸುತ್ತದೆ. 832 ಮೀಟರ್ ಉದ್ದ ಮತ್ತು 7.5 ಮೀಟರ್ ಅಗಲವಿರುವ ಈ ಸೇತುವೆಗೆ 23 ಪಿಲ್ಲರ್​​ಗಳಿವೆ. ಒಂದು ತುದಿಯಲ್ಲಿ ವಡೋದರಾ ಜಿಲ್ಲೆ ಮತ್ತು ಇನ್ನೊಂದು ತುದಿಯಲ್ಲಿ ಆನಂದ್ ಜಿಲ್ಲೆಗಳಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್