Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸುಮಲತಾಗೆ ಬಿಜೆಪಿಯಿಂದ ವಿಧಾನ ಪರಿಷತ್‌ ಟಿಕೆಟ್ ಫಿಕ್ಸ್!?

ಬೆಂಗಳೂರು: ಜೂನ್‌ 3ರಂದು ‌ವಿಧಾನಸಬೆಯಿಂದ  ವಿಧಾನ ಪರಿಷತ್‌ಗೆ  ನಡೆಯಲಿರುವ ಚುನಾವಣೆಗೆ ಬಿಜೆಪಿಯಿಂದ  ಅಭ್ಯರ್ಥಿಗಳನ್ನು ಹೈಕಮಾಂಡ್‌ ಈಗಾಗಲೇ ಅಂತಿಮಗೊಳಿಸಿದ್ದು, ಇದರಲ್ಲಿ ಸುಮಲತಾ ಅಂಬರೀಶ್‌


ಬಿಜೆಪಿಯಿಂದ ಮೂವರಿಗೆ ಟಿಕೆಟ್ ಫೈನಲ್ ಆಗಿದ್ದು, ಇಂದು ಸಂಜೆ ಅಧಿಕೃತ ಘೋಷಣೆ ಆಗಲಿದೆ ಎಂದು ತಿಳಿದುಬಂದಿದೆ. ಸಂಸದೆ ಸುಮಲತಾ ಅಂಬರೀಶ್, ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ಎಂ. ನಾಗರಾಜು ಅವರಿಗೆ ಪರಿಷತ್ ಟಿಕೆಟ್ ಬಹುತೇಕ ಫಿಕ್ಸ್ ಆಗಿದೆ. ಇಂದು ಸಂಜೆ ಈ ವಿಚಾರವನ್ನು ಹೈಕಮಾಂಡ್‌ ಘೋಷಿಸಲಿದೆ ಎಂದು ಹೇಳಲಾಗಿದೆ.


ಸಂಪ್ರದಾಯದ ಅನುಸಾರ ರಾಜ್ಯ ಕೋರ್‌ ಕಮಿಟಿಯಲ್ಲಿ ಚರ್ಚಿಸಿದ ಹೆಸರುಗಳನ್ನು ಒಳಗೊಂಡ ಪಟ್ಟಿಯನ್ನು ರವಾನಿಸುವಂತೆ ಬಿಜೆಪಿ ಹೈಕಮಾಂಡ್‌ ಸೂಚಿಸಿತ್ತು. ಅದರಂತೆ ರಾಜ್ಯ ಘಟಕ ನಡೆದುಕೊಂಡಿದೆ. ವರಿಷ್ಠರ ಮುಂದಿನ ನಿರ್ಧಾರಕ್ಕಾಗಿ ಎದುರು ನೋಡಲಾಗುತ್ತಿದೆ. ಬಿಜೆಪಿ ವರಿಷ್ಠರು ಕೂಡ ಲೋಕಸಭೆ ಚುನಾವಣೆಯಲ್ಲಿ ವ್ಯಸ್ತರಾಗಿದ್ದ ಕಾರಣ ಜೂನ್‌ 1ರ ಬಳಿಕವೇ ಎಂಎಲ್ಸಿ ಪಟ್ಟಿ ಅಂತಿಮಗೊಳಿಸುವುದಾಗಿ ಹೇಳಿದ್ದರು. ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆಗೊಳಿಸಲು ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 3 ಕಡೆಯ ದಿನವಾಗಿದೆ.

ಮಂಡ್ಯ ಸಂಸದೆಯಾಗಿರುವ ಸುಮಲತಾ ಅಂಬರೀಶ್‌ ಅವರನ್ನು ಪ್ರಮುಖವಾಗಿ ಪರಿಗಣಿಸಲಾಗಿದೆ. ಮಂಡ್ಯದಲ್ಲಿ ಸಂಸತ್‌ ಸದಸ್ಯ ಸ್ಥಾನವನ್ನು ತ್ಯಾಗ ಮಾಡಿರುವ ಅವರ ನಡೆಯನ್ನು ಪರಿಗಣಿಸಲಾಗಿದೆ. ಈ ಸಲ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡ, ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿತ್ತು. ಮಂಡ್ಯವನ್ನು ಎಚ್‌.ಡಿ ಕುಮಾರಸ್ವಾಮಿ ತಮ್ಮ ಅದೃಷ್ಟ ಪರೀಕ್ಷೆಗೆ ಆಯ್ದುಕೊಂಡಿದ್ದರು.


ಇದರಿಂದ ಸುಮಲತಾ ಅಸಮಾಧಾನಕ್ಕೆ ಒಳಗಾಗಿದ್ದರು. ಈ ಬಗ್ಗೆ ಅಮಿತ್‌ ಶಾ ಜೊತೆಗೂ ಮಾತನಾಡಿದ್ದರು. ಮುಂದೆ ಸೂಕ್ತ ಸ್ಥಾನಮಾನವನ್ನು ನೀಡುವುದಾಗಿ ಅಮಿತ್‌ ಶಾ, ಸುಮಲತಾ ಅವರಿಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ, ಸಂಸದೆ ಸುಮ್ಮನಾಗಿದ್ದರು. ಆದರೆ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗದೆ ಸುಮ್ಮನುಳಿದಿದ್ದರು. ಸುಮಲತಾ ಅವರ ತ್ಯಾಗವನ್ನು ಪರಿಗಣಿಸಿರುವ ಹೈಕಮಾಂಡ್‌ ಇದೀಗ ಸೂಕ್ತ ಸ್ಥಾನ ನೀಡಲು ಮುಂದಾಗಿದೆ.

ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಹಾಗೂ ದಕ್ಷಿಣ ಕನ್ನಡದ ಸಂಸದರಾಗಿದ್ದ ನಳಿನ್‌ ಕುಮಾರ್‌ ಕಟೀಲ್, ಬೆಂಗಳೂರು ಉತ್ತರ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರಿಗೂ ಟಿಕೆಟ್‌ ಕೈತಪ್ಪಿತ್ತು. ಇವರಿಗೂ ವಿಧಾನ ಪರಿಷತ್‌ ಟಿಕೆಟ್‌ ದೊರೆಯಬಹುದು ಎನ್ನಲಾಗಿತ್ತು. ಆದರೆ ಹೈಕಮಾಂಡ್‌ ಇವರನ್ನು ಪರಿಗಣಿಸಿಲ್ಲ.


ಕರ್ನಾಟಕದಲ್ಲಿ ಎರಡು ಹಂತಗಳ ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎರಡೂ ಪಕ್ಷಗಳಲ್ಲಿ ಅಸಮಾಧಾನ ತೀವ್ರವಾಗಿದೆ. ಆದರೆ ಕೇಂದ್ರದಲ್ಲಿನ ಉಭಯ ಪಕ್ಷಗಳು ಈಗ ಈ ಬಗ್ಗೆ ಗಮನ ಹರಿಸುವಷ್ಟು ಬಿಡುವಾಗಿಲ್ಲ. ಲೋಕಸಭೆ ಚುನಾವಣೆ ಮುಗಿದ ಬಳಿಕ ನೋಡೋಣ ಎಂದು ರಾಜ್ಯ ನಾಯಕರಿಗೆ ತಿಳಿಸಿದ್ದಾರೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ