LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಚಿತ್ರ ಕಾಲಾಪತ್ಥರ್ 

     ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ 'ಕಾಲಾಪತ್ಥರ್' ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.


          ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ ಎಸ್ ವಾಸು 'ಕಾಲಾಪತ್ಥರ್' ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು. ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ ಮಾತನಾಡಿ "ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ನೀಡುತ್ತಿರುವ ಪ್ರೋತ್ಸಾಹಕ್ಕೆ ನಾವು ಆಭಾರಿ. ಈಗ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇನ್ನು ಮುಂದೆ ನಿಮ್ಮ ಪ್ರೋತ್ಸಾಹ ಹೆಚ್ಚು ಬೇಕು" ಎಂದರು.


     "ನನ್ನದು ಈ ಚಿತ್ರದಲ್ಲಿ ಶಿಕ್ಷಕಿಯ ಪಾತ್ರ. ಗಂಗ ನನ್ನ ಪಾತ್ರದ ಹೆಸರು. ನನ್ನ ಪಾತ್ರ ಹಾಗೂ ಚಿತ್ರ ಎರಡು ಚೆನ್ನಾಗಿದೆ. ನನಗೆ ಈಗಷ್ಟೇ ವಿಕ್ಕಿ ಅವರು ಚಿತ್ರದ ತುಣುಕು ತೋರಿಸಿದ್ದರು. ಅದನ್ನು ನೋಡಿದ ಮೇಲೆ ನಾನಂತೂ ಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದೇನೆ" ಎಂದರು ನಾಯಕಿ ಧನ್ಯ ರಾಮಕುಮಾರ್.


 "ನಾನು ಕನ್ನಡ ಚಿತ್ರರಂಗಕ್ಕೆ ಬಂದು ಹದಿನೈದು ವರ್ಷಗಳಾಯಿತು. ಸೆಪ್ಟೆಂಬರ್ ಗೆ ಸೂರಿ ಅವರ ನಿರ್ದೇಶನದಲ್ಲಿ ನಾನು ನಾಯಕನಾಗಿ ನಟಿಸಿದ್ದ 'ಕೆಂಡಸಂಪಿಗೆ' ಚಿತ್ರ ತೆರೆಕಂಡು ಒಂಭತ್ತು ವರ್ಷಗಳಾಗುತ್ತಿದೆ.


ನಾನು ನಿರ್ದೇಶಿಸಿ, ನಾಯಕನಾಗೂ ನಟಿಸಿರುವ 'ಕಾಲಾಪತ್ಥರ್' ಚಿತ್ರ ಕೂಡ ಸೆಪ್ಟೆಂಬರ್ ನಲ್ಲೇ ಬಿಡುಗಡೆಯಾಗುತ್ತಿರುವುದು  ಖುಷಿಯಾಗಿದೆ. 'ಕಾಲಾಪತ್ಥರ್',  ಕಪ್ಪುಕಲ್ಲಿಗೆ ಸಂಬಂಧಿಸಿದ ಕಥೆ. ಸತ್ಯಪ್ರಕಾಶ್ ಅವರು ಕಥೆ ಬರೆದಿದ್ದಾರೆ. ವಿಜಾಪುರದ ಬಳಿ ಹೆಚ್ಚು ಚಿತ್ರೀಕರಣವಾಗಿದೆ.


ಆಲಮಟ್ಟಿಯ ಹಿನ್ನೀರಿನ ಜೈನಾಪುರ ಎಂಬ ಸ್ಥಳದಲ್ಲಿ ಚಿತ್ರೀಕರಣ ನಡೆದಿದ್ದು, ನಮ್ಮ ಚಿತ್ರದ ಚಿತ್ರೀಕರಣವಾಗಿ ಕೆಲವೇ ತಿಂಗಳಲ್ಲೇ ಈ ಹಳ್ಳಿ ನೀರಿನಲ್ಲಿ ಮುಳುಗಡೆಯಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ" ಎಂದರು ನಿರ್ದೇಶಕ ಹಾಗೂ ನಾಯಕ ವಿಕ್ಕಿ ವರುಣ್‌.  ಛಾಯಾಗ್ರಾಹಕ ಸಂದೀಪ್  ಉಪಸ್ಥಿತರಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್